AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಹೆಚ್ಚಳ: ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ

ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಆತಂಕ ಸೃಷ್ಟಿಯಾಗಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ನಡೆಸಿದ ಮಹತ್ವ ಸಭೆ ಅಂತ್ಯವಾಗಿದೆ. ಹಾಗಾದ್ರೆ ಸಭೆಯಲ್ಲಿ ಏನೆಲ್ಲಾ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎನ್ನುವ ವಿವರ ಇಲ್ಲಿದೆ.

ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಹೆಚ್ಚಳ: ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 19, 2023 | 3:34 PM

ಬೆಂಗಳೂರು, (ಡಿಸೆಂಬರ್ 19): ಕರ್ನಾಟಕದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ(Coronavirus JN1) ತಳಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇನ್ನು ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಆರೋಗ್ಯ ಇಲಾಖೆಯಿಂದ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಿದ್ದೇವೆ. ಕೊವಿಡ್ ಟೆಸ್ಟ್​ ಹೆಚ್ಚಿಸಲು ಅಧಿಕಾರಿಗಳು, ಸಿಬ್ಬಂದಿಗೆ ಸೂಚಿಸಲಾಗಿದೆ. ಕೊವಿಡ್ ಟೆಸ್ಟಿಂಗ್​ ಕಿಟ್​​ ಖರೀದಿಗೂ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಹೆಚ್ಚಿಸಲಾಗುವುದು. ಆರಂಭದಲ್ಲಿ 500 ರಿಂದ 1000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ಒಂದು ವಾರದ ಬಳಿಕ 5000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ವಿಶ್ವದಲ್ಲಿ JN1 ವೈರಸ್ ನವೆಂಬರ್ ನಲ್ಲಿ​ 10% ಹರಡುವಿಕೆ ಇತ್ತು. ಈಗ ಡಿಸೆಂಬರ್ ವೇಳಗೆ 30% ಆಗಿದೆ. ನಮಲ್ಲಿಯೂ ಟೆಸ್ಟ್ ಮಾಡಿದಾಗ ಈ ಸ್ಟ್ರೇನ್ ಬರುವ ಸಾಧ್ಯತೆ ಇದೆ.  ಟೆಸ್ಟಿಂಗ್ ಹೆಚ್ಚಳದ ಬಳಿಕ ಕೊವಿಡ್ ಸ್ಪಷ್ಟತೆ ಸಿಗಲಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲು ಸೂಚನೆ ನೀಡಲಾಗಿದ್ದು, ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ RTPCR ತಪಾಸಣೆ ಮಾಡಬೇಕು. ಒಂದು ವೇಳೆ ಟೆಸ್ಟ್​​ನಲ್ಲಿ ಪಾಸಿಟಿವ್ ಬಂದ್ರೆ ಜೆನೆಮಿಕ್ ಸೀಕ್ವೆನ್ಸ್​​​​ಗೆ ಸ್ಯಾಂಪಲ್ ಕಳಿಸಬೇಕು ಎಂದರು.

ಇದನ್ನೂ ಓದಿ: Karnataka Covid Guidelines: ಕರ್ನಾಟಕ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ವಿವರ

ಎರಡು ಪ್ರತ್ಯೇಕ ಮಾರ್ಗಸೂಚಿ

ಕೋವಿಡ್ ಬಗ್ಗೆ ಎರಡು ಪ್ರತ್ಯೇಕ ಮಾರ್ಗಸೂಚಿಗಳನ್ನು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಒಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆಗಿದ್ದರೆ ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿಯಾಗಿದೆ. ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಮತ್ತೊಂದಡೆ, ಕೋವಿಡ್ ಹೆಚ್ಚಳ ಆಗುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ