AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Certificate: ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಆರೋಗ್ಯ ಇಲಾಖೆಯಿಂದ ಹೊಸ ನಿಯಮಕ್ಕೆ ಚಿಂತನೆ

ಯುವ ಸಮೂಹದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳವಾಗುತ್ತಿದೆ. ಅದರಲ್ಲೂ ಚಾಲಕರಲ್ಲೇ ಹಾರ್ಟ್​ ಅಟ್ಯಾಕ್ ಹೆಚ್ಚು ಕಂಡುಬರುತ್ತಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ, ಚಾಲಕರಿಗೆ ಕಡ್ಡಾಯ ಹೆಲ್ತ್​ ಸರ್ಟಿಫಿಕೇಟ್​​ ಜಾರಿಗೊಳಿಸುವ ಬಗ್ಗೆ ಚಿಂತನೆ ಮಾಡಿದೆ. ಚಾಲಕರು ಡಿಎಲ್​ (ಚಾಲನಾ ಪರವಾನಗಿ) ಮಾದರಿಯಲ್ಲಿ ಹೆಲ್ತ್​ ಕಾರ್ಡ್ ಅನ್ನು ಕೂಡಾ ಹೊಂದಿರಬೇಕು ಎಂಬ ನಿಯಮ ಜಾರಿಗೊಳಿಸಲು ಮುಂದಾಗಿದೆ.

Health Certificate: ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಆರೋಗ್ಯ ಇಲಾಖೆಯಿಂದ ಹೊಸ ನಿಯಮಕ್ಕೆ ಚಿಂತನೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Aug 01, 2025 | 7:00 AM

Share

ಬೆಂಗಳೂರು, ಆಗಸ್ಟ್ 1: ಇತ್ತೀಚಿಗೆ ಅನೇಕರಲ್ಲಿ, ಅದರಲ್ಲೂ ಯುವ ಸಮೂಹದವರಲ್ಲಿ ಹೃದಯಾಘಾತ (Heart Attack) ಪ್ರಕರಣಗಳು ಹೆಚ್ಚು ಕಂಡುಬರುತ್ತಿವೆ. ಸರ್ಕಾರವು ಹೃದಯಾಘಾತ ಪ್ರಕರಣಗಳ ಹೆಚ್ಚಳಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಮಾಡಲು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿತ್ತು. ಜಯದೇವ ಆಸ್ಪತ್ರೆಯ ವೈದ್ಯರ ತಂಡ ಕೂಡ ವರದಿ ನೀಡಿತ್ತು. ಈ ವರದಿಗಳಲ್ಲಿ ಚಾಲಕರಲ್ಲಿಯೇ ಹೃದಯಾಘಾತ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವುದು ಉಲ್ಲೇಖವಾಗಿದೆ. ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸಲಹೆ ಕೂಡ ನೀಡಲಾಗಿತ್ತು.

ಈ ವರದಿಯ ಬೆನ್ನಲ್ಲೇ ಇದೀಗ ಆರೋಗ್ಯ ಇಲಾಖೆ ಚಾಲಕರ ಆರೋಗ್ಯದ ಮೇಲೆ ನಿಗಾ ವಹಿಸಲು ಮುಂದಾಗಿದೆ. ಇದಕ್ಕಾಗಿ ಹೊಸ ನಿಯಮ ರೂಪಿಸಲು ರೂಪುರೇಷೆ ಸಿದ್ಧಪಡಿಸಿದೆ. ಅದರಂತೆ ಆಟೋ, ಕ್ಯಾಬ್, ಬಸ್​​ ಚಾಲಕರಿಗೆ ಡಿಎಲ್ (ಚಾಲನಾ ಪರವಾನಗಿ)​ ಹೇಗೆ ಕಡ್ಡಾಯವೋ ಅದೇ ರೀತಿ ಇನ್ಮುಂದೆ , ಹೆಲ್ತ್​ ಚೆಕಪ್​ ಸರ್ಟಿಫಿಕೇಟ್​ (ಹೆಲ್ತ್ ಕಾರ್ಡ್) ಕಡ್ಡಾಯ ಮಾಡಲು ಚಿಂತನೆ ನಡೆಸಿದೆ. ಚಾಲಕರಿಗೆ ಇಸಿಜಿ, ಬಿಪಿ, ಶುಗರ್​ ಪರೀಕ್ಷೆ ಮಾಡಿಸಿ ಅವರು ಫಿಟ್​ ಇದ್ದಾರೋ ಇಲ್ಲವೋ ಎಂಬ ಪ್ರಮಾಣಪತ್ರ ನೀಡಲಾಗುತ್ತದೆ.

ಆರೋಗ್ಯ ಪ್ರಮಾಣಪತ್ರಕ್ಕೆ ತಪಾಸಣೆ ಯಾವಾಗ?

ಡಿಎಲ್​ ಪಡೆಯುವಾಗ, ರಿನೀವಲ್ ಮಾಡಿಸುವಾಗ, ಜೊತೆಗೆ ಎಫ್​ಸಿ ಮಾಡಿಸುವಾಗ ಚಾಲಕರಿಗೆ ಹೆಲ್ತ್ ಕಾರ್ಡ್​ ನೀಡುವಂತೆ ಇಲಾಖೆ ನಿಯಮ ರೂಪಿಸಲಿದೆ. ಈಗಾಗಲೇ ಸಂಬಂಧ ಪಟ್ಟ ಸಾರಿಗೆ ಇಲಾಖೆ, ಟ್ರಾಫಿಕ್ ಪೊಲೀಸ್ ಇಲಾಖೆ ಜೊತೆಗೆ ಕೂಡಾ ಚರ್ಚಿಸಿದ್ದು, ಆರೋಗ್ಯ ಇಲಾಖೆಯಿಂದಲೇ ಹೆಲ್ತ್​ ಚೆಕಪ್ ಮಾಡಿಸಬೇಕಾ ಅಥವಾ, ಬೇರೆಡೆಯಿಂದ ಪ್ರಮಾಣಪತ್ರ ಸಲ್ಲಿಕೆ ಮಾಡಲು ಸೂಚಿಸಬೇಕೇ ಎಂಬ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.

ಚಾಲಕರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಿರುವ ಬಗ್ಗೆ ಆಟೋ, ಕ್ಯಾಬ್ ಚಾಲಕರು ಕೂಡಾ ಆತಂಕ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆ ಹೆಲ್ತ್​ ಸರ್ಟಿಫಿಕೇಟ್ ಕಡ್ಡಾಯ ಮಾಡುತ್ತಿರುವುದನ್ನು ಸ್ವಾಗತಿಸಿದ್ದಾರೆ. ಈ ರೀತಿ ಮಾಡುವುದರಿಂದ ನಮಗೆ ಅನುಕೂಲ ಇದೆ. ನಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ನಮಗೂ ಕೂಡಾ ಅನೇಕ ಒತ್ತಡಗಳಿರುತ್ತವೆ ಎಂದು ಚಾಲಕರು ಹೇಳಿದ್ದಾರೆ.

ಇದನ್ನೂ ಓದಿ: ಚರ್ಮದ ಮೇಲೆ ಈ ಸಮಸ್ಯೆಗಳು ಕಾಣಿಸಿಕೊಂಡರೆ ಅದು ಹೃದಯಾಘಾತದ ಲಕ್ಷಣವಾಗಿರಬಹುದು; ನಿರ್ಲಕ್ಷ್ಯ ಬೇಡ

ಒಟ್ಟಿನಲ್ಲಿ ಆರೋಗ್ಯ ಇಲಾಖೆ ಕಡ್ಡಾಯ ಹೆಲ್ತ್​ ಸರ್ಟಿಫಿಕೇಟ್​ ಜಾರಿಗೆ ಭಾಗಶಃ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸುವ ನಿರೀಕ್ಷೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ