ಕೊವಿಡ್ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ ಕ್ರಮ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಆಶಾ ಕಾರ್ಯಕರ್ತೆಯರಿಗೆ ತಾಂತ್ರಿಕ ಕಾರಣದಿಂದ ವೇತನ ನೀಡಲು ಸಮಸ್ಯೆ ಆಗಿತ್ತು. 17 ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ವೇತನ ನೀಡಲಾಗಿದೆ. ಉಳಿದ ಜಿಲ್ಲೆಗಳ ಕಾರ್ಯಕರ್ತೆಯರಿಗೆ 2-3 ದಿನದಲ್ಲಿ ವೇತನ ನೀಡುವುದಾಗಿ ಸೂಚನೆ ನೀಡಲಾಗಿದೆ.

ಕೊವಿಡ್ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ ಕ್ರಮ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Aug 21, 2021 | 9:55 AM

ಬೆಂಗಳೂರು: ಕೊವಿಡ್ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. 5 ವರ್ಷ ಜೈಲು, 1 ಲಕ್ಷ ರೂಪಾಯಿ ದಂಡ ವಿಧಿಸುತ್ತೇವೆ. ಯಾರೂ ಸಹ ವಾರಿಯರ್ಸ್ ಮೇಲೆ ಹಲ್ಲೆ ಮಾಡಬಾರದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಇಂದು (ಮೇ 24) ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಕೆಲ ತಜ್ಞ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಇನ್ಮುಂದೆ ವೈದ್ಯರ ಕೆಲಸದ ಪಾಳಿಯನ್ನು ನಮಗೆ ಕಳುಹಿಸಿಕೊಡಬೇಕು. ನಾನು ಭೇಟಿ ನೀಡಿದ್ದ 12 ಜಿಲ್ಲೆಗಳಲ್ಲಿ ಚಿಕಿತ್ಸೆಗೆ ವೈದ್ಯರು ಹಿಂದೇಟು ಹಾಕಿರುವ ಕುರಿತು ದೂರುಗಳು ಕೇಳಿಬಂದಿದೆ. ಕಿರಿಯ ವೈದ್ಯರಿಂದ ಕೆಲಸ ಮಾಡಿಸಿ ಹಿರಿಯ ವೈದ್ಯರು ಗೈರು ಹಾಜರಾಗುತ್ತಿದ್ದಾರೆ ಎಂದು ಡಾ.ಕೆ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.

ವೈದ್ಯರ ನೇಮಕಾತಿಯಿಂದ ಆರೋಗ್ಯ ವ್ಯವಸ್ಥೆ, ಚಿಕಿತ್ಸೆ ಗುಣಮಟ್ಟ ಸುಧಾರಣೆ ಅನೇಕ ತಾಲೂಕುಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ನೇಮಕ ಪ್ರಕ್ರಿಯೆ ನಡೆಸುತ್ತೇವೆ. ಈಗಾಗಲೇ 1,763 ವೈದ್ಯರನ್ನು ನೇಮಕ ಮಾಡುವ ಪ್ರಕ್ರಿಯೆ ಮುಗಿದಿದೆ. 715 ತಜ್ಞ ವೈದ್ಯರು, 57 ಜನರಲ್ ಸರ್ಜನ್​ಗಳ ನೇಮಕ ಮಾಡಲಾಗಿದೆ. 147 ಗೈನಕಾಲಜಿಸ್ಟ್, 40 ಇಎನ್​ಟಿ ತಜ್ಞ ವೈದ್ಯರ ನೇಮಕವಾಗಿದೆ. 35 ಚರ್ಮ ರೋಗ ತಜ್ಞರು, 142 ಅರಿವಳಿಕೆ ತಜ್ಞರ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ. 153 ಮಕ್ಕಳ ತಜ್ಞರು, 51 ನೇತ್ರತಜ್ಞ ವೈದ್ಯರನ್ನು ನೇಮಿಸಲಾಗಿದೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ವೈದ್ಯರ ನೇಮಕಾತಿ ಆಗಿಲ್ಲ. ಇದರಿಂದ ಆರೋಗ್ಯ ವ್ಯವಸ್ಥೆ, ಚಿಕಿತ್ಸೆ ಗುಣಮಟ್ಟ ಸುಧಾರಣೆ ಆಗಲಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.

ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ವೈದ್ಯರ ನೇಮಕಾತಿ ಪ್ರಕ್ರಿಯೆಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. ಆ ಭಾಗಗಳಿಗೆ ಮೊದಲು ತಜ್ಞ ವೈದ್ಯರ ನೇಮಕ ಮಾಡುತ್ತೇವೆ. 3-4 ದಿನದಲ್ಲಿ ವೈದ್ಯರ ಸ್ಥಳ ನಿಯೋಜನಕ್ಕೆ ಮನವಿ ಮಾಡಿದ್ದೇನೆ ಎಂದು ವೈದ್ಯರ ನೇಮಕಾತಿ ಪ್ರಕ್ರಿಯೆ ಬಗ್ಗೆ ತಿಳಿಸಿದ್ದಾರೆ.

ಬ್ಲ್ಯಾಕ್ ಫಂಗಸ್ ಬಗ್ಗೆ ಮಾಹಿತಿ ರಾಜ್ಯದಲ್ಲಿ ಈವರೆಗೆ 12 ಜನ ಬ್ಲ್ಯಾಕ್​ ಫಂಗಸ್​ಗೆ ಬಲಿಯಾಗಿದ್ದಾರೆ. 446 ಜನರಿಗೆ ಬ್ಲ್ಯಾಕ್​ ಫಂಗಸ್​ ಸೋಂಕು ತಗುಲಿದ ಶಂಕೆ ಇದೆ. ಇಂದಿನ ಸಭೆಯಲ್ಲಿ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಸಿಸಿಟಿವಿ ಅಳವಡಿಕೆ ಬಗ್ಗೆ ಚರ್ಚೆ ಮಾಡಲಾಗಿದೆ. ಆಸ್ಪತ್ರೆಗಳಲ್ಲೂ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಲು ಚರ್ಚಿಸಲಾಗಿದೆ. ರೋಗಿಗಳ ಸಂಬಂಧಿಕರು ಆಸ್ಪತ್ರೆಗೆ ಬರುವುದನ್ನ ತಪ್ಪಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಸುಧಾಕರ್ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಮೆಡಿಕ್ ಆಕ್ಸಿಜನ್​ ಹಂಚಿಕೆ ಹೆಚ್ಚಳ ಮಾಡಲಾಗುವುದು. ರಾಜ್ಯಕ್ಕೆ ಕೇಂದ್ರದಿಂದ 1,200 ಮೆಟ್ರಿಕ್ ಟನ್ ಆಕ್ಸಿಜನ್​ ಹಂಚಿಕೆ ಮಾಡಲಾಗಿದೆ. ಹಾಗಾಗಿ ನಾನು ಪ್ರಧಾನ ಮಂತ್ರಿ, ಕೇಂದ್ರ ಪ್ರಹ್ಲಾದ್​ ಜೋಶಿ, ಪಿಯೂಷ್​ ಗೋಯಲ್​​ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಆಕ್ಸಿಜನ್ ಹಂಚಿಕೆ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ.

ವಾರದೊಳಗೆ ಆಶಾ ಕಾರ್ಯಕರ್ತೆಯರ ಸಂಬಳ ಆಶಾ ಕಾರ್ಯಕರ್ತೆಯರಿಗೆ ತಾಂತ್ರಿಕ ಕಾರಣದಿಂದ ವೇತನ ನೀಡಲು ಸಮಸ್ಯೆ ಆಗಿತ್ತು. 17 ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ವೇತನ ನೀಡಲಾಗಿದೆ. ಉಳಿದ ಜಿಲ್ಲೆಗಳ ಕಾರ್ಯಕರ್ತೆಯರಿಗೆ 2-3 ದಿನದಲ್ಲಿ ವೇತನ ನೀಡುವುದಾಗಿ ಸೂಚನೆ ನೀಡಲಾಗಿದೆ. ಇನ್ಮುಂದೆ ವಾರದೊಳಗೆ ಕಾರ್ಯಕರ್ತರಿಗೆ ವೇತನ ನೀಡುತ್ತೇವೆ ಎಂದು ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ ವಿಚಾರವಾಗಿ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಟೆಲಿ ಐಸಿಯು ವ್ಯವಸ್ಥೆ ಪರಿಣಾಮಕಾರಿಯಾಗಿದೆ. ಪರಿಣಾಮಕಾರಿ ಚಿಕಿತ್ಸೆ ನೀಡಿ ಮರಣ ಪ್ರಮಾಣ ತಗ್ಗಿಸುತ್ತೇವೆ ಎಂದು ಹೇಳಿದ್ದಾರೆ. ಜೊತೆಗೆ ಲಸಿಕೆ ನೀಡಿಕೆ ಬಗ್ಗೆ ಮಾತನಾಡಿ, ಈವರೆಗೆ 1 ಕೋಟಿ 5 ಲಕ್ಷ ಡೋಸ್ ಕೊವಿಶೀಲ್ಡ್​ ಲಸಿಕೆ ಕೇಂದ್ರದಿಂದ ರಾಜ್ಯಕ್ಕೆ ಬಂದಿದೆ. ಈವರೆಗೆ ರಾಜ್ಯದಲ್ಲಿ 1.22 ಕೋಟಿ ಜನರಿಗೆ ಲಸಿಕೆ ನೀಡಿಕೆಯಾಗಿದೆ. ನಮ್ಮಲ್ಲಿ ಈಗ 11.46 ಲಕ್ಷ ಡೋಸ್​ ಲಸಿಕೆ ದಾಸ್ತಾನಿದೆ. ಆದಷ್ಟು ಶೀಘ್ರದಲ್ಲಿ ಎಲ್ಲರಿಗೂ ಲಸಿಕೆ ಕೊಡಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕೋವಿಡ್ ಸ್ಥಿತಿಗತಿ ಇಡೀ ರಾಜ್ಯದಲ್ಲಿ ಪರಾಮರ್ಶಿಸಿದಾಗ ಬೆಂಗಳೂರಿನಲ್ಲಿ ಸೋಂಕು ಕಡಿಮೆಯಾಗಿದೆ. ಕೆಲವೇ ಜಿಲ್ಲೆಗಳಲ್ಲಿ ಏರಿಕೆಯಾದರೂ ಅನೇಕ ಜಿಲ್ಲೆಗಳಲ್ಲಿ ಇಳಿಕೆಯಾಗುತ್ತಿದೆ. ಜಿಲ್ಲಾಧಿಕಾರಿಗಳಿಗೆ ಕೋವಿಡ್ ಮುಕ್ತ ಗ್ರಾಮಗಳ ಬಗ್ಗೆ ಮಾಹಿತಿ ಕೇಳಿದ್ದೇನೆ. ಸಾವಿರಾರು ಗ್ರಾಮಗಳು ಕೋವಿಡ್ ಮುಕ್ತವಾಗಿವೆ. ಮೂರು ದಿನಗಳ ಪ್ರವಾಸ ಮಾಡಿ ಆರೋಗ್ಯದ ವ್ಯವಸ್ತೆ ಕೋವಿಡ್ ವಿಧಾನಗಳು ನ್ಯೂನತೆಗಳ ಬಗ್ಗೆ ಪರಾಮರ್ಶಿಸಿ ಸಲಹೆ ಸೂಚನೆ ಕೊಟ್ಟಿದ್ದೇನೆ ಎಂದು ಸುಧಾಕರ್ ಭೇಟಿ ಹಾಗೂ ಪರಿಶೀಲನೆ ವಿವರ ನೀಡಿದ್ದಾರೆ.

ಇದನ್ನೂ ಓದಿ: ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

ಮಿನಿ ಆಸ್ಪತ್ರೆ, ಆಮ್ಲಜನಕ ಸ್ಥಾವರ, ವೆಂಟಿಲೇಟರ್; ಕೊರೊನಾ ವಿರುದ್ಧದ ಹೋರಾಟಕ್ಕೆ 45 ಕೋಟಿ ರೂ. ದೇಣಿಗೆ ನೀಡಿದ ಆರ್ಸಿಬಿ

Published On - 6:54 pm, Mon, 24 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್