AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್‌ಹೆಚ್‌ಎಂ ಆರೋಗ್ಯ ಸಿಬ್ಬಂದಿಗಳ ಕೆಸಲಕ್ಕೆ ಕುತ್ತು: 96 ಸಿಬ್ಬಂದಿಗಳಿಗೆ ಗೇಟ್ ಪಾಸ್ ಕೊಟ್ಟ ಆರೋಗ್ಯ ಇಲಾಖೆ

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಂಠಿತಗೊಳ್ಳುತ್ತಿದೆ. ಸಾಕಷ್ಟು ಮಕ್ಕಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ‌ಇದರಿಂದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಇಳಿಕೆಯಾಗಿದ್ದು, ಇದರ ಬೆನ್ನಲ್ಲೇ ಆರೋಗ್ಯ ಸಿಬ್ಬಂದಿಗಳ ಕೆಲಸಕ್ಕೆ ಕುತ್ತು ಎದುರಾಗಿದೆ. ಮೊದಲ ಹಂತದಲ್ಲಿ ವೈದ್ಯರು, ನರ್ಸ್, ನೇತ್ರತಜ್ಞ ಸೇರಿ 96 ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಎನ್‌ಹೆಚ್‌ಎಂ ಆರೋಗ್ಯ ಸಿಬ್ಬಂದಿಗಳ ಕೆಸಲಕ್ಕೆ ಕುತ್ತು: 96 ಸಿಬ್ಬಂದಿಗಳಿಗೆ ಗೇಟ್ ಪಾಸ್ ಕೊಟ್ಟ ಆರೋಗ್ಯ ಇಲಾಖೆ
ಎನ್‌ಹೆಚ್‌ಎಂ ಆರೋಗ್ಯ ಸಿಬ್ಬಂದಿಗಳ ಕೆಸಲಕ್ಕೆ ಕುತ್ತು: 96 ಸಿಬ್ಬಂದಿಗಳಿಗೆ ಗೇಟ್ ಪಾಸ್ ಕೊಟ್ಟ ಆರೋಗ್ಯ ಇಲಾಖೆ
Vinay Kashappanavar
| Edited By: |

Updated on: Sep 19, 2024 | 9:10 PM

Share

ಬೆಂಗಳೂರು, ಸೆಪ್ಟೆಂಬರ್​ 19: ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು ಎಂಬ ಮಾತಿನಂತೆ ಆರೋಗ್ಯ ಸಿಬ್ಬಂದಿಗಳ ಪರಿಸ್ಥಿತಿ ಆಗಿದೆ. ದಶಕಗಳಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎನ್‌ಹೆಚ್‌ಎಂ (NHM) ಆರೋಗ್ಯ ಸಿಬ್ಬಂದಿಗಳಿಗೆ ಇದೀಗ ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಅತ್ತ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಕುಂಠಿತಗೊಂಡ ಪರಿಣಾಮ ಇತ್ತ ಆರೋಗ್ಯ ಸಿಬ್ಬಂದಿಗಳ ಕೆಲಸಕ್ಕೆ ಕತ್ತರಿ ಹಾಕಲಾಗುತ್ತಿದೆ. ಆದರೆ ಮಕ್ಕಳ ದಾಖಲಾತಿ ಕಡಿಮೆ ಆಗುವುದಕ್ಕೂ, ಆರೋಗ್ಯ ಸಿಬ್ಬಂದಿಗಳು ಕೆಲಸ ಕಳೆದುಕೊಳ್ಳುವುದಕ್ಕೂ ಏನು ಸಂಬಂಧ ಎಂಬ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ.

96 ಸಿಬ್ಬಂದಿಗಳು ಕೆಲಸದಿಂದ ವಜಾ

ಹೌದು ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಂಠಿತಗೊಳ್ಳುತ್ತಿದೆ. ಸಾಕಷ್ಟು ಮಕ್ಕಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ‌ಇದರಿಂದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಇಳಿಕೆಯಾಗಿದ್ದು, ಇದರ ಬೆನ್ನಲ್ಲೇ ಆರೋಗ್ಯ ಸಿಬ್ಬಂದಿಗಳ ಕೆಲಸಕ್ಕೆ ಕುತ್ತು ಎದುರಾಗಿದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳಿಲ್ಲ ಎನ್ನುವ ಕಾರಣಕ್ಕೆ ಮೊದಲ ಹಂತದಲ್ಲಿ ವೈದ್ಯರು, ನರ್ಸ್, ನೇತ್ರತಜ್ಞ ಸೇರಿ 96 ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಇದನ್ನೂ ಓದಿ: ಗದಗ ಜಿಮ್ಸ್ ಆಸ್ಪತ್ರೆ ಚಿಕಿತ್ಸಾ ದರದಲ್ಲಿ ಭಾರೀ ಹೆಚ್ಚಳ; ಕಂಗಾಲಾದ ಬಡ ರೋಗಿಗಳು

ಕೇಂದ್ರ ಸರ್ಕಾರದ ಆರ್​ಬಿಎಸ್​ಕೆ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿ ವರ್ಷ ಹಲವು ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಕಣ್ಣು, ಕಿವಿ, ತೂಕ, ದಡಾರ, ಜಾಂಡೀಸ್ ಹೀಗೆ ಹಲವು ಸಾಂಕ್ರಾಮಿಕ ಖಾಯಿಲೆಗಳಿಗೆ ಆರೋಗ್ಯ ಪರೀಕ್ಷೆ ಮಾಡುತ್ತಾರೆ. ಆದರೆ ಇತ್ತೀಚಿಗೆ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇಳಿಕೆ ಕಂಡಿದೆ. ಪ್ರತಿ 150 ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯಲ್ಲಿ ಪ್ರತಿ ವರ್ಷ ತಪಾಸಣೆ ಮಾಡಬೇಕು. ಆದರೆ ಮಕ್ಕಳು ಕಡಿಮೆ ಇರುವ ಕಾರಣ ಆರೋಗ್ಯ ಸಿಬ್ಬಂದಿಗಳನ್ನು ಕೈ ಬಿಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ, ಭುಗಿಲೆದ್ದ ಆಕ್ರೋಶ

ಹೀಗೆ ಏಕಾಏಕಿ ಕೆಲಸ ಕಳೆದುಕೊಳ್ಳುವ ಭೀತಿಗೆ ಒಳಪಟ್ಟ ಸಿಬ್ಬಂದಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರೋಗ್ಯ ಇಲಾಖೆ ಎನ್‌ಹೆಚ್‌ಎಂ ನೌಕರರನ್ನು ಖಾಯಂ ಮಾಡುವುದಾಗಿ ಹೇಳಿದ್ದ ಸರ್ಕಾರ ಮಾತಿಗೆ ತಪ್ಪಿದೆ. ಕಡಿಮೆ ಮಕ್ಕಳಿರುವ ಜಿಲ್ಲೆಗಳಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿರುವ ಸಿಬ್ಬಂದಿಗಳನ್ನು ಮನೆಗೆ ಕಳುಹಿಸಲು ಮೆಗಾ ಪ್ಲ್ಯಾನ್ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.