ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾಡಲು ರಾಜ್ಯ ಸರ್ಕಾರ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್

ಕೆಲವು ಕಡೆ ಖಾಸಗಿ ಮೆಡಿಕಲ್ ಕಾಲೇಜುಗಳಿವೆ. ಆದರೆ, ಜಿಲ್ಲಾ ಆಸ್ಪತ್ರೆ ಇದ್ದು ಸರ್ಕಾರಿ ಮೆಡಿಕಲ್ ಕಾಲೇಜು ಮಾಡಬೇಕು ಎಂದು ಮುಖ್ಯಮಂತ್ರಿ ನೇತ್ರತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದೇ ವರ್ಷ ಮೆಡಿಕಲ್ ಕಾಲೇಜು ಆರಂಭ ಆಗಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾಡಲು ರಾಜ್ಯ ಸರ್ಕಾರ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
Edited By:

Updated on: Jul 10, 2021 | 5:01 PM

ದಾವಣಗೆರೆ: ಇಲ್ಲಿಯೂ ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾಡಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇದೇ ಕಾರಣಕ್ಕೆ ಪರಿಶೀಲನೆಗೆ ಬಂದಿರುವೆ. ಖಾಸಗಿಯವರ ಸಹ ಭಾಗಿತ್ವದಲ್ಲಿ ಮೆಡಿಕಲ್ ಕಾಲೇಜ್ ಆರಂಭ ಆಗಲಿದೆ ಎಂದು ದಾವಣಗೆರೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಇಂದು (ಜುಲೈ 10) ಹೇಳಿಕೆ ನೀಡಿದ್ದಾರೆ.

ಕೆಲವು ಕಡೆ ಖಾಸಗಿ ಮೆಡಿಕಲ್ ಕಾಲೇಜುಗಳಿವೆ. ಆದರೆ, ಜಿಲ್ಲಾ ಆಸ್ಪತ್ರೆ ಇದ್ದು ಸರ್ಕಾರಿ ಮೆಡಿಕಲ್ ಕಾಲೇಜು ಮಾಡಬೇಕು ಎಂದು ಮುಖ್ಯಮಂತ್ರಿ ನೇತ್ರತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದೇ ವರ್ಷ ಮೆಡಿಕಲ್ ಕಾಲೇಜು ಆರಂಭ ಆಗಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಎರಡನೇ ಪ್ಯಾಕೇಜ್​ನಲ್ಲಿ ಕರ್ನಾಟಕಕ್ಕೆ 1,500 ಕೋಟಿ ರೂಪಾಯಿ ಬರುತ್ತದೆ. ಮೂರನೇ ಅಲೆ ಸಂಭ್ಯಾವದ ಹಿನ್ನಲೆಯಲ್ಲಿ ದೊರೆಯುತ್ತಿರುವ ವಿಶೇಷ ಪ್ಯಾಕೇಜ್ ಆಗಿದ್ದು, ಜಿಲ್ಲಾ ಹಾಗು ತಾಲೂಕು ಕೇಂದ್ರ, ಪಿಹೆಚ್​ಸಿಗಳಲ್ಲಿ ಮಕ್ಕಳ ವಿಶೇಷ ವಾರ್ಡ್ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲು ಹಣ ಸದ್ಬಳಕೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಹತ್ತು ಲಕ್ಷ ಜನಸಂಖ್ಯೆಯಲ್ಲಿ 50 ಜನಕ್ಕೂ ಕೊರೊನಾ ತಗುಲಬಾರದು
ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿಗಳಿವೆ. ಹಾಗಂತ ಯಾವ ಪೋಷಕರು ಕೂಡ ಮೈಮರೆಯುವಂತಿಲ್ಲ. ಅನ್​ಲಾಕ್ ಆಗಿದೆ ಎಂದು ಯಾರೂ ಮೈಮೆರಯುವಂತಿಲ್ಲ. ಎರಡನೇ ಡೋಸ್ ಪಡೆಯುವವರೆಗೂ ಎಲ್ಲರೂ ಕೊವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈಗಾಗಲೇ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಕೇರಳದಲ್ಲಿ ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಕೇಸ್ ಬರುತ್ತಿದೆ. ಆ ಹಿನ್ನಲೆಯಲ್ಲಿ ಕರ್ನಾಟಕದ ಗಡಿಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕರ್ನಾಟಕದಲ್ಲಿ ಕೇಸ್​ಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಶೇಕಡಾ 1.5 ರ ದರದಲ್ಲಿ ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಪ್ರತಿದಿನ 1.50 ಲಕ್ಷದಷ್ಟು ಟೆಸ್ಟಿಂಗ್ ಮಾಡುತ್ತಿದ್ದೇವೆ ಸದ್ಯ ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹತ್ತು ಲಕ್ಷ ಜನ ಸಂಖ್ಯೆಯಲ್ಲಿ ಐವತ್ತು ಜನಕ್ಕೂ ಕೋವಿಡ್ ಸೋಂಕು ತಗುಲಬಾರದು. ಪ್ರವಾಸಿ ತಾಣಗಳ ಮೇಲೆ ಕಣ್ಣಿಡಲಾಗಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಸುತ್ತಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಆಗಸ್ಟ್‌ ವೇಳೆಗೆ ರಾಜ್ಯಕ್ಕೆ ದೊಡ್ಡಮಟ್ಟದಲ್ಲಿ ಲಸಿಕೆ ಬರಲಿದೆ. ಮುಖ್ಯಮಂತ್ರಿಗಳು ಅಧಿಕೃತವಾಗಿ ನನ್ನ ದೆಹಲಿಗೆ ಕಳುಹಿಸಿದ್ದರು. ಸಂಬಂಧಿಸಿದ ಸಚಿವರು, ಅಧಿಕಾರಿಗಳ ಭೇಟಿಯಾಗಿದ್ದೇನೆ. ಹಂತಹಂತವಾಗಿ ಲಸಿಕೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದೂ ಸುಧಾಕರ್ ಹೇಳಿದ್ದಾರೆ.

ಲಸಿಕೆ ವಿಚಾರವಾಗಿ ಹೈಕೋರ್ಟ್‌ ಕೆಲ ಸೂಚನೆ ನೀಡಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಕೆಲಸ ಮಾಡಲಿದೆ. ಅನ್‌ಲಾಕ್‌ ಆಗಿದೆ ಎಂದು ಜನರು ಮೈ ಮರೆಯುವಂತಿಲ್ಲ. ಶೇ. 60ರಷ್ಟು ಜನರಿಗೆ ಲಸಿಕೆ ನೀಡುವವರೆಗೂ ಎಚ್ಚರಿಕೆ ಬೇಕು. ರಾಜ್ಯದಲ್ಲಿ 2.5 ಕೋಟಿ ಜನರಿಗೆ ಲಸಿಕೆ ಕೊಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.66ರಷ್ಟು ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಸೈಕಲ್​ನಲ್ಲಿ ಓಡಾಡಿದ್ರೆ ಒಳ್ಳೆಯ ವ್ಯಾಯಮ ಆಗುತ್ತೆ ಎಂದ ಬಿಜೆಪಿ ಸಂಸದ!

ನಮ್ಮದು ರೈತ ಪರ ಸರ್ಕಾರ; ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ: ಬಿ ಎಸ್ ಯಡಿಯೂರಪ್ಪ

Published On - 4:48 pm, Sat, 10 July 21