AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂದಾಲ್​ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

HD Kumaraswamy Tweet: ಜಿಂದಾಲ್ ಮುಂದೆ ರಾಜ್ಯ ಬಿಜೆಪಿ ಸರ್ಕಾರ ಮಂಡಿಯೂರಿದೆ. ಏಕಾಏಕಿ ಮಂಡಿಯೂರುವುದಕ್ಕೆ ಒಂದು ಕಾರಣವೂ ಇದೆ. ಆ ಕಾರಣವೇನೆಂದು ಸಿಎಂ ಯಡಿಯೂರಪ್ಪಗೆ ಚೆನ್ನಾಗಿ ಗೊತ್ತಿದೆ. ಆ ಕಾರಣವನ್ನು ಸಿಎಂ ಯಡಿಯೂರಪ್ಪ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಿಗೂಢವಾಗಿ ಟ್ವೀಟ್​ ಮೂಲಕ ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ್ದಾರೆ.

ಜಿಂದಾಲ್​ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ
ಹೆಚ್.ಡಿ.ಕುಮಾಸ್ವಾಮಿ
ಸಾಧು ಶ್ರೀನಾಥ್​
|

Updated on: Apr 27, 2021 | 11:43 AM

Share

ಬೆಂಗಳೂರು: ರಾಜ್ಯ ಸರ್ಕಾರ ಜಿಂದಾಲ್‌ಗೆ ಸದ್ದಿಲ್ಲದೆ ಭೂಮಿ ಮಾರಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್  ಮಾಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ನಾವು ಭೂಮಿ ಮಾರಾಟಕ್ಕೆ ನಿರ್ಧರಿಸಿದ್ದೆವು. ಆಗ ಬಿ.ಎಸ್.ಯಡಿಯೂರಪ್ಪರಿಂದ ಅಹೋರಾತ್ರಿ ಧರಣಿ ನಡೆಯಿತು. ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗಿತ್ತು. ಮೈತ್ರಿ ಸರ್ಕಾರದ ಮೇಲೆ ಕಿಕ್‌ಬ್ಯಾಕ್ ಆರೋಪ ಮಾಡಿದ್ದರು. ಭೂಮಿಯ ಮಾರಾಟವನ್ನು ವಿರೋಧಿಸಿ ಹೋರಾಟ ಮಾಡಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಸದ್ದಿಲ್ಲದೆ ಭೂಮಿ ಮಾರಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

ವಿರೋಧ ಪಕ್ಷದಲ್ಲಿದ್ದಾಗ ಭೂಮಿ ಮಾರಾಟಕ್ಕೆ ವಿರೋಧಿಸಿದ್ರೆ ಆಡಳಿತಕ್ಕೆ ಬಂದಾಗ ನೀವು ಭೂಮಿ ಮಾರಾಟ ಮಾಡಿದ್ದೀರಿ. ಕದ್ದುಮುಚ್ಚಿ ಭೂಮಿ ಮಾರುವುದು ಬಿಜೆಪಿ ಸಂಸ್ಕೃತಿನಾ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ.

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ದರ ಗೊತ್ತಿಲ್ಲ. ರಾಜ್ಯ ಗೃಹ ಸಚಿವರು ದರದ ಬಗ್ಗೆ ಗೊತ್ತಿಲ್ಲ ಎಂದು ಹೇಳ್ತಾರೆ. ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರುವುದಕ್ಕೆ ಒಂದು ಕಾರಣವೂ ಇದೆ ಜಿಂದಾಲ್ ಮುಂದೆ ರಾಜ್ಯ ಬಿಜೆಪಿ ಸರ್ಕಾರ ಮಂಡಿಯೂರಿದೆ. ಏಕಾಏಕಿ ಮಂಡಿಯೂರುವುದಕ್ಕೆ ಒಂದು ಕಾರಣವೂ ಇದೆ. ಆ ಕಾರಣವೇನೆಂದು ಸಿಎಂ ಯಡಿಯೂರಪ್ಪಗೆ ಚೆನ್ನಾಗಿ ಗೊತ್ತಿದೆ. ಆ ಕಾರಣವನ್ನು ಸಿಎಂ ಯಡಿಯೂರಪ್ಪ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಿಗೂಢವಾಗಿ ಟ್ವೀಟ್​ ಮೂಲಕ ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ್ದಾರೆ.

ಈಗ ಹೆಚ್.ಕೆ.ಪಾಟೀಲ್ ಏನು ಮಾಡುತ್ತಿದ್ದಾರೆ?

HK PATIL

ಈಗ ಹೆಚ್.ಕೆ.ಪಾಟೀಲ್ ಏನು ಮಾಡುತ್ತಿದ್ದಾರೆ? ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ಜಿಂದಾಲ್‌ ವಿರುದ್ಧ ಆನಂದ್ ಸಿಂಗ್ ಪತ್ರ ಬರೆದಿದ್ದರು. ಕಾಂಗ್ರೆಸ್ ಶಾಸಕರಾಗಿದ್ದಾಗೆ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಜಿಂದಾಲ್ ಈಸ್ಟ್ ಇಂಡಿಯಾ ಕಂಪನಿ ಎಂದು ಹೇಳಿದ್ದರು. ಈಗ ಸಚಿವರಾದ ಬಳಿಕ ಹೇಗೆ ಭೂಮಿ ಮಾರಿದ್ದಾರೆ? ಹೆಚ್.ಕೆ.ಪಾಟೀಲ್ ಕೂಡ ಭೂಮಿ ಮಾರಾಟ ವಿರೋಧಿಸಿದ್ದರು. ಮೈತ್ರಿ ಸರ್ಕಾರದ ಭಾಗವಾಗಿದ್ದರೂ ವಿರೋಧ ಮಾಡಿದ್ದರು. ಈಗ ಹೆಚ್.ಕೆ.ಪಾಟೀಲ್ ಏನು ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಹಾಕಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ತಿವಿದಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​ ಸಾರಾಂಶ ಇಲ್ಲಿದೆ:  ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ…’ ಜಿಂದಾಲ್‌ಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ.

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ?

ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ಅನ್ನು’ಈಸ್ಟ್‌ ಇಂಡಿಯಾ ಕಂಪನಿ’ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ?

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು @HKPatil1953 ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ?

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ‘ಗೊತ್ತಿಲ್ಲ’ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ.

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ.

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ.