ಹಂದಿ ಎಂದ ಐಪಿಎಸ್​ಗೆ ಸಂಕಷ್ಟ:​ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಅಮಿತ್​ ಶಾಗೆ ಹೆಚ್​ಡಿಕೆ ಪತ್ರ

ಎಡಿಜಿಪಿ ಚಂದಶೇಖರ್ ಪರೋಕ್ಷವಾಗಿ ಕುಮಾರಸ್ವಾಮಿಯವರನ್ನ ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು. ಈ ವಿಚಾರವಾಗಿ ಅಮಿತ್ ಶಾಗೆ ಪತ್ರ ಬರೆದಿರುವ ಹೆಚ್​ಡಿ ಕುಮಾರಸ್ವಾಮಿ ಐಪಿಎಸ್ ಅಧಿಕಾರಿಯಾಗಿ ಚಂದ್ರಶೇಖರ್ ಸೇವಾ ನಿಯಮ ಉಲ್ಲಂಘಿಸಿದ್ದಾರೋ ಎಂದು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಹಂದಿ ಎಂದ ಐಪಿಎಸ್​ಗೆ ಸಂಕಷ್ಟ:​ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಅಮಿತ್​ ಶಾಗೆ ಹೆಚ್​ಡಿಕೆ ಪತ್ರ
ಹಂದಿ ಎಂದ ಐಪಿಎಸ್​ಗೆ ಸಂಕಷ್ಟ:​ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಅಮಿತ್​ ಶಾಗೆ ಹೆಚ್​ಡಿಕೆ ಪತ್ರ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 30, 2024 | 7:46 PM

ಬೆಂಗಳೂರು, ಸೆಪ್ಟೆಂಬರ್​ 30: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ಸಮರ ತಾರಕಕ್ಕೇರಿದೆ. ಚಂದ್ರಶೇಖರ್ ಬರೆದಿದ್ದ ಪತ್ರ ಜೆಡಿಎಸ್ ನಾಯಕರನ್ನ ಕೆರಳಿಸಿದ್ದು, ಸಿಎಸ್​ಗೆ ದೂರು ಸಹ ನೀಡಲಾಗಿದೆ. ಈ ಎಲ್ಲದರ ಮಧ್ಯೆ ಚಂದ್ರಶೇಖರ್ ಪತ್ರ ಬರೆದ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಎಡಿಜಿಪಿ ಚಂದಶೇಖರ್ ಪರೋಕ್ಷವಾಗಿ ಕುಮಾರಸ್ವಾಮಿಯವರನ್ನ ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು. ಈ ವಿಚಾರವಾಗಿ ಅಮಿತ್ ಶಾಗೆ ಪತ್ರ ಬರೆದಿರುವ ಕುಮಾರಸ್ವಾಮಿ ಐಪಿಎಸ್ ಅಧಿಕಾರಿಯಾಗಿ ಚಂದ್ರಶೇಖರ್ ಸೇವಾ ನಿಯಮ ಉಲ್ಲಂಘಿಸಿದ್ದಾರೋ ಎಂದು ಪರಿಶೀಲಿಸಬೇಕು. ಚಂದ್ರಶೇಖರ್ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖಾ ತನಿಖೆ ನಡೆಸಬೇಕು. ಕರ್ನಾಟಕ ಕೇಡರ್ ಅಲ್ಲದಿದ್ದರೂ ಇಲ್ಲಿ ಇರಲು ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಕೂಡ ಪರಿಶೀಲಿಸಬೇಕಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್​ಡಿಕೆಗೆ ಗಂಗೇನಹಳ್ಳಿ ಜತೆ ಶ್ರೀಸಾಯಿ ಮಿನರಲ್ಸ್‌ ಕೇಸ್ ಉರುಳು: ಏನಿದು ಪ್ರಕರಣ?

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸ್ವತಂತ್ರ ಕೇಂದ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಚುನಾವಣಾ ಬಾಂಡ್ ವಿಚಾರವಾಗಿ ಎಫ್‌ಐಆರ್ ದಾಖಲಾದ ಬಗ್ಗೆಯೂ ಪ್ರಸ್ತಾಪಿಸಿದ್ದು, ಪೊಲೀಸ್ ಅಧಿಕಾರಿಗಳು, ಕಾಂಗ್ರೆಸ್ ನಾಯಕರ ನಡುವಿನ ಸಂಬಂಧದ ಬಗ್ಗೆ ತನಿಖೆಯಾಗಬೇಕು ಎಂದಿದ್ದಾರೆ.

ಚಂದ್ರಶೇಖರ್​ ಯಾವ ಕಚೇರಿಯಲ್ಲಿ ಕೂತು ಲೆಟರ್ ಬರೆದರೂ, ಕೆಪಿಸಿಸಿ ಕಚೇರಿಯಿಂದಲೇ ಕೂತು ಬರೆದ್ರೋ, ಎಲ್ಲವೂ ನನಗೆ ಗೊತ್ತಿದೆ ಅಂತಾ ಕುಮಾರಸ್ವಾಮಿ ಬಾಂಬ್ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್​ ಕೆಪಿಸಿಸಿಗೂ? ಚಂದ್ರಶೇಖರ್​​ಗೂ ಏನ್ ಸಂಬಂಧ ಅಂತಾ ತಿರುಗೇಟು ನೀಡಿದ್ದರು.

ಚಂದ್ರಶೇಖರ್ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘ ಆಗ್ರಹ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುರಿತಾಗಿ ಎಡಿಜಿಪಿ ಚಂದ್ರಶೇಖರ್ ಪದ ಬಳಕೆ ವಿಚಾರವಾಗಿದೆ. ಚಂದ್ರಶೇಖರ್ ವಿರುದ್ಧ ಸೂಕ್ತ ಕ್ರಮ ಜರುಗಿಸಲು ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದ್ದು, ಕ್ರಮ ಜರುಗಿಸಿ ಹದ್ದುಬಸ್ತಿನಲ್ಲಿಡುವಂತೆ ಒತ್ತಾಯಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:41 pm, Mon, 30 September 24

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ