ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ: ಎಸ್​ಐಟಿ ಅಧಿಕಾರಿಗಳ ಎದುರು ರೇವಣ್ಣ ಕಣ್ಣೀರು 

| Updated By: ವಿವೇಕ ಬಿರಾದಾರ

Updated on: May 05, 2024 | 8:43 PM

ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಅವರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣ ಅವರನ್ನು ಬಂಧಿಸಿದ್ದಾರೆ. ಶಾಸಕ ಹೆಚ್​ಡಿ ರೇವಣ್ಣ ಎಸ್​​ಐಟಿ ಅಧಿಕಾರಿಗಳ ಮುಂದೆ, "ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ" ಎಂದು ಕಣ್ಣೀರಿಟ್ಟಿದ್ದಾರೆ.

ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ: ಎಸ್​ಐಟಿ ಅಧಿಕಾರಿಗಳ ಎದುರು ರೇವಣ್ಣ ಕಣ್ಣೀರು 
ಮಾಜಿ ಸಚಿವ ಹೆಚ್​ಡಿ ರೇವಣ್ಣ
Follow us on

ಬೆಂಗಳೂರು, ಮೇ 05: ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾಗಿರುವ ಸಂತ್ರಸ್ತೆಯನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಅವರನ್ನು ವಿಶೇಷ ತನಿಖಾ ಅಧಿಕಾರಿಗಳು (SIT) ಬಂಧಿಸಿ ಯಾಧೀಶರ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶರ ನಿವಾಸಕ್ಕೆ ತೆರಳುವ ಮುನ್ನ ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಎಸ್​​ಐಟಿ ಅಧಿಕಾರಿಗಳ ಮುಂದೆ, “ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ” ಎಂದು ಕಣ್ಣೀರಿಟ್ಟಿದ್ದಾರೆ.

ನನಗ್ಯಾಕೆ ಹೀಗೆ ಮಾಡುತ್ತಿದ್ದೀರಾ? ರಾಜಕೀಯ ಪ್ರೇರಿತವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ನಾನು ಯಾರಿಗೂ ಅನ್ಯಾಯ ಮಾಡಿದವನಲ್ಲ. ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ ಅಂತ ಎಸ್​​​ಐಟಿ ಅಧಿಕಾರಿಗಳ ಎದುರು ಕಣ್ಣೀರಿಟ್ಟಿದ್ದಾರೆ. ಈ ವೇಳೆ ಎಸ್​ಐಟಿ ಅಧಿಕಾರಿಗಳು ಹೆಚ್​​ಡಿ ರೇವಣ್ಣ ಅವರಿಗೆ ನೀರು ಕೊಟ್ಟು ಸಮಾಧಾನಪಡಿಸಿದರು.

ಮಹಿಳೆ ಅಪಹರಣ ಆಗಿದ್ದಾಗ ನಾನು ಬೆಂಗಳೂರಿನಲ್ಲಿದ್ದೆ. ನನ್ನ ತಂದೆ, ಮಾಜಿ ಹೆಚ್​​ ದೇವೇಗೌಡರನ್ನು ಮಾತನಾಡಿಸಲು ಬಂದು ಕೂತಿದ್ದೆ. ದೇವೇಗೌಡರ ಮನೆಯಲ್ಲಿ ಇದ್ದಾಗಲೇ ನನ್ನನ್ನು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಿದರು.

ನ್ಯಾಯಾಧೀಶರ ಎದುರು ಕಣ್ಣೀರಿಟ್ಟ ರೇವಣ್ಣ

ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ಅಧಿಕಾರಿಗಳು ಇಂದು (ಮೇ 05) ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ಈ ವೇಳೆ ಶಾಸಕ ಹೆಚ್​ಡಿ ರೇವಣ್ಣ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಎದುರು ಕಣ್ಣೀರಿಟ್ಟರು.

ಇದನ್ನೂ ಓದಿ: ಕಿಡ್ನಾಪ್ ಕೇಸ್: ಹೆಚ್​ಡಿ ರೇವಣ್ಣ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ!

ಏನಿದು ಕಿಡ್ನಾಪ್ ಕೇಸ್?

ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ 20 ವರ್ಷದ ಪುತ್ರ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು.

ಮಹಿಳೆಯ ಪತ್ತೆಗಾಗಿ ನಂತರ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಇಂದು ಸಂಜೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎಸ್​​ಐಟಿ ಮೂರನೇ ನೋಟಿಸ್ ನೀಡಿತ್ತು. ಇದೀಗ ಅವರನ್ನು ಬಂಧಿಸಲಾಗಿತ್ತು.

ಇನ್ನು ಕಿಡ್ನ್ಯಾಪ್ ಆದ ಮಹಿಳೆ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದು. ಬಳಿಕ ಎಸ್​ಐಟಿ ಅಧಿಕಾರಿಗಳು ಮಹಿಳೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ವಿಚಾರಣೆಗೊಳಪಡಿಸಿದ್ದಾರೆ. ಆದ್ರೆ, ಮಹಿಳೆ ಎಸ್​ಐಟಿ ಅಧಿಕಾರಿಗಳ ಮುಂದೆ ಗೊಂದಲದ ಹೇಳಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ