ನಾಗಮಂಗಲ ಗಲಾಟೆಗೆ ಗುಪ್ತಚರ ಇಲಾಖೆ ಮುಖ್ಯಸ್ಥರ ತಲೆದಂಡ?

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಇದೀಗ ಕಾಂಗ್ರೆಸ್​, ಬಿಜೆಪಿ ನಾಯಕರ ಮಧ್ಯೆ ಬಡಿದಾಟಕ್ಕೆ ಕಾರಣವಾಗಿದೆ. ಪ್ರಕರಣ ಪೊಲಿಟಿಕಲ್ ಟರ್ನ್​ ಪಡೆದುಕೊಂಡಿದೆ. ಈ ನಡುವೆ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್​ ನೇಮಕ ಮಾಡಲಾಗಿದೆ.

ನಾಗಮಂಗಲ ಗಲಾಟೆಗೆ ಗುಪ್ತಚರ ಇಲಾಖೆ ಮುಖ್ಯಸ್ಥರ ತಲೆದಂಡ?
ನಾಗಮಂಗಲ ಗಲಾಟೆಗೆ ಗುಪ್ತಚರ ಇಲಾಖೆ ಮುಖ್ಯಸ್ಥರ ತಲೆದಂಡ? ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಹೇಮಂತ್ ನಿಂಬ್ಳಾಕರ್ ನೇಮಕ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 13, 2024 | 4:44 PM

ಬೆಂಗಳೂರು, ಸೆಪ್ಟೆಂಬರ್​​ 13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಇದೀಗ ನಾನಾ ಸ್ವರೂಪವನ್ನೇ ಪಡೆದುಕೊಳ್ಳುತ್ತಿದೆ. ಗಲಭೆಯ ಕಿಚ್ಚು ರಾಜ್ಯಾದ್ಯಂತ ಹರಡುತ್ತಿದೆ. ಇದೇ ಪ್ರಕರಣ ಪೊಲಿಟಿಕಲ್ ಟರ್ನ್​ ಕೂಡ ಪಡೆದುಕೊಂಡಿದ್ದು, ಈ ಮಧ್ಯೆ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಗುಪ್ತಚರ ಇಲಾಖೆಯ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ (Hemant Nimbalkar)​ ಅವರನ್ನು ನೇಮಕ ಮಾಡಲಾಗಿದೆ. ಆ ಮೂಲಕ ಶರತ್ ಚಂದ್ರ ಅವರನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಈ ಹಿಂದೆ ಸಿದ್ದರಾಮಯ್ಯ ಆಡಳಿತದಲ್ಲಿ ಅಂದರೆ 2013 ರಿಂದ 18ರಲ್ಲಿ ಹೇಮಂತ್​ ನಿಂಬಾಳ್ಕರ್ ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದರು. ಇದೀಗ ಮತ್ತೆ ಹೇಮಂತ್ ನಿಂಬಾಳ್ಕರ್​​ಗೆ ಸಿದ್ದರಾಮಯ್ಯ ಮಣೆ ಹಾಕಿದ್ದಾರೆ.

ಇನ್ನು ಹೇಮಂತ್​ ನಿಂಬಾಳ್ಕರ್​ ಅವರ ಹೆಂಡತಿ ಅಂಜಲಿ ನಿಂಬಾಳ್ಕರ್ ಕಾಂಗ್ರೆಸ್​ ಎಂ​ಎಲ್​ಎ ಆಗಿದ್ದರು. ಅವರು ಉತ್ತರ ಕನ್ನಡದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಹಾಗಾಗಿ ರಾಜಕೀಯ ವಲಯದಲ್ಲಿ ಹೇಮಂತ್​ ಅವರು ಕಾಂಗ್ರೆಸ್​ ನಾಯಕರಿಗೆ ಹತ್ತಿರ ಎಂದು ಭಾವಿಸಲಾಗಿದೆ.

ಇದನ್ನೂ ಓದಿ: Mandya violence: ನಾಗಮಂಗಲದಲ್ಲಿ ಕೋಮು ಗಲಭೆಯಾಗಿಲ್ಲ, ಆಕಸ್ಮಿಕ ಘಟನೆ: ಗೃಹ ಸಚಿವ ಪರಮೇಶ್ವರ್

ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ವಿಚಾರ ಸದ್ಯ ಸಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಪ್ರಕರಣ ರಾಜಕೀಯ ಬಣ್ಣ ಪಡೆದುಕೊಂಡಿದೆ. ಈ ಮಧ್ಯೆ ಗುಪ್ತಚರ ಇಲಾಖೆ ಮುಖ್ಯಸ್ಥರ ತಲೆದಂಡ? ಮತ್ತಷ್ಟು ಅನುಮಾನ ಮತ್ತು ಕುತೂಹಲ ಕೆರಳಿಸಿದೆ.

ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಕೆ.ವಿ.ಶರತ್ ಚಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್​ ಅವರನ್ನು ನೇಮಕ ಮಾಡಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ. ಹೇಮಂತ್ ನಿಂಬಾಳ್ಕರ್ ನೇಮಕ ಮುಂಚೆ ಇದ್ದ ಶರತ್ ಚಂದ್ರ ಅವರನ್ನು ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ, 10 ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಎಲ್ಲಿಂದ ಬಂದವು; ಕುಮಾರಸ್ವಾಮಿ ಪ್ರಶ್ನೆ

ಹೇಮಂತ್‌ ನಿಂಬಾಳ್ಕರ್‌ ಅವರು 1998ನೇ ಬ್ಯಾಚಿನ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿದ್ದು. 2023ರ ಜೂನ್‌ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ನೇಮಕಗೊಂಡಿದ್ದರು. ಈ ಹಿಂದೆ ಬೆಳಗಾವಿ ಎಸ್‌ಪಿ, ಬೆಂಗಳೂರಿನ ಜಂಟಿ ಆಯುಕ್ತ (ಸಿಸಿಬಿ), ಹೆಚ್ಚುವರಿ ಆಯುಕ್ತ (ಪೂರ್ವ), ಹೆಚ್ಚುವರಿ ಆಯುಕ್ತ (ಆಡಳಿತ) ಹಾಗೂ ಸಿಐಡಿ ಐಜಿಪಿ ಸೇರಿದಂತೆ ವಿವಿಧ ಹುದ್ದೆಗಳನ್ನು ಹೇಮಂತ್‌ ನಿಂಬಾಳ್ಕರ್‌ ಅವರು ನಿರ್ವಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Fri, 13 September 24

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ