ಬೆಂಗಳೂರು, ಏಪ್ರಿಲ್ 05: ಏಪ್ರಿಲ್ ಆರಂಭದಲ್ಲೇ ಬೇಸಿಗೆ ತೀವ್ರಗೊಳ್ತಿದ್ದು, ದಿನದಿಂದ ದಿನಕ್ಕೆ ಬಿಸಿಲಿನ ತಾಪ ಜನರನ್ನು ಹೈರಾಣಾಗಿಸಿದೆ. ಅದರಲ್ಲೂ ಕೂಲ್ ಸಿಟಿ, ಗಾರ್ಡನ್ ಸಿಟಿ ಅಂತೆಲ್ಲಾ ಕರೆಯಲ್ಪಡುವ ಬೆಂಗಳೂರು ಸದ್ಯಕ್ಕೆ ಬಿಸಿಲೂರಾಗಿ ಮಾರ್ಪಟ್ಟಿದೆ. ಬಿಸಿಲಿನ ತಾಪದಿಂದ ಏಕಾಏಕಿ ಶಂಕಿತ ಕಾಲರಾ (Cholera), ಬಿಸಿಗಾಳಿ ಹಿನ್ನೆಲೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಹಾಗಾಗಿ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್ ಸುದ್ದಿಗೋಷ್ಠಿ ಮಾಡಿದ್ದು, ಬಿಸಿಲಿನ ತಾಪ, ಬಿಸಿಗಾಳಿ, ಕಾಲರಾ ಬಗ್ಗೆ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದ್ದು, ಸಾಂಕ್ರಾಮಿಕ ರೋಗಿಗಳ ಡೇಟಾ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಲಬುರಗಿ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಬಿಸಿಲಿನ ತಾಪದಿಂದ ಮೃತಪಟ್ಟಿಲ್ಲ ಎಂಬ ಮಾಹಿತಿ ಬಂದಿದೆ. ಇತರೆ ರೋಗಗಳಿಂದ ಬಳಲುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಬಿಸಿಲಿ ತಾಪವೂ ಇದಕ್ಕೆ ಕಾರಣ ಅನ್ನೋ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಬಿಸಿಗಾಳಿ ಆಘಾತದ ನಿರ್ವಹಣೆಗೆ ಜಿಲ್ಲಾಸ್ಪತ್ರೆಯಲ್ಲಿ 5, ತಾಲೂಕು ಆಸ್ಪತ್ರೆಯಲ್ಲಿ 2 ಬೆಡ್ ಮೀಸಲಿಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿ, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದರು.
ಇದನ್ನೂ ಓದಿ: ಎಚ್ಚರ, ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕಾಲರಾ: ಸೋಂಕು ತಡೆಯಲು ಏನು ಮಾಡಬೇಕು? ಇಲ್ಲಿದೆ ಸಲಹೆ
ಬಿಸಿಲಿನ ತಾಪ ಸಂಬಂಧ 341, ಹೀಟ್ ಕ್ರಾಂಪ್ನಿಂದ ಈವರೆಗೂ 212, ಹೀಟ್ ಎಕ್ಸ್ ಹಾಷನ್ 58 ಪ್ರಕರಣಗಳು ವರದಿ ಆಗಿದೆ. ಒಟ್ಟು 521 ರಾಜ್ಯದಲ್ಲಿ ಪತ್ತೆಯಾಗಿವೆ. ಬಿಸಿಲಿನ ತಾಪದಿಂದ ಯಾವುದೇ ಸಾವು ಸಂಭವಿಸಿಲ್ಲ. ಬೇಕಾಗಿರುವ ಔಷಧಿಗಳನ್ನು ಸಂಗ್ರಹಿಸಿಡಲು ತಿಳಿಸಿದ್ದೇವೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲು ಡಿಸಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕಾಲರಾ ವಿಚಾರವಾಗಿ ಮಾತನಾಡಿದ ಅವರು, ಬರಿ ವಾಂತಿ-ಭೇದಿಯನ್ನು ಕಾಲರಾ ಅಂತಾ ತಿಳಿಬಾರದು. ಶುದ್ದ ನೀರಿನ ಕೊರತೆಯಿಂದಾಗಿ ಕಾಲರಾ ಬರುತ್ತೆ. ಕಳಪೆ ಗುಣಮಟ್ಟದ ಆಹಾರ ಮತ್ತು ನೀರು ಕುಡಿಯುವುದರಿಂದ ಕಾಲರಾ ಬರುವ ಸಾಧ್ಯತೆ ಇದೆ. ಇದು ನೇರವಾಗಿ ಹರಡುವುದಲ್ಲಿ. ಸಂಪರ್ಕ ಇರಬೇಕು ಇಲ್ಲಾ, ನೀವೆ ಸೇವಿಸಿರಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಲರಾ ಭೀತಿ: ಎಚ್ಚೆತ್ತುಕೊಂಡ ಬಿಬಿಎಂಪಿ ಕೈಗೊಂಡ ಕ್ರಮಗಳೇನು? ಇಲ್ಲಿವೆ
ಕಾಲರಾದ ಬಗ್ಗೆ ಸುಳ್ಳು ಮಾಹಿತಿಗಳು ಹರಿದಾಡುತ್ತಿದೆ. 50 % ಕಾಲರಾ ಏರಿಕೆ ಆಗಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು. ಬೆಂಗಳೂರು ನಗರದಲ್ಲಿ ಮೂರು ತಿಂಗಳುಗಳಲ್ಲಿ 2 ಪ್ರಕರಣ, ರಾಮನಗರ ಜಿಲ್ಲೆಗಳಲ್ಲಿ 1, ಒಟ್ಟು 6 ಪ್ರಕರಣಗಳು ವರದಿಯಾಗಿದೆ. ಕಾಲರಾ ಔಟ್ ಬ್ರೇಕ್ ಆಗಿಲ್ಲ. ಎಲ್ಲೂ ಕೂಡ ಒಂದೇ ಲೊಕ್ಯಲಿಟಿಯಲ್ಲಿ ಹೆಚ್ಚು ಕೇಸ್ ಪ್ರಕರಣಗಳು ಬಂದಿಲ್ಲ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಮಾತ್ರ ಕಾಲರಾ ಪ್ರಕರಣ ವರದಿಯಾಗಿದೆ ಎಂದರು.
ಮಲ್ಲೇಶ್ವರಂ ನಿವಾಸಿಗೆ ಕಾಲರಾ ಪತ್ತೆ ವಿಚಾರವಾಗಿ ಮಾತನಾಡಿದ್ದು, ಆ ವ್ಯಕ್ತಿಗೆ ಕಲಾರಾ ಪತ್ತೆಯಾಗಿಲ್ಲ. ಚಿಕಿತ್ಸೆ ಸ್ಪಂದಿಸಿ ಗುಣಮುಖರಾಗಿ ತಮ್ಮ ಊರು ಸಿರಾಗೆ ತೆರಳಿದ್ದಾರೆ. ಹೀಗಾಗಿ ಯಾವುದೇ ಕಾರಣ ಪ್ರಕರಣಗಳು ಪತ್ತೆಯಾಗಿಲ್ಲ. ಇನ್ನೂ ಪಿಜಿಯಲ್ಲಿ 32 ಮಹಿಳೆಯರು ವಾಸವಿದ್ದು, ಯಾರಿಗೂ ಇಂತಹ ತೊಂದರೆ ಕಾಣಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:52 pm, Fri, 5 April 24