AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Space Day 2024: ಇಸ್ರೋದ ವಿಜ್ಞಾನಿ, ಇಂಜಿನಿಯರ್ಸ್​​ಗೆ ಶುಭಕೋರಿದ ಕುಮಾರಸ್ವಾಮಿ

ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ಸಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್​ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನಾಚಾರಣೆ ಎಂದು ಘೋಷಿಸಿದ್ದಾರೆ. ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಅಂಗವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿ ಶುಭಾಶಯ ತಿಳಿಸಿದ್ದಾರೆ.

National Space Day 2024: ಇಸ್ರೋದ ವಿಜ್ಞಾನಿ, ಇಂಜಿನಿಯರ್ಸ್​​ಗೆ ಶುಭಕೋರಿದ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
|

Updated on: Aug 23, 2024 | 9:19 AM

Share

ಬೆಂಗಳೂರು, ಆಗಸ್ಟ್​ 23: ದೇಶಾದ್ಯಂತ ಶುಕ್ರವಾರ ರಾಷ್ಟ್ರೀಯ ಬಾಹ್ಯಾಕಾಶ ದಿನಾಚಾರಣೆ (National Space Day) ಆಚರಿಸಲಾಗುತ್ತಿದೆ. ಕಳೆದ ವರ್ಷ ಆಗಸ್ಟ್​ 23ರಂದು ಭಾರತ ಮಹತ್ವಾಕಾಂಕ್ಷಿ ಚಂದ್ರಯಾನ-3 (Chandrayaan-3) ಯೋಜನೆಯ ವಿಕ್ರಂ ಲ್ಯಾಂಡರ್ ಅನ್ನು​ ಚಂದ್ರನ ದಕ್ಷಿಣ ಧ್ರುವದಲ್ಲಿನ “ಶಿವ ಶಕ್ತಿ” ಬಿಂದುವಿನಲ್ಲಿ ಇಳಿದ ದಿನವನ್ನು ಸ್ಮರಿಸಲೆಂದು ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಆಚರಿಸಲಾಗುತ್ತಿದೆ. ಬ್ಯಾಹಾಕಾಶ ಕ್ಷೇತ್ರದಲ್ಲಿ ಭಾರತದ ಹೆಸರನ್ನು ಅಜರಾಮರವಾಗಿಸಲು ಹಗಲಿರುಳು ಶ್ರಮಿಸುತ್ತಿರಿವ ಇಸ್ರೋದ ವಿಜ್ಞಾನಿಗಳಿಗೆ ಮತ್ತು ಅಭಿಯಂತ್ರರಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಶುಭಾಶಯ ತಿಳಿಸಿದ್ದಾರೆ.

ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಟ್ವೀಟ್​ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಕರೆ ಮೇರೆಗೆ ಇಂದು ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಆಚರಿಸಲಾಗುತ್ತಿದೆ. ಚಂದ್ರಯಾನ-3 ಯೋಜನೆಯ ವಿಕ್ರಂ ಲ್ಯಾಂಡರ್ ಅನ್ನು​​​ ಚಂದ್ರನ ದಕ್ಷಿಣ ಧ್ರುವದಲ್ಲಿನ ಯಶಸ್ವಿಯಾಗಿ ಇಳಿಸಿದ ನೆನಪಿಗಾಗಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಆಚರಿಸಲಾಗುತ್ತಿದೆ. ಈ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದ್ದು, ನಾಯಕನಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಇದನ್ನೂ ಓದಿ: ಅಂದು ಚಂದ್ರಯಾನ-3 ಉಡಾವಣೆ 4 ಸೆಕೆಂಡು ವಿಳಂಬವಾಗಿತ್ತು, ಸ್ವಲ್ಪ ಮೈಮರೆತಿದ್ರೂ ಭಾರತ ಈ ಸಾಧನೆ ಮಾಡುತ್ತಿರಲಿಲ್ಲ

ಚಂದ್ರಯಾನ-3 ಯೋಜನೆ ಯಶಸ್ವಿ ಹಿಂದೆ ಬಹೃತ್​ ಕೈಗಾರಿಕಾ ಸಚಿವಾಲಯದ ಬಹು ದೊಡ್ಡ ಕೊಡುಗೆಯೂ ಇದೆ. MHI-ಇನ್‌ಸ್ಟ್ರುಮೆಂಟೇಶನ್ ಲಿಮಿಟೆಡ್ (IL), FCRI, ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL), ಮತ್ತು ಹಿಂದೂಸ್ತಾನ್ ಮೆಷಿನ್ ಟೂಲ್ಸ್ (HMT) ಅಡಿಯಲ್ಲಿ ನಾಲ್ಕು CPSE ಗಳು ಚಂದ್ರಯಾನ-3 ರ ಯಶಸ್ಸಿಗೆ ಉತ್ಪನ್ನಗಳನ್ನು ಪೂರೈಸಿದವು ಎಂದು ತಿಳಿಸಿದರು.

ಈ ಆಚರಣೆಯು ಇಸ್ರೋದ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಸಮರ್ಪಣೆ. ಮತ್ತು ನಮ್ಮ ರಾಷ್ಟ್ರದ ಕೈಗಾರಿಕೆಗಳ ಸಹಯೋಗದ ಪ್ರಯತ್ನಗಳಿಗೆ ಚಂದ್ರಯಾನ-3 ಸಾಕ್ಷಿಯಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ