ವಿವಾದಕ್ಕೀಡಾದ ‘ಏಕಪತ್ನೀವ್ರತಸ್ಥ’ ಹೇಳಿಕೆ; ಸಚಿವ ಡಾ.ಕೆ.ಸುಧಾಕರ್ ವಿಷಾದ

| Updated By: ganapathi bhat

Updated on: Mar 24, 2021 | 6:44 PM

‘ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ’ ಎಂದು ಸುಧಾಕರ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ವಿವಾದಕ್ಕೀಡಾದ ‘ಏಕಪತ್ನೀವ್ರತಸ್ಥ’ ಹೇಳಿಕೆ; ಸಚಿವ ಡಾ.ಕೆ.ಸುಧಾಕರ್ ವಿಷಾದ
3ನೇ ಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ, ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡ್ತೀವಿ: ಡಾ. ಕೆ. ಸುಧಾಕರ್
Follow us on

ಬೆಂಗಳೂರು: ಎಲ್ಲ ಶಾಸಕರು ಏಕಪತ್ನೀವ್ರತಸ್ಥರೇ ಎಂಬ ಸಚಿವ ಡಾ.ಕೆ.ಸುಧಾಕರ ಅವರ ಪ್ರಶ್ನೆ ವಿವಾದಕ್ಕೀಡಾಗಿದೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಶಾಸಕರ ಮೇಲೆ ಎಸ್​ಐಟಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ಶಾಸಕರನ್ನು ಸೇರಿಸಿ ಭೋಜನಕೂಟ ನಡೆಸಿರುವ ಕಾಂಗ್ರೆಸ್​ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಈ ಕುರಿತು ದೂರು ನೀಡಲು ಮುಂದಾಗಿದೆ.

ತಮ್ಮ ಹೇಳಿಕೆ ಹಲವು ಆಯಾಮಗಳಲ್ಲಿ ವಿವಾದಕ್ಕೀಡಾಗಿದ್ದನ್ನು ಮನಗಂಡ ಸಚಿವ ಡಾ.ಕೆ.ಸುಧಾಕರ್ ಇದೀಗ ತಮ್ಮ ಹೇಳಿಕೆಗೆ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಲು ಮುಂದಾಗಿದ್ದಾರೆ. ‘ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನಾನು ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ’ ಎಂದು ಡಾ.ಕೆ.ಸುಧಾಕರ ಟ್ವೀಟ್ ಮಾಡಿದ್ದಾರೆ.

‘ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ಧ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

‘ನನ್ನ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರು ಅರ್ಥ ಮಾಡಿಕೊಂಡರೆ ಸಾಕು. ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ. ನಮ್ಮಗಳ ತೇಜೋವಧೆ ಮಾಡಲು ಹೊರಟವರ ಉದ್ದೇಶ ಈಡೇರಲ್ಲ’ ಎಂದು ಸುಧಾಕರ ಟ್ವೀಟ್​ನಲ್ಲಿ ಹೇಳಿದ್ದಾರೆ.

ನನ್ನ ಹೇಳಿಕೆ ಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು .ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ . ನಮ್ಮಗಳ ತೇಜೋವಧೆ ಮಾಡಲು ಹೊರಟವರ ಉದ್ದೇಶ ಈಡೇರಲ್ಲ.

— Dr Sudhakar K (@mla_sudhakar) March 24, 2021

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

ಇದನ್ನೂ ಓದಿ: ಡಾ.ಕೆ.ಸುಧಾಕರ ನೀಡಿದ ‘ಏಕಪತ್ನಿವ್ರತಸ್ಥ’ ಹೇಳಿಕೆಗೆ ಕಾಂಗ್ರೆಸ್ ಪ್ರತ್ಯಸ್ತ್ರ: ಸಿದ್ದರಾಮಯ್ಯ ಮನೆಯಲ್ಲಿ ರಣತಂತ್ರ

 

Published On - 4:15 pm, Wed, 24 March 21