ಕೊರೊನಾ ಲಸಿಕೆ ಬಗ್ಗೆ ಗೊಂದಲ ಬೇಡ, 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್ ಲಸಿಕೆ ಪಡೆಯಬೇಕು: ಆರೋಗ್ಯ ಸಚಿವ ಸುಧಾಕರ್

| Updated By: Skanda

Updated on: Apr 27, 2021 | 12:58 PM

ರಾಜ್ಯದಲ್ಲಿ ಕೊವಿಡ್​ ಲಸಿಕೆ ಕೊರತೆ ಇಲ್ಲ. 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್​ ಲಸಿಕೆ​ ಪಡೆಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ಲಸಿಕೆ ಬಗ್ಗೆ ಗೊಂದಲ ಬೇಡ, 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್ ಲಸಿಕೆ ಪಡೆಯಬೇಕು: ಆರೋಗ್ಯ ಸಚಿವ ಸುಧಾಕರ್
ಡಾ.ಕೆ. ಸುಧಾಕರ್​
Follow us on

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಲಸಿಕೆ ನೀಡುವತ್ತ ಸರಕಾರ ಮುಂದಾಗಿದೆ. ರಾಜ್ಯದಲ್ಲಿ ಕೊವಿಡ್​ ಲಸಿಕೆ ಕೊರತೆ ಇಲ್ಲ. 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್​ ಲಸಿಕೆ​ ಪಡೆಯಬೇಕು. ಎಲ್ಲರಿಗೂ ಕೊವಿಡ್​ ಲಸಿಕೆ ನೀಡುವುದನ್ನು ಮುಂದುವರಿಸುತ್ತೇವೆ ಯಾರಿಗೂ ಈ ಬಗ್ಗೆ ಗೊಂದಲ ಬೇಡ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಲಸಿಕೆ ಒಂದೇ ನಮ್ಮ ಜನರನ್ನು ಕಾಪಾಡಲು ಸಾಧ್ಯ. ಕೊರೊನಾ 3ನೇ ಅಲೆಯನ್ನು ತಡೆಯಬೆಕಾದರೆ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆಯಿರಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೊವಿಡ್​ ಹಿನ್ನೆಲೆಯಲ್ಲಿ ಕೋಲಾರಕ್ಕೆ 40 ವೆಂಟಿಲೇಟರ್‌ಗಳನ್ನು ನೀಡಲಾಗಿತ್ತು. ಅದರಲ್ಲಿ 20 ವೆಂಟಿಲೇಟರ್‌ಗಳನ್ನು ಮಾತ್ರ ಬಳಸುತ್ತಿದ್ದರು. ಇನ್ನುಳಿದ ವೆಂಟಿಲೇಟರ್ ಬಳಸದಿರುವುದು ಗಮನಕ್ಕೆ ಬಂತು. ಈ ನಿಟ್ಟಿನಲ್ಲಿ ಕೋಲಾರದ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಈ ಕುರಿತಾಗಿ ಕೋಲಾರ ಜಿಲ್ಲಾ ಸರ್ಜನ್, ಆರ್‌ಎಂಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಕೊವಿಡ್ ವಾರ್ಡ್‌ಗಳಲ್ಲಿ ನಿಯಮಗಳನ್ನು ಪಾಲಿಸುತ್ತಿರಲಿಲ್ಲ. ಹೀಗಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ. ಎಲ್ಲ ಆಸ್ಪತ್ರೆಗಳಿಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆ ಇದೆ ಎಂಬ ತಪ್ಪು ಮಾಹಿತಿ ಹಬ್ಬಿಸಬೇಡಿ.. ಏನೂ ತೊಂದರೆ ಇಲ್ಲ: ಡಾ. ಕೆ.ಸುಧಾಕರ್​