ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ಗೆ ಬ್ರೇಕ್​; ಮಾರ್ಗಸೂಚಿ ಪಾಲನೆ ಕಡ್ಡಾಯ – ಸಚಿವ ಡಾ. ಸುಧಾಕರ್ ಸ್ಪಷ್ಟನೆ

ಉಪಚುನಾವಣೆಗೂ ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ. ಧಾರ್ಮಿಕ ಕ್ಷೇತ್ರಗಳಿಗೂ ಕಠಿಣ ನಿಯಮ ಜಾರಿಗೊಳಿಸಿದ್ದೇವೆ. ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ಗೆ ಬ್ರೇಕ್​; ಮಾರ್ಗಸೂಚಿ ಪಾಲನೆ ಕಡ್ಡಾಯ - ಸಚಿವ ಡಾ. ಸುಧಾಕರ್ ಸ್ಪಷ್ಟನೆ
ನಟ ಪುನೀತ್ ರಾಜ್​ಕುಮಾರ್ ಮನವಿಗೆ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆಯೇನು?
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Apr 03, 2021 | 11:45 AM

ಬೆಂಗಳೂರು: ಸಿನಿಮಾ ಥಿಯೇಟರ್​ಗಳಲ್ಲಿ ಶೇ 100ರಷ್ಟು ಆಸನಗಳಿಗೆ ಅವಕಾಶ ನೀಡಬೇಕು ಎಂದು ನಟ ಪುನೀತ್ ರಾಜ್​ಕುಮಾರ್ ಮನವಿ ಮಾಡಿಕೊಂಡ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಎಲ್ಲಾ ವಲಯಗಳ ಬಗ್ಗೆಯೂ ನನಗೆ ಗೌರವ, ಅಭಿಮಾನ ಇದೆ. ಎಲ್ಲಾ ಕ್ಷೇತ್ರಗಳಿಗೂ ನೂತನ ಕೊರೊನಾ ತಡೆ ಮಾರ್ಗಸೂಚಿ ಅನ್ವಯವಾಗಲಿದೆ. ಇದರ ಹಿಂದೆ ಕೇವಲ ಕೊರೊನಾ ಸೋಂಕು ತಡೆಯುವ ಉದ್ದೇಶವಿದೆಯೇ ಹೊರತು, ಬೇರೇನೂ ಇಲ್ಲ. ಈ ವಿಷಯದಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟೀಕರಣ ನೀಡಿದ್ದಾರೆ.

ಶಾಲೆ, ಜಿಮ್, ಸ್ವಿಮ್ಮಿಂಗ್ ಪೂಲ್, ಅಪಾರ್ಟ್‌ಮೆಂಟ್, ಮದುವೆ​ಗಳಿಗೂ ಕೊರೊನಾ ತಡೆಯ ಹೊಸ ಮಾರ್ಗಸೂಚಿ ಅನ್ವಯವಾಗಲಿದೆ. ಇವೆಲ್ಲವುಗಳಿಗೂ ನಿಯಮ ತೆಗೆದರೆ ಏನಾಗಲಿದೆ ಎಂಬುದನ್ನು ನೀವೇ ಯೋಚಿಸಿ. ಅಲ್ಲದೇ ರಾಜಕೀಯ ಕ್ಷೇತ್ರದ ಉಪಚುನಾವಣೆಗೂ ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ. ಧಾರ್ಮಿಕ ಕ್ಷೇತ್ರಗಳಿಗೂ ಕಠಿಣ ನಿಯಮ ಜಾರಿಗೊಳಿಸಿದ್ದೇವೆ. ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ನಿನ್ನೆ ಮನವಿ ಮಾಡಿಕೊಂಡಿದ್ದ ‘ಯುವರತ್ನ’ ಪುನೀತ್

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ಗುರುವಾರಷ್ಟೇ ತೆರೆಗೆ ಬಂದಿತ್ತು. ಸಿನಿಮಾವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಹೀಗಿರುವಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ ತಂದಿತ್ತು. ಚಿತ್ರಮಂದಿರದಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡುವ ಆದೇಶ ಹೊರಡಿಸಿದೆ. ಇದಕ್ಕೆ ಪುನೀತ್​ ರಾಜ್​ಕುಮಾರ್​ ಅಸಮಾಧಾನ ಹೊರ ಹಾಕಿದ್ದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಈ ಬಗ್ಗೆ ಫೇಸ್​ಬುಕ್​ ಲೈವ್​ನಲ್ಲಿ ಬಂದು ಪುನೀತ್​ ರಾಜ್​ಕುಮಾರ್​ ಬೇಸರ ಹೊರ ಹಾಕಿದ್ದರು. ನಂತರ ಟಿವಿ9 ಕನ್ನಡದ ಜತೆಗೂ ಅವರು ಮಾತನಾಡಿದ್ದರು.

ದಯವಿಟ್ಟು ಥಿಯೇಟರ್​​ಗಳಿಗೆ ಶೇ 100ರಷ್ಟು ಅವಕಾಶ ನೀಡಿ. ಜನರು ಕೂಡ ಮುನ್ನೆಚ್ಚರಿಕೆ ಕ್ರಮದಿಂದಲೇ ಚಿತ್ರಮಂದಿರಕ್ಕೆ ಬಂದಿರುತ್ತಾರೆ. ಶೇ 50ರಷ್ಟು ಅವಕಾಶ ನೀಡಿದರೆ ನಿರ್ಮಾಪಕರ ಗತಿ ಏನು? ಮುಂದೆ ಏನು ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಮೊದಲೇ ನಮಗೆ ಹೇಳಿದ್ರೆ ಸಿನಿಮಾ ರಿಲೀಸ್​ ಮಾಡುತ್ತಿರಲಿಲ್ಲ ಎಂದು ಪುನೀತ್​ ಟಿವಿ9 ಕನ್ನಡದ ಜತೆ ಬೇಸರ ಹಂಚಿಕೊಂಡಿದ್ದರು.

ಎಲ್ಲರೂ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಚುನಾವಣೆ ರ್ಯಾಲಿಗಳಲ್ಲಿ ಸಾವಿರಾರು ಜನರು ಸೇರುತ್ತಿದ್ದಾರೆ. ಹೀಗಿರುವಾಗ ಸಿನಿಮಾ ರಂಗವನ್ನು ಟಾರ್ಗೆಟ್​ ಮಾಡುವುದು ಸರಿಯಲ್ಲ ಎಂದು ಯುವರತ್ನ ಸಿನಿಮಾದ ನಿರ್ದೇಶಕ ಸಂತೋಷ್​ ಆನಂದ್​ ರಾಮ್ ಫೇಸ್​ಬುಕ್​ ಲೈವ್​ನಲ್ಲಿ​ ಹೇಳಿದ್ದರು.

​ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು. ಈ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಅವರಿಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್​ ಇತ್ತೀಚೆಗೆ ಸಲಹೆ ನೀಡಿದ್ದರು.  ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಇದು ಸರ್ಕಾರವನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಹೀಗಾಗಿ, ಚಿತ್ರಮಂದಿರಗಳಲ್ಲಿ ಶೇ 50 ಆಸನ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ.

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್