ಹೆಚ್ಚು ಹಣ ವಸೂಲಿ ಮಾಡಿದ ಆರೋಪ; ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್

ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗಳ ವಿರುದ್ಧ ಕಿಡಿಕಾರಿದ್ದರು. 5, 10, 15 ಲಕ್ಷ ಬಿಲ್ ನೀಡಿದೆ. ಇದನ್ನು ಕಟ್ಟಲು ನಮ್ಮ ಬಳಿ ಹಣವಿಲ್ಲ ಅಂತ ಅದೆಷ್ಟೋ ಸಂಬಂಧಿಕರು ಆಸ್ಪತ್ರೆಗಳ ವಿರುದ್ಧ ಆಕ್ರೋಶ ಹೊರಹಾಕಿ, ಮೃತದೇಹಗಳನ್ನು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗಿದ್ದರು.

ಹೆಚ್ಚು ಹಣ ವಸೂಲಿ ಮಾಡಿದ ಆರೋಪ; ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್
ಸಾಂದರ್ಭಿಕ ಚಿತ್ರ
Edited By: sandhya thejappa

Updated on: Jun 09, 2021 | 12:54 PM

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ರಾಜ್ಯದಲ್ಲಿ ಬೆಡ್, ಆಕ್ಸಿಜನ್ ಕೊರತೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿತ್ತು. ಸರಿಯಾದ ಸಮಯಕ್ಕೆ ಬೆಡ್​ಗಳು ಸಿಗದೆ, ಆಕ್ಸಿಜನ್ ಸಿಗದೆ ರಸ್ತೆ ಬದಿಯಲ್ಲಿ ಕೊನೆಯುಸಿರೆಳೆದ ಘಟನೆಗಳು ನಡೆದವು. ಈ ನಡುವೆ ಖಾಸಗಿ ಆಸ್ಪತ್ರೆಗಳು ಮಾನವೀಯತೆ ಮರೆತು ಹೆಚ್ಚು ಹೆಚ್ಚು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಹೀಗೆ ಆರೋಪ ಹೊಂದಿದ್ದ ಆಸ್ಪತ್ರೆಗಳಿಗೆ ಇದೀಗ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗಳ ವಿರುದ್ಧ ಕಿಡಿಕಾರಿದ್ದರು. 5, 10, 15 ಲಕ್ಷ ಬಿಲ್ ನೀಡಿದೆ. ಇದನ್ನು ಕಟ್ಟಲು ನಮ್ಮ ಬಳಿ ಹಣವಿಲ್ಲ ಅಂತ ಅದೆಷ್ಟೋ ಸಂಬಂಧಿಕರು ಆಸ್ಪತ್ರೆಗಳ ವಿರುದ್ಧ ಆಕ್ರೋಶ ಹೊರಹಾಕಿ, ಮೃತದೇಹಗಳನ್ನು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗಿದ್ದರು. ಹೀಗೆ ಜನರ ಆರೋಪಗಳನ್ನು ಪರಿಗಣಿಸಿದ ಆರೋಗ್ಯ ಇಲಾಖೆ ಇದೀಗ ನೋಟಿಸ್ ನೀಡಿದೆ.

ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದ ಆರೋಪದ ಮೇಲೆ ಆರೋಗ್ಯ ಇಲಾಖೆ ,ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿದೆ. ಬೆಂಗಳೂರಿನ ಅಶ್ವಿನಿ ಆಸ್ಪತ್ರೆ, ಸೇಂಟ್ ಜಾನ್ಸ್ ಆಸ್ಪತ್ರೆ ಆತ್ರೇಯ ಆಸ್ಪತ್ರೆ, ಕೆ.ಕೆ.ಆಸ್ಪತ್ರೆ ಮತ್ತು ಸ್ಪರ್ಶ ಆಸ್ಪತ್ರೆಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

2021 ಏಪ್ರಿಲ್ 7 ರಿಂದ ಇಲ್ಲಿಯವರೆಗೆ ಎಷ್ಟು ಕೊರೊನಾ ರೋಗಿಗಳು ದಾಖಲಾಗಿದ್ದಾರೆ. ಚಿಕಿತ್ಸೆಗೆ ಎಷ್ಟು ಹಣ ಪಡೆದಿದ್ದೀರಿ ಎಂಬ ಮಾಹಿತಿಯನ್ನು ನೀಡಲು ಸೂಚನೆ ನೀಡಿದೆ. ಅಲ್ಲದೇ ಈ ಎಲ್ಲ ಮಾಹಿತಿಗಳನ್ನು ಮೂರು ದಿನದೊಳಗೆ ನೀಡಬೇಕೆಂದು ಹೇಳಿದೆ. ನಿಗದಿತ ಅವಧಿಯಲ್ಲಿ ಉತ್ತರಿಸದೇ ಇದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ

ಸೋಂಕಿತರ ಯೋಗಕ್ಷೇಮ ವಿಚಾರಿಸಲು ಬಂದ ಆಶಾ ಕಾರ್ಯಕರ್ತೆ ಮೇಲೆ ಮದ್ಯದ ನಶೆಯಲ್ಲಿದ್ದ ಯುವಕರಿಂದ ಹಲ್ಲೆಗೆ ಯತ್ನ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ವೈದ್ಯರ ಕಳ್ಳಾಟ ಪ್ರಕರಣ; ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ

(health department has issued a notice to private hospitals over money laundering charges in Bengaluru)

Web contact

TV9 Kannada

Read More
Follow Us