AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಹಾಕಿಕೊಳ್ಳಲು ಆರೋಗ್ಯ ಕಾರ್ಯಕರ್ತರು ಹಿಂದೇಟು ಹಾಕುತ್ತಿಲ್ಲ: ಡಿಸಿಎಂ ಗೋವಿಂದ ಕಾರಜೋಳ

ಕೊರೊನಾ ಲಸಿಕೆ ಸುರಕ್ಷಿತವಾಗಿದೆ, ಎಲ್ಲರೂ ಹಾಕಿಸಿಕೊಳ್ಳಬಹುದು. ಎಲ್ಲರಿಗೂ ಒಟ್ಟಿಗೆ ಲಸಿಕೆ ನೀಡಲು ಸಾಧ್ಯವಿಲ್ಲ. ಇದು ನಿರಂತರ ಪ್ರಕ್ರಿಯೆ. ದೈನಂದಿನ ಕೆಲಸಕ್ಕೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ನಾವು ಲಸಿಕೆ ಹಾಕುತ್ತಿದ್ದೇವೆ ಎಂದಿದ್ದಾರೆ ಕಾರಜೋಳ.

ಲಸಿಕೆ ಹಾಕಿಕೊಳ್ಳಲು ಆರೋಗ್ಯ ಕಾರ್ಯಕರ್ತರು ಹಿಂದೇಟು ಹಾಕುತ್ತಿಲ್ಲ: ಡಿಸಿಎಂ ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Jan 19, 2021 | 5:40 PM

Share

ಬಾಗಲಕೋಟೆ: ಸರ್ಕಾರಕ್ಕೆ ಅತೃಪ್ತರ ಕಾಟದ ಬಗ್ಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ ಅತೃಪ್ತರ ಕಾಟ ಇವತ್ತು ನಿನ್ನೆಯದ್ದಲ್ಲ. ಅದು ಎಲ್ಲ ಕಾಲದಿಂದಲೂ ಇದೆ. ನೆಹರು ಅವರ ವಿರುದ್ದವೂ ಅತೃಪ್ತರಿದ್ದರು. ಅತೃಪ್ತರು ಯಾವಾಗಲೂ ಇರುತ್ತಾರೆ. ಅತೃಪ್ತರು ಇದ್ದರೆ ಕರೆದು ಮಾತಾಡುತ್ತೇವೆ. ಪಕ್ಷದ ನಿರ್ಣಯದ ‌ಮೇಲೆ ಎಲ್ಲವೂ ನಡೆಯುತ್ತದೆ ಎಂದು ಹೇಳಿದ್ದಾರೆ.

ಮುಧೋಳ ತಾಲ್ಲೂಕು ಮೆಟಗುಡ್ಡ ಗ್ರಾಮದಲ್ಲಿ ಮಾತನಾಡಿದ ಕಾರಜೋಳ, ರೇಣುಕಾಚಾರ್ಯ ದೆಹಲಿ ಭೇಟಿ ಬಗ್ಗೆ ವ್ಯಂಗ್ಯವಾಡಿದ್ದಾರೆ. ರೇಣುಕಾಚಾರ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವುದಕ್ಕಾಗಿ, ಹೆಚ್ಚು ರೈಲುಮಾರ್ಗ ತರೋದಕ್ಕಾಗಿ ಹೋಗಿರುತ್ತಾರೆ. ಅವರು ಯಾವತ್ತೂ ರೈಲು ಮಾರ್ಗ ತರೋದಕ್ಕಾಗಿ ಪ್ರಯತ್ನ ಮಾಡ್ತಾ ಇರ್ತಾರೆ ಎಂದಿದ್ದಾರೆ.

ಲಸಿಕೆ ಹಾಕಿಕೊಳ್ಳಲು ಆರೋಗ್ಯ ಕಾರ್ಯಕರ್ತರು ಹಿಂದೇಟು ಹಾಕುತ್ತಿಲ್ಲ ಕೊರೊನಾ ಲಸಿಕೆ ಸುರಕ್ಷಿತವಾಗಿದೆ, ಎಲ್ಲರೂ ಹಾಕಿಸಿಕೊಳ್ಳಬಹುದು. ಎಲ್ಲರಿಗೂ ಒಟ್ಟಿಗೆ ಲಸಿಕೆ ನೀಡಲು ಸಾಧ್ಯವಿಲ್ಲ. ಇದು ನಿರಂತರ ಪ್ರಕ್ರಿಯೆ. ದೈನಂದಿನ ಕೆಲಸಕ್ಕೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ನಾವು ಲಸಿಕೆ ಹಾಕುತ್ತಿದ್ದೇವೆ ಎಂದು ಹೇಳಿದ ಅವರು ಲಸಿಕೆ ಹಾಕಿಕೊಳ್ಳಲು ಆರೋಗ್ಯ ಕಾರ್ಯಕರ್ತರು ಹಿಂದೇಟು ಹಾಕುತ್ತಿಲ್ಲ ಎಂದಿದ್ದಾರೆ.

ಯತ್ನಾಳ್ ಹೇಳಿಕೆಗೆ ಟಾಂಗ್ ನಮ್ಮ ದೇಶದ ಪ್ರಧಾನಿ, ಗೃಹ ಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷ, ರಾಜ್ಯ ಉಸ್ತುವಾರಿ ಸೇರಿದಂತೆ ಎಲ್ಲರೂ ಯಡಿಯೂರಪ್ಪ ಸರಕಾರ ಉತ್ತಮ ಕೆಲಸ ಮಾಡಿದೆ ಅಂತ ಹೇಳಿದ್ದಾರೆ‌‌. ಕೋವಿಡ್ ನಿರ್ವಹಣೆಯಲ್ಲೂ ದೇಶದಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. ಗುಡ್ ಅಡ್ಮಿನಿಸ್ಟ್ರೇಷನ್ ಅಂತ ಸರ್ಟಿಫಿಕೇಟ್ ಕೊಟ್ಟಿದಾರೆ. ಹೀಗಿರಬೇಕಾದರೆ ಯತ್ನಾಳ್​ ಹೇಳಿಕೆಯ ಬಗ್ಗೆ ಚರ್ಚೆ ಏಕೆ ಎಂದು ಕಾರಜೋಳ ಪ್ರಶ್ನಿಸಿದ್ದಾರೆ.

ಅಮಿತ್​ ಶಾ ಬಿಜೆಪಿ ಸರ್ಕಾರ ಇರುತ್ತೆ ಎಂದಿದ್ರು, ಆದ್ರೆ ಯಡಿಯೂರಪ್ಪ CM ಆಗಿರ್ತಾರೆ ಎಂದಿಲ್ಲ- ಯತ್ನಾಳ್​

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​