ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು.. ಮಂಗಳೂರು ಕಾಲೇಜ್ ವಿರುದ್ಧ ನೋಟಿಸ್

|

Updated on: Dec 28, 2020 | 2:18 PM

ಕೊವಿಡ್ ನಿಯಮ ಪಾಲಿಸದ ಮಂಗಳೂರಿನ ಸಿಟಿ ನರ್ಸಿಂಗ್ ಕಾಲೇಜು ಮತ್ತು ರುಕ್ಮಿಣಿ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿಗೆ ಆರೋಗ್ಯ ಇಲಾಖೆ ಶೋಕಾಸ್ ನೋಟಿಸ್ ನೀಡಿದೆ.

ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು.. ಮಂಗಳೂರು ಕಾಲೇಜ್ ವಿರುದ್ಧ ನೋಟಿಸ್
Follow us on

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬಂದಿದ್ದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕೊವಿಡ್ ನಿಯಮ ಪಾಲಿಸದ ಮಂಗಳೂರಿನ ಸಿಟಿ ನರ್ಸಿಂಗ್ ಕಾಲೇಜು ಮತ್ತು ರುಕ್ಮಿಣಿ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿಗೆ ಆರೋಗ್ಯ ಇಲಾಖೆ ಶೋಕಾಸ್ ನೋಟಿಸ್ ನೀಡಿದೆ.

ಜನವರಿ 1ರಿಂದ ಶಾಲಾ-ಕಾಲೇಜು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಸುಮಾರು 613 ವಿದ್ಯಾರ್ಥಿಗಳು ಆಗಮಿಸಿದ್ದರು. ಈ ಪೈಕಿ ಕೇವಲ 200 ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿ ತಂದಿದ್ದರು. ಉಳಿದ ವಿದ್ಯಾರ್ಥಿಗಳು ಕೊವಿಡ್ ಟೆಸ್ಟ್ ಮಾಡಿಸಿರಲಿಲ್ಲ.

ಹೀಗಾಗಿ ಆರೋಗ್ಯ ಇಲಾಖೆಯಿಂದಲೇ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಈ ವೇಳೆ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಹಾಸ್ಟೆಲ್‌ನಲ್ಲಿ ‌ಪ್ರತ್ಯೇಕವಾಗಿರಿಸಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ನರ್ಸಿಂಗ್ ಕಾಲೇಜುಗಳಿಗೂ ನೋಟಿಸ್ ನೀಡಲಾಗಿದೆ.

ತರಗತಿ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳ ಕೊವಿಡ್ ಟೆಸ್ಟ್ ನೆಗಟಿವ್ ವರದಿ ನೀಡುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಸೂಚನೆ ಹೊರಡಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ 2 ನರ್ಸಿಂಗ್​ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ದೃಢ