ಕನ್ನಡಿಗ, ಕರ್ನಾಟಕ ಸಂಬಂಧ ವಿಷಯಗಳಲ್ಲಿ ಹೋರಾಡೋಣ; ಬೇರೆಲ್ಲಾ ವಿಷಯ ಉಪೇಕ್ಷಿಸೋಣ -ಹೆಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಕರೆ​

ಕೊವಿಡ್‌ ಸಂಕಷ್ಟ ಕಾಲದಲ್ಲಿ ಜೆಡಿಎಸ್​ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ. ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ, ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ.

ಕನ್ನಡಿಗ, ಕರ್ನಾಟಕ ಸಂಬಂಧ ವಿಷಯಗಳಲ್ಲಿ ಹೋರಾಡೋಣ; ಬೇರೆಲ್ಲಾ ವಿಷಯ ಉಪೇಕ್ಷಿಸೋಣ -ಹೆಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಕರೆ​
ಎಚ್.ಡಿ.ಕುಮಾರಸ್ವಾಮಿ
Follow us
TV9 Web
| Updated By: Skanda

Updated on:Jul 10, 2021 | 1:59 PM

ಬೆಂಗಳೂರು: ಸಂಸದೆ ಸುಮಲತಾ ಜತೆಗಿನ ಕಿತ್ತಾಟಕ್ಕೆ ಅಂತ್ಯ ಕಾಣಿಸಲು ಮುಂದಾಗಿರುವ ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್​ ಮಾಡುವ ಮೂಲಕ ಈ ವಿಚಾರವನ್ನು ಇಲ್ಲಿಗೇ ನಿಲ್ಲಿಸೋಣ ಎಂದು ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಸುಮಲತಾ ಬಗೆಗೆ ಯಾವುದೇ ಹೇಳಿಕೆ ನೀಡುವುದು ಬೇಡ, ಅದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಹೆಚ್.ಡಿ.ದೇವೇಗೌಡ ಸೂಚನೆ ನೀಡಿದ ಬೆನ್ನಲ್ಲೇ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನಾವು ಹೋರಾಟ ಮಾಡಬೇಕಾದ ವಿಚಾರಗಳು ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ಬೇರೆಲ್ಲಾ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಹೇಳಿದ್ದಾರೆ.

ಕೊವಿಡ್‌ ಸಂಕಷ್ಟ ಕಾಲದಲ್ಲಿ ಜೆಡಿಎಸ್​ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ. ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ, ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ಕರ್ನಾಟಕ ಕೇಂದ್ರಿತ ರಾಜಕಾರಣವನ್ನು ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ನಿರ್ಧಾರಕ್ಕೆ ಬಿಡೋಣ. ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಯೋಜನೆಗೆ ತಡೆ ಮಾಡುತ್ತಿರುವವರ ವಿರುದ್ಧ ಸಿಡಿಯೋಣ, ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನ ಹಾರಿಸಲು ಬಿಡಲೊಲ್ಲದ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಸಿಡಿಯೋಣ ಎಂದು ಕರೆ ನೀಡಿದ್ದಾರೆ.

ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ನಾವು ಸಿಡಿಯಬೇಕಾಗಿದೆ. ಇದು ನಮ್ಮ ಆಯ್ಕೆಯಾಗಲಿ. ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಗೌಣವಾಗುತ್ತಿವೆ, ಆ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನ ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ ಎಂದು ಹೇಳಿರುವ ಹೆಚ್.ಡಿ.ಕುಮಾರಸ್ವಾಮಿ ಟ್ವಿಟರ್​ ಮೂಲಕ ಸುಮಲತಾ ಜತೆಗಿನ ವಾಕ್ಸಮರವನ್ನು ಅಂತ್ಯಗೊಳಿಸುವ ಸೂಚನೆ ನೀಡಿದ್ದಾರೆ.

ಸುಮಲತಾ ಕಾವೇರಿ ತಾಯಿಗೆ ಪೂಜೆ ಮಾಡಿ ಕ್ಷಮೆ ಕೇಳಲಿ ಇದಕ್ಕೂ ಮುನ್ನ ವಿವಾದದ ಬಗ್ಗೆ ಅರಕೆರೆಯಲ್ಲಿ ಮಾತನಾಡಿದ್ದ ಜೆಡಿಎಸ್​ ಶಾಸಕ ರವೀಂದ್ರ ಶ್ರೀಕಂಠಯ್ಯ, ಕಾವೇರಿ ತಾಯಿಗೆ ಸುಮಲತಾ ಪೂಜೆ ಮಾಡಿ ಜನರ ಕ್ಷಮೆಕೇಳಲಿ. ಸುಮಲತಾ ಅವರು ಕ್ಷಮೆ ಕೇಳಿದ ಮೇಲೆ ವಿವಾದ ಮುಗಿಯುತ್ತೆ. ಅವರಿಂದ ತಪ್ಪಾಗಿರೋದು ಜಗಜ್ಜಾಹೀರಾಗಿದೆ. ಕೆಆರ್​ಎಸ್​ಗೆ ಬಂದು ಸುಮಲತಾ ಪೂಜೆ ಸಲ್ಲಿಸಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.

ಹೆಚ್​ಡಿಕೆ ಕದನ ವಿರಾಮ ವಿವಾದ ಭುಗಿಲೆದ್ದ ನಂತರ ಕಳೆದ 5 ದಿನಗಳಿಂದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಬೀಡುಬಿಟ್ಟಿದ್ದ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರಿನತ್ತ ಹೊರಟಿದ್ದಾರೆ. ಕಳೆದ ಐದು ದಿನಗಳಿಂದ ರಾಮನಗರ ತಾಲೂಕಿನ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಇದ್ದ ಹೆಚ್.ಡಿ.ಕುಮಾರಸ್ವಾಮಿ ಇದೀಗ ವಾಕ್ಸಮರ ಅಂತ್ಯಗೊಳಿಸುವ ಸೂಚನೆ ನೀಡಿ ರಾಜಧಾನಿಗೆ ಮರಳುತ್ತಿದ್ದಾರೆ. ತೋಟದೇ ಮನೆಯಿಂದ ಹೊರಡುವಾಗಲೂ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟಿದ್ದಾರೆ.

ಇದನ್ನೂ ಓದಿ: ಟಾಕ್ ಫೈಟ್ ನಡೆಸುತ್ತಿದ್ದ ಸುಮಲತಾ ಈಗ ಟ್ವೀಟ್ ವಾರ್ 

ಮಾತು ಪಕ್ಷವನ್ನೇ ಕೆಡಿಸುತ್ತೆ, ಸುಮ್ನಿರಿ ಎಂದ ದೊಡ್ಡಗೌಡರು; ತೋಟದ ಮನೆಯಲ್ಲಿ ಮೌನಕ್ಕೆ ಶರಣಾದ ಕುಮಾರಸ್ವಾಮಿ

Published On - 1:42 pm, Sat, 10 July 21

ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ