Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್​, ರೆಮ್​​ಡೆಸಿವರ್​ ಉತ್ಪಾದನೆ ಹೆಚ್ಚಿಸಲಾಗ್ತಿದೆ ಮತ್ತು ಆಮದು ಮಾಡಿಕೊಳ್ಳಲಾಗ್ತಿದೆ ಎಂದು ಮೋದಿ ಹೇಳಿದ್ದಾರೆ: ಡಾ.ಕೆ.ಸುಧಾಕರ್

ಕೊರೊನಾ ಸೋಂಕು ನಿಯಂತ್ರಣಕ್ಕೆ ಹೋಂ ಐಸೋಲೇಷನ್ ಮಾರ್ಗವನ್ನು ಬಲಪಡಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. ಅಲ್ಲದೇ ಹೋಂ ಐಸೋಲೇಷನ್​ನಲ್ಲಿ ಇರುವವರಿಗೆ ಟೆಲಿಕಾಲಿಂಗ್ ಮೂಲಕ ಮಾರ್ಗದರ್ಶನ, ಉಪಚಾರ ನೀಡಲಾಗುವುದು: ಡಾ.ಕೆ.ಸುಧಾಕರ್

ಆಕ್ಸಿಜನ್​, ರೆಮ್​​ಡೆಸಿವರ್​ ಉತ್ಪಾದನೆ ಹೆಚ್ಚಿಸಲಾಗ್ತಿದೆ ಮತ್ತು ಆಮದು ಮಾಡಿಕೊಳ್ಳಲಾಗ್ತಿದೆ ಎಂದು ಮೋದಿ ಹೇಳಿದ್ದಾರೆ: ಡಾ.ಕೆ.ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ
Follow us
Skanda
|

Updated on: Apr 23, 2021 | 1:38 PM

ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿ, ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಹೋಂ ಐಸೋಲೇಷನ್ ಮಾರ್ಗವನ್ನು ಬಲಪಡಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. ಅಲ್ಲದೇ ಹೋಂ ಐಸೋಲೇಷನ್​ನಲ್ಲಿ ಇರುವವರಿಗೆ ಟೆಲಿಕಾಲಿಂಗ್ ಮೂಲಕ ಮಾರ್ಗದರ್ಶನ, ಉಪಚಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಆಕ್ಸಿಜನ್​, ರೆಮ್​ಡೆಸಿವರ್​ ಬಗ್ಗೆ ಮಾತನಾಡಿ, ಅವುಗಳ ಉತ್ಪಾದನೆ ಹೆಚ್ಚು ಮಾಡಲಾಗಿದೆ. ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಿಳಿಸಿದ್ದಾರೆ. ಆಕ್ಸಿಜನ್​ ಪುರೈಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮನವಿ ಸಲ್ಲಿಸಿದ್ದಾರೆ. ಈ ತಿಂಗಳಾಂತ್ಯಕ್ಕೆ ಪ್ರತಿ ದಿನ ಸಾವಿರ ಟನ್ ಆಕ್ಸಿಜನ್ ಪೂರೈಕೆ ಆಗಲಿದೆ. ಮೇ ಆರಂಭದಲ್ಲಿ 1,500 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಆಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಿಸಿದ್ದಾರೆ. ಈ ವೇಳೆ ಬೆಂಗಳೂರಿಗೆ ಮೇಕ್ ಶಿಫ್ಟ್ ಆಸ್ಪತ್ರೆಗಳ ಬಗ್ಗೆ ಪ್ರಸ್ತಾಪವಾಗಿದೆ. ಅದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಮೊದಲ ಅಲೆ ವೈರಾಣು ಹಾಗೂ ರೂಪಾಂತರಿ ವೈರಾಣುವಿನ ಸ್ವಭಾವ ಹೇಗೆ ಬದಲಾಗಿದೆ, ಅವುಗಳ ವ್ಯತ್ಯಾಸವೇನು ಎಂಬ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ದೃಢಪಟ್ಟರೆ ಆತಂಕ ಪಡಬೇಡಿ, ಜನರು ಪ್ರಾಣಾಯಾಮ ಮಾಡಬೇಕು -ಡಾ. ಕೆ.ಸುಧಾಕರ್ 

ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋಗಲಿ: ಈ ಬಗ್ಗೆ ಪ್ರಕಾಶ್ ಅಮ್ಮಣ್ಣಾಯ ಹೇಳೋದೇನು?