AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌರಿಂಗ್​ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವ್ಯವಸ್ಥೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ನಾಳೆಯಿಂದಲೇ ಬೌರಿಂಗ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಆರಂಭಿಸಲಾಗುವುದು ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೌರಿಂಗ್​ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವ್ಯವಸ್ಥೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
preethi shettigar
|

Updated on: May 16, 2021 | 6:42 PM

Share

ಬೆಂಗಳೂರು: ಬ್ಲ್ಯಾಕ್ ಫಂಗಸ್​ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟೀರಾಯಿಡ್ ಅಧಿಕವಾಗಿ ಬಳಸಿರುವವರಿಗೆ ಹಾಗೂ ಮಧುಮೇಹ ಹೆಚ್ಚಿರುವವರಿಗೆ ಕೊವಿಡ್ ಬಂದಾಗ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಬ್ಲ್ಯಾಕ್ ಫಂಗಸ್​ನಿಂದ ದೃಷ್ಟಿ ಕೂಡ ಕಳೆದುಕೊಳ್ಳುವ ಅಪಾಯವಿರುತ್ತದೆ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಸಾವು ಕೂಡ ಬರಬಹುದು. ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಾಗಲೇ ಇಲ್ಲಿನ ನೇತ್ರ ತಜ್ಞರೊಂದಿಗೆ ಸಮಾಲೋಚನೆ ಮಾಡಲಾಗಿದೆ. ನಾಳೆಯಿಂದಲೇ ಬೌರಿಂಗ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಆರಂಭಿಸಲಾಗುವುದು ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.

ನೇತ್ರ ತಜ್ಞರು ಸೇರಿದಂತೆ ಮೂರ್ನಾಲ್ಕು ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗುತ್ತಿದೆ. ಇದಕ್ಕೆ ಯಾವ ಬಗೆಯ ಚಿಕಿತ್ಸೆ ನೀಡಬೇಕೆಂದು ಈ ಸಮಿತಿ ಸಲಹೆ ನೀಡಲಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಸತತ ಏಳು ವಾರಗಳ ಕಾಲ ನೀಡಬೇಕಿದ್ದು, 2-3 ಲಕ್ಷ ರೂಪಾಯಿ ಖರ್ಚಾಗುತ್ತದೆ. ಇದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಯಾರಿಗೇ ಈ ಸಮಸ್ಯೆ ಇದ್ದರೂ ತಕ್ಷಣ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಬೇಕು. ಇದಕ್ಕೆ ಬೇಕಿರುವ ಆಂಪೊಟೆರಿಸಿನ್ ಔಷಧಿಯನ್ನು ಕೇಂದ್ರ ಸರ್ಕಾರ ನೀಡಲಿದ್ದು, 20 ಸಾವಿರ ಡೋಸ್​ಗೆ ಮನವಿ ಮಾಡಲಾಗಿದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬಳಿಕ ಸ್ಟೀರಾಯಿಡ್ ಔಷಧಿ ಬಗ್ಗೆ ಮಾತನಾಡಿದ ಡಾ.ಕೆ.ಸುಧಾಕರ್ ಯಾರೂ ವೈದ್ಯರ ಬಳಿ ಸಲಹೆ ಪಡೆಯದೆ ಸ್ಟೀರಾಯಿಡ್ ಮೊದಲಾದ ಔಷಧಿ ಪಡೆಯಬಾರದು. ವೈದ್ಯರು ಕೂಡ ಜನರಿಗೆ ರೋಗ ನಿರೋಧಕ ಹೆಚ್ಚಿಸುವ ಔಷಧಿಯನ್ನು ಅನಗತ್ಯವಾಗಿ ನೀಡಬಾರದು. ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿಲ್ಲ. ಈ ಕುರಿತು ಪ್ರತಿಪಕ್ಷ ನಾಯಕರಿಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಡೆಂಘೀ ತಡೆಗಟ್ಟಿ ಬಳಿಕ ಡೆಂಘೀ ತಡೆಗಟ್ಟಿ ಎನ್ನುವ ಸಾಮಾಜಿಕ ಕಳಕಳಿಯ ಕುರಿತು ಮಾತನಾಡಿದ ಡಾ.ಕೆ.ಸುಧಾಕರ್ ಸೊಳ್ಳೆಯಿಂದ ಹರಡುವ ಡೆಂಘೀ ರೋಗ ರಾಜ್ಯದಲ್ಲಿ ಪ್ರತಿ ವರ್ಷ 15 ರಿಂದ 20 ಸಾವಿರ ಜನರಿಗೆ ಬರುತ್ತಿದೆ. ಮುಂಗಾರು ಆರಂಭವಾಗುತ್ತಿರುವುದರಿಂದ ಮಳೆಗಾಲದಲ್ಲಿ ಸೊಳ್ಳೆ ಹುಟ್ಟದಂತೆ ಜನರು ಕ್ರಮ ವಹಿಸಬೇಕು. ನೀರು ಸಂಗ್ರಹವಾಗುವ ಕಡೆಗಳಲ್ಲಿ ಎಚ್ಚರ ವಹಿಸಬೇಕು. ಒಂದು ವಾರ ಬಿಟ್ಟರೆ ಸೊಳ್ಳೆಗಳು ಹುಟ್ಟಿ ರೋಗ ಹರಡುತ್ತದೆ. ಈ ಸೊಳ್ಳೆ ಹಗಲಿನಲ್ಲಿ ಹೆಚ್ಚಾಗಿ ಕಚ್ಚಿ ವೈರಾಣು ಹರಡುತ್ತದೆ. ಮಹಿಳೆಯರು ಮತ್ತು ಮಕ್ಕಳ ವಿಚಾರದಲ್ಲಿ ಹೆಚ್ಚು ಎಚ್ಚರ ವಹಿಸಬೇಕು. ಯಾವುದೇ ರೀತಿ ಜ್ವರ, ಮೈ ಕೈ ನೋವು, ವಾಂತಿ, ಸ್ನಾಯುಸೆಳೆತ ಕಂಡುಬರುವುದು ಡೆಂಘೀ ಲಕ್ಷಣಗಳು. ಯಾವುದೇ ರೋಗ ಲಕ್ಷಣ ಕಂಡುಬಂದರೆ ವೈದ್ಯರ ಬಳಿ ಪರೀಕ್ಷೆ ಮಾಡಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ:

Union Health Secretary PC: ಕಳೆದ 12 ದಿನಗಳಿಂದ ದೇಶದಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ: ಲವ್ ಅಗರ್ವಾಲ್

ಬ್ಲ್ಯಾಕ್ ಫಂಗಸ್​ಗೆ ಬೆಂಗಳೂರಿನಲ್ಲಿ ಇಬ್ಬರು ಬಲಿ.. ಒಬ್ಬ ವ್ಯಕ್ತಿಗೆ 2-4 ಲಕ್ಷ ವೆಚ್ಚವಾಗಲಿದೆ ಎಂದ ಸುಧಾಕರ್

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ