AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 2ನೇ ಅಲೆ ಭೀತಿ ಬೆನ್ನಲ್ಲೇ ಟಫ್ ರೂಲ್ಸ್ ಜಾರಿ: ಸಭೆ, ಸಮಾರಂಭಕ್ಕೆ ಅತಿಥಿಗಳ ಸಂಖ್ಯೆ ಫಿಕ್ಸ್​

ಕೊರೊನಾ ಎರಡನೇ ಅಲೆಯ ಭೀತಿ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಟಫ್ ರೂಲ್ಸ್ ಜಾರಿಯಾಗಿದೆ. ಸಭೆ, ಸಮಾರಂಭಕ್ಕೆ ಇಂತಿಷ್ಟೇ ಜನ ಸೇರಬೇಕೆಂದು ನಿಯಮ ಮಾಡಲಾಗಿದೆ.

ಕೊರೊನಾ 2ನೇ ಅಲೆ ಭೀತಿ ಬೆನ್ನಲ್ಲೇ ಟಫ್ ರೂಲ್ಸ್ ಜಾರಿ: ಸಭೆ, ಸಮಾರಂಭಕ್ಕೆ ಅತಿಥಿಗಳ ಸಂಖ್ಯೆ ಫಿಕ್ಸ್​
ಸಾಂದರ್ಭಿಕ ಚಿತ್ರ
KUSHAL V
|

Updated on: Mar 12, 2021 | 7:16 PM

Share

ಬೆಂಗಳೂರು: ಕೊರೊನಾ ಎರಡನೇ ಅಲೆಯ ಭೀತಿ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಟಫ್ ರೂಲ್ಸ್ ಜಾರಿಯಾಗಿದೆ. ಸಭೆ, ಸಮಾರಂಭಕ್ಕೆ ಇಂತಿಷ್ಟೇ ಜನ ಸೇರಬೇಕೆಂದು ನಿಯಮ ಮಾಡಲಾಗಿದೆ. ಇದರ ಅಡಿಯಲ್ಲಿ ತೆರೆದ ಪ್ರದೇಶದಲ್ಲಿ ಮದುವೆ ಕಾರ್ಯಕ್ರಮದಲ್ಲಿ 500 ಜನ ಅತಿಥಿಗಳು ಮಾತ್ರ ಪಾಲ್ಗೊಳ್ಳಬಹುದಾಗಿದೆ. ಜೊತೆಗೆ, ಹಾಲ್‌ಗಳಲ್ಲಿ ಮದುವೆ ಕಾರ್ಯಕ್ರಮಕ್ಕೆ 200 ಜನ, ತೆರೆದ ಪ್ರದೇಶದಲ್ಲಿ ಬರ್ತ್‌ಡೇ ಆಚರಣೆಗೆ 100 ಜನ, ಹಾಲ್‌ಗಳಲ್ಲಿ ಬರ್ತ್‌ಡೇ ಆಚರಿಸಿದರೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಇದಲ್ಲದೆ, ಅಂತ್ಯಕ್ರಿಯೆಯಲ್ಲಿ 50 ಜನ ಮಾತ್ರ ಭಾಗಿಯಾಗಬೇಕು. ತೆರೆದ ಪ್ರದೇಶದಲ್ಲಿ ಧಾರ್ಮಿಕ ಆಚರಣೆಗೆ 500 ಜನರು, ತೆರೆದ ಪ್ರದೇಶದಲ್ಲಿ ರಾಜಕೀಯ ಕಾರ್ಯಕ್ರಮದಲ್ಲಿ 500 ಜನ ಭಾಗಿಯಾಗಬಹುದು ಎಂದು ಆರೋಗ್ಯ ಇಲಾಖೆ ಟಫ್ ರೂಲ್ಸ್ ಜಾರಿ ಮಾಡಿದೆ. ನೆರೆ ರಾಜ್ಯಗಳಲ್ಲಿ ಕೊರೊನಾ ಕೇಸ್​ಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಟಫ್ ರೂಲ್ಸ್ ಜಾರಿಯಾಗಿದೆ.

ಇದರ ಜೊತೆಗೆ, ಹಳೇ ಕೊವಿಡ್ ಟೆಸ್ಟ್‌ ಆದೇಶ ಪರಿಷ್ಕೃತಗೊಳಿಸಿದ ಸರ್ಕಾರ ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಆದೇಶ ಪರಿಷ್ಕೃತಗೊಳಿಸಿದೆ. ಇದರನ್ವಯ, ಜಿಲ್ಲೆಗಳಲ್ಲಿ ದಿನ ನಿತ್ಯ ಕೊರೊನಾ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.

ಅಂತೆಯೇ, ಬೆಂಗಳೂರು ನಗರ, BBMP ವ್ಯಾಪ್ತಿಯಲ್ಲಿ 40 ಸಾವಿರ ಟೆಸ್ಟ್, ಮೈಸೂರು ಜಿಲ್ಲೆಯಲ್ಲಿ ದಿನ ನಿತ್ಯ 5 ಸಾವಿರ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಅಷ್ಟೇ ಅಲ್ಲ, ಬೆಳಗಾವಿ ಜಿಲ್ಲೆಯಲ್ಲಿ 3 ಸಾವಿರ ಟೆಸ್ಟ್‌, ಕೊಡಗು 1 ಸಾವಿರ, ದಕ್ಷಿಣ‌ ಕನ್ನಡದಲ್ಲಿ 3 ಸಾವಿರ ಟೆಸ್ಟ್, ಉಡುಪಿ 2 ಸಾವಿರ, ತುಮಕೂರು ಜಿಲ್ಲೆಯಲ್ಲಿ 3,500, ವಿಜಯಪುರ 2 ಸಾವಿರ ಟೆಸ್ಟ್​ಗಳ ಗುರಿಯನ್ನು ನಿಗದಿ ಮಾಡಲಾಗಿದೆ. ಬೆಂಗಳೂರು, ಬಳ್ಳಾರಿ, ಮೈಸೂರು, ದಾವಣಗೆರೆ, ವಿಜಯಪುರ, ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಉಡುಪಿ, ಕಲಬುರಗಿ, ತುಮಕೂರು ಜಿಲ್ಲೆಗಳಲ್ಲಿ ಕಠಿಣ‌ ಕ್ರಮ ಜರುಗಿಸಲಾಗಿದೆ.

ಬೆಂಗಳೂರು ಗ್ರಾಮಾಂತರದಲ್ಲಿ RTPCR ಟೆಸ್ಟ್ ಹೆಚ್ಚಿಸಬೇಕು. ಸೋಂಕಿತರ ಸಂಪರ್ಕಿತರನ್ನು ಕಡ್ಡಾಯವಾಗಿ ಪತ್ತೆ ಹಚ್ಚಬೇಕು. ಸಂಪರ್ಕಿತರ ಪತ್ತೆ ಕಾರ್ಯ ಕಡ್ಡಾಯವಾಗಿ 1:20 ಇರಬೇಕು ಎಂದು ಆರೋಗ್ಯ ಇಲಾಖೆ ರೂಲ್ಸ್​ ಜಾರಿಮಾಡಿದೆ.

ಇದನ್ನೂ ಓದಿ: ‘ರಾಬರ್ಟ್​ ಪೈರಸಿ ಮಾಡಿದವರಿಗೆ ಶಿಕ್ಷೆ ಕೊಡೋದು ದೊಡ್ಡ ವಿಚಾರವಲ್ಲ; ಆದ್ರೆ ಅದರಿಂದ ಬೇರೆ ನಟರ ಹೆಸರು ಬರುತ್ತವೆ’

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​