ಯುಗಾದಿ ಬರುತ್ತಿದೆ ಎಂದು ಕೊರೊನಾ ಸುಮ್ಮನಾಗಲ್ಲ.. ಪಟ್ಟಣದಿಂದ ಹಳ್ಳಿಗೆ ಹೋಗುವವರು ಎಚ್ಚರದಿಂದಿರಿ: ಆರೋಗ್ಯ ಸಚಿವ ಸುಧಾಕರ್

ಹಳ್ಳಿಗಳಲ್ಲಿ ಕೊರೊನಾ ಸೋಂಕು ಹರದಂತೆ ನೋಡಿಕೊಳ್ಳಬೇಕು. ಪಟ್ಟಣದಿಂದ ಹಳ್ಳಿಗೆ ಹೋಗುತ್ತಿರುವವರು ಕೊರೊನಾ ಕುರಿತಾಗಿ ಎಚ್ಚರಿಕೆಯಿಂದರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಮನವಿ ಮಾಡಿದರು.

ಯುಗಾದಿ ಬರುತ್ತಿದೆ ಎಂದು ಕೊರೊನಾ ಸುಮ್ಮನಾಗಲ್ಲ.. ಪಟ್ಟಣದಿಂದ ಹಳ್ಳಿಗೆ ಹೋಗುವವರು ಎಚ್ಚರದಿಂದಿರಿ: ಆರೋಗ್ಯ ಸಚಿವ ಸುಧಾಕರ್
ಆರೋಗ್ಯ ಸಚಿವ ಡಾ. ಸುಧಾಕರ್
Follow us
shruti hegde
| Updated By: guruganesh bhat

Updated on: Apr 08, 2021 | 1:13 PM

ಬೆಂಗಳೂರು: ಇನ್ನೇನು ಯುಗಾದಿ ಹಬ್ಬ ಬರುತ್ತಿದೆ ಎಂದು ಕೊರೊನಾ ಸುಮ್ಮನಾಗಲ್ಲ. ಬೆಂಗಳೂರಿನಿಂದ ಗ್ರಾಮೀಣ ಭಾಗಕ್ಕೆ ತೆರಳುವವರು ಎಚ್ಚರಿಕೆಯಿಂದ ಇರಬೇಕು. ಹಳ್ಳಿಗಳಲ್ಲಿ ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳಬೇಕು. ನಗರದಲ್ಲಿ ಒಂದು ಕೋಟಿಗೂ ಹೆಚ್ಚು ಜನಸಂಖ್ಯೆ ಇದೆ. 5 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಪ್ರತಿಯೊಬ್ಬರೂ ಜಾಗರೂಕರಾಗಿರಿ ಎಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ನಿನ್ನೆ ಒಂದೇ ದಿನ 7,000 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ನಗರದಲ್ಲಿ 5,000 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳ ಜತೆ ಸಭೆ ನಡೆಸಿ ಆಡಳಿತಾತ್ಮಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಎಲ್ಲ ಹಬ್ಬಗಳಿಗೂ ನಿಯಮ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಅವರು ಹೇಳಿದರು.

ಕೊರೊನಾ ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜತೆ ವಿಡಿಯೊ ಸಂವಾದ ಸಭೆ ನಡೆಯಲಿದೆ. ಕೊವಿಡ್ ಎರಡನೇ ಅಲೆ ನಿಯಂತ್ರಣದ ಬಗ್ಗೆ ಹಾಗೂ ಮಾರ್ಗಸೂಚಿ ಅನುಷ್ಠಾನದ ಬಗ್ಗೆ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪನವರು ರಾಜ್ಯದ ಸ್ಥಿತಿ ಗತಿಯ ಬಗ್ಗೆ ಪ್ರಧಾನಿ ಮೋದಿ ಅವರಿಗೆ ತಿಳಿಸುತ್ತಾರೆ ಎಂದು ಮಾಹಿತಿ ಹಂಚಿಕೊಂಡರು.

50 ಲಕ್ಷಕ್ಕೂ ಅಧಿಕ ಲಸಿಕೆ ಕೊಡುವ ಕೆಲಸ ಆಗಲಿದೆ. ಈ ಕುರಿತಂತೆ 13 ಜಿಲ್ಲೆಗಳ ಜಿಲ್ಲಾಡಳಿತದ ಜೊತೆ ನಿನ್ನೆ ವಿಡಿಯೊ ಸಂವಾದ ಮಾಡಲಾಗಿದೆ. ಎಲ್ಲಾ ಕಡೆಗಳಲ್ಲೂ ಸೋಂಕಿನ ಪ್ರಮಾಣ ದಿನ ಸಾಗುತ್ತಿದ್ದಂತೆ ಹೆಚ್ಚುತ್ತಲೇ ಇದೆ. ಅವರಿಗೆ ನಿರ್ದಿಷ್ಟ ಮಾರ್ಗಸೂಚಿ ನೀಡಲಾಗಿದ್ದು, ಪ್ರತಿ ಜಿಲ್ಲೆಗಳಲ್ಲಿ ವಾರ್ ರೂಮ್, ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೊರೊನಾ ಎರಡನೇ ಅಲೆ ಭೀತಿಗೆ ತತ್ತರ.. ಮಧ್ಯಪ್ರದೇಶದಲ್ಲಿ ನಾಳೆಯಿಂದ ಲಾಕ್​ಡೌನ್

ಮೈಸೂರಿನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಇದ್ದರಷ್ಟೆ ಸಿನಿಮಾ ವೀಕ್ಷಣೆಗೆ ಅವಕಾಶ: ಏಪ್ರಿಲ್ 10 ರಿಂದ 20 ರವರೆಗೆ ಅನ್ವಯ!

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್