ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

Covid-19 Cases in Karnataka: ಕೋವಿಡ್ ಹೆಚ್ಚಾಗುವ ಆತಂಕದ ಬೆನ್ನಲ್ಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಗರದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಮವಾರ ಕೋವಿಡ್ ಮಾಕ್ ಡ್ರಿಲ್ ನಡೆಸಲಾಗಿದೆ.

ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ದಿನೇಶ್ ಗುಂಡೂರಾವ್
Follow us
TV9 Web
| Updated By: Ganapathi Sharma

Updated on: Dec 18, 2023 | 12:34 PM

ಕುಶಾಲನಗರ, ಡಿಸೆಂಬರ್ 18: ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್ (Coronavirus) ರೂಪಾಂತರಿ ಜೆಎನ್​.1 (JN.1) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೋಮವಾರ ಹೇಳಿದರು. ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಮಾತನಾಡಿದ ಅವರು, ಕೊರೊನಾ ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.

ಕೊರೊನಾ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜ್ಯದಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆ ಮಾಡಿ ಚರ್ಚೆ ಮಾಡಿದ್ದೇವೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆ ಕೂಡ ಚರ್ಚೆ ಮಾಡಲಾಗಿದೆ. ಹೆಚ್ಚು ಸೋಂಕು ಪತ್ತೆ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್​​ ಸಿದ್ಧವಾಗಿಡಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.

ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಟೆಸ್ಟ್​​ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರಷ್ಟೇ ನಿಷೇಧ, ನಿರ್ಬಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡುತ್ತೇವೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಈ ಮಧ್ಯೆ, ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಳ ವಿಚಾರವಾಹಿ ಕಲಬುರಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕೊರೊನಾ ರೂಪಾಂತರಿ ಎಷ್ಟರಮಟ್ಟಿಗೆ ಅಪಾಯಕಾರಿ ಇದೆ ಅನ್ನೊದು ಇನ್ನೂ ತಿಳಿದಿಲ್ಲ. ಸ್ಪಷ್ಟ ಮಾಹಿತಿ ಬರಬೇಕಾಗಿದೆ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಈಗಾಗಲೇ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. ರಾಜ್ಯದ ಮೆಡಿಕಲ್ ಕಾಲೇಜುಗಳಿಗೂ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರ್ಕಾರ ಎಲ್ಲಾ ರೀತಿಯಲ್ಲೂ ಸನ್ನದ್ದವಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿಗೆ ಕೋವಿಡ್ ಆತಂಕ

ಕೋವಿಡ್ ಹೆಚ್ಚಾಗುವ ಆತಂಕದ ಬೆನ್ನಲ್ಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಗರದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಮವಾರ ಕೋವಿಡ್ ಮಾಕ್ ಡ್ರಿಲ್ ನಡೆಸಲಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ನಿರ್ದೇಶಕ ಡಾ.ನಾಗರಾಜ್ ಅವರಿಂದ ಮಾಕ್ ಡ್ರಿಲ್ ಸಿದ್ಧತೆ ಪರಿಶೀಲನೆ ನಡೆಸಲಾಯಿತು.

ಇದನ್ನೂ ಓದಿ: ಕೇರಳದಲ್ಲಿ ಕೋವಿಡ್ ಹೆಚ್ಚಳ, JN.1: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಆರೋಗ್ಯ ಇಲಾಖೆ ಸಜ್ಜು

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಐಸಿಯು ಬೆಡ್, ಆಕ್ಸಿಜನ್ ಬೆಡ್​​ಗಳ ಸಿದ್ಧತೆ ಮಾಡಲಾಗಿದೆ. ಕೋವಿಡ್ ಚಿಕಿತ್ಸೆಗಾಗಿ ಒಟ್ಟು 170 ಬೆಡ್ ಮೀಸಲು ಇಡಲಾಗಿದೆ. ಈ ಪೈಕಿ 20 ಐಸಿಯು ಬೆಡ್, 10 SARI ಬೆಡ್, 10 COVID ಬೆಡ್, 26 HDU ಬೆಡ್ ಇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ