Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕಡೆ ಸಫಾರಿ, ಇನ್ನೊಂದು ಕಡೆ ಸುಪಾರಿ: ಮೋದಿ ಸಿಎಂ ಆಗಿದ್ದಾಗ ಕೆಎಂಎಫ್​ ಮುಗಿಸಲು ಸುಪಾರಿ ಕೊಡಲಾಗಿತ್ತು: ಕುಮಾರಸ್ವಾಮಿ ಗಂಭೀರ ಆರೋಪ

ಡಬಲ್​ ಇಂಜಿನ್​ ಬಿಜೆಪಿ ಸರ್ಕರ ಅಮುಲ್​​ನಲ್ಲಿ ಕೆಎಫ್​​ನನ್ನು ವಿಲೀನ ಮಾಡಲು ಹೊರಟಿದೆ, ವಿರೋಧ ಪಕ್ಷಗಳು ಆರೋಪಿಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್​ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಒಂದು ಕಡೆ ಸಫಾರಿ, ಇನ್ನೊಂದು ಕಡೆ ಸುಪಾರಿ: ಮೋದಿ ಸಿಎಂ ಆಗಿದ್ದಾಗ ಕೆಎಂಎಫ್​ ಮುಗಿಸಲು ಸುಪಾರಿ ಕೊಡಲಾಗಿತ್ತು: ಕುಮಾರಸ್ವಾಮಿ ಗಂಭೀರ ಆರೋಪ
ಹೆಚ್​ ಡಿ ಕುಮಾರಸ್ವಾಮಿ
Follow us
ವಿವೇಕ ಬಿರಾದಾರ
|

Updated on: Apr 10, 2023 | 10:36 AM

ಬೆಂಗಳೂರು: ರಾಜ್ಯದಲ್ಲಿ ಕೆಎಂಎಫ್ (KMF)​ ನಂದಿನಿ ಹಾಲು ಮತ್ತು ಅಮುಲ್​​ (Amul) ಕಂಪನಿಯ ಹಾಲು ಮಾರಾಟ ವಿಚಾರವಾಗಿ ಸಾಕಷ್ಟು ಚರ್ಚೆಯಾಗುತ್ತಿದೆ. ಡಬಲ್​ ಇಂಜಿನ್​ ಬಿಜೆಪಿ ಸರ್ಕರ (BJP Government) ಅಮುಲ್​​ನಲ್ಲಿ ಕೆಎಫ್​​ನನ್ನು ವಿಲೀನ ಮಾಡಲು ಹೊರಟಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಇನ್ನು ಅಮುಲ್​​ ಕೆಲವು ದಿನಗಳ ಹಿಂದೆ ಕರ್ನಾಟಕ ಮಾರುಕಟ್ಟೆಯನ್ನು ಪ್ರವೇಶಿಸುವುದಾಗಿ ಘೋಷಿಸಿತ್ತು. ಹಾಲು ಮತ್ತು ಮೊಸರಿನಿಂದ ತಾಜಾತನದ ಹೊಸ ಅಲೆ ಬೆಂಗಳೂರಿಗೆ ಬರುತ್ತಿದೆ. ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಬರಲಿದೆ ಅಂತ ಏಪ್ರಿಲ್ 5ರಂದು ಅಮುಲ್ ಟ್ವೀಟ್ ಮಾಡಿತ್ತು. ಈ ಸಂಬಂಧ ರಾಜ್ಯದಲ್ಲಿ ತೀರ್ವ ವಿರೋಧ ವ್ಯಕ್ತವಾಗುತ್ತಿದೆ. ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumarswamy) “ಬಿಜೆಪಿಯ ಬರವಸೆ” ಎಂದು ಹ್ಯಾಷ್​ಟ್ಯಾಗ್​ ಬಳಸಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್​ ಮಾಡಿದ್ದಾರೆ.

“ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ಬಿಜೆಪಿ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು ಇದು ಬಿಜೆಪಿಯ (ಭರ)ವರಸೆ. #ಬಿಜೆಪಿಯ_ವರಸೆ. ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ” ಎಂದು ಹೆಚ್​.ಡಿ ಕುಮಾರಸ್ವಾಮಿ ಕಾಲೆಳೆದಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಅಮುಲ್​ ಉತ್ಪನ್ನಗಳ ಮಾರಾಟ ವಿಚಾರ: ನಂದಿನಿ ಹಾಲು ಉತ್ಪನ್ನಗಳನ್ನು ಖರೀದಿಸುವ ಮೂಲಕ ವಿರೋಧ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್

“ಪ್ರಧಾನಿ ನರೇಂದ್ರ ಮೋದಿಯವರು, ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್​ನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು ಅಂದರೆ 2008ರಲ್ಲೇ ಕನ್ನಡಿಗರ ಮೇಲೆ ಅಮುಲ್​ನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು. ಆಗ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರಕಾರ. ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಂದು ಅಮುಲ್‌ ಘಟಕದ ಬಗ್ಗೆ ಜೆಡಿಎಸ್​ ಪಕ್ಷವು ಭಾರೀ ವಿರೋಧ ವ್ಯಕ್ತಪಡಿಸಿತ್ತು, ಕೆಎಂಎಫ್​​ನ ಅಂದಿನ ಅಧ್ಯಕ್ಷರಾಗಿದ್ದ ಹೆಚ್​.ಡಿ ರೇವಣ್ಣ ಅವರು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್​​ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು. ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು. ಈಗ ಪಾತ್ರಗಳು ಬದಲಾಗಿವೆ. ಶಾಸಕ ಸಿಟಿ ರವಿ, ಸಚಿವ ಡಾ. ಕೆ ಸುಧಾಕರ್​, ಸಚಿವ ಅಶ್ವತ್​ ನಾರಾಯಣ ಇತರರು ರಂಗದ ಮೇಲಿದ್ದಾರಷ್ಟೇ” ಎಂದು ವಾಗ್ದಾಳಿ ಮಾಡಿದರು.

“ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾ ಬಯಲಾಗಿದೆ. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ.”

ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್​ಎನ್​ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು ಹೊಂಚು ಹಾಕಿರುವುದು ಸ್ಪಷ್ಟ. ಕೈಗಾರಿಕೆ, ಐಟಿಬಿಟಿ, ವಿಜ್ಞಾನ, ಆವಿಷ್ಕಾರ, ಉದ್ಯೋಗ ಸೃಷ್ಟಿ ಸೇರಿ ಜಿಎಸ್ ಟಿ ಕಟ್ಟುವುದರಲ್ಲಿಯೂ ಮುಂಚೂಣಿಯಲ್ಲಿರುವ ಕರ್ನಾಟಕವು, ಭಾರತವೇ ಹೆಮ್ಮೆಪಡುವ ರಾಜ್ಯ. ಇಂಥ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸಿ ಶಾಶ್ವತವಾಗಿ ದಿಲ್ಲಿಯ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡುವುದೇ ಬಿಜೆಪಿಯ ಕುಟಿಲನೀತಿ.”

“ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ. ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ! ಪ್ರಧಾನಿಗಳಾದ ನರೇಂದ್ರ ಮೋದಿಯವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ಧಿರಿಸಿನ ಬಗ್ಗೆ ಗೊತ್ತೇ ಇಲ್ಲ ಎನ್ನುವುದು ಸಚಿವ ಡಾ. ಅಶ್ವತ್​ ನಾರಾಯಣ ಅವರ ಕುಹಕದ ಮಾತು.”

“ಇನ್ನೊಬ್ಬರು; ಶಾಸಕ ಸಿಟಿ ರವಿ ಈ ಮಹಾಶಯರು, ಮೋದಿ ಅವರ ಬಗ್ಗೆ ಟೀಕೆ ಮಾಡಿದರೆ ಅವರ ಎತರಕ್ಕೆ ಏರಲು ಸಾಧ್ಯವಿಲ್ಲ ಎಂದು ಆಣಿಮುತ್ತು ಉದುರಿಸಿದ್ದಾರೆ. ನಾವು ಅವರ ಮಟ್ಟಕ್ಕೆ ಏರುವುದೂ ಇಲ್ಲ, ಸಿ.ಟಿ.ರವಿ ಅವರ ಮಟ್ಟಕ್ಕೆ ಇಳಿಯುವುದೂ ಇಲ್ಲ. ಆದರೆ, ಕರ್ನಾಟಕವನ್ನು ಗುಜರಾತಿಗಳಿಗೆ ಒತ್ತೆ ಇಡುವ ಪಾಪದ ಕೆಲಸವನ್ನಂತು ನಾವು ಮಾಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ