ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲವೆಂದ ಗುಂಡೂರಾವ್: ಅಧಿಸೂಚಿತ ಖಾಯಿಲೆ ಎಂದು ಘೋಷಣೆ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ತಜ್ಞರೊಂದಿಗೆ ಸಭೆ ನಡೆಸಿದರು. ಕೋವಿಡ್-19 ನಿಂದ ಗುಣಮುಖರಾದವರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಿವೆ ಎಂದು ಹೇಳಿದರು. ಹೃದಯಾಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗುವುದು ಎಂದು ಹೇಳಿದರು.

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲವೆಂದ ಗುಂಡೂರಾವ್: ಅಧಿಸೂಚಿತ ಖಾಯಿಲೆ ಎಂದು ಘೋಷಣೆ
ಸಚಿವ ದಿನೇಶ್​ ಗುಂಡೂರಾವ್​
Edited By:

Updated on: Jul 07, 2025 | 2:50 PM

ಬೆಂಗಳೂರು, ಜುಲೈ 07: ಹಾಸನ (Hassan) ಜಿಲ್ಲೆಯೂ ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ (Heart Attack) ಪ್ರಕರಣಗಳ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತಜ್ಞರ ಜತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್​ ಗುಂಡೂರಾವ್​, ಕೊರೊನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ಎಂದು ಹೇಳಿದರು. ಮುಂದುವರೆದು, ವರದಿಯಲ್ಲಿ ಕೊರೊನಾ ದಿಂದ ಗುಣಮುಖರಾದವರಿಗೆ ಹೃದಯಾಘಾತವಾಗಿದೆ ಅಂತ ಇದೆ ಎಂದು ಹೇಳಿದರು. (ಕೊರೊನಾ ಲಸಿಕೆ ಪಡೆದವರಿಗೆ ಹೃದಯಘಾತವಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇತ್ತೀಚಿಗಷ್ಟೇ ಹೇಳಿಕೆ ನೀಡಿದ್ದರು.)

ಕೊರೊನಾ ರೋಗದಿಂದ ಸ್ವಲ್ಪ ಮಟ್ಟಿಗೆ ಹೃದಯಾಘಾತ ಹೆಚ್ಚಾಗಿದೆ. ಕೊರೊನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುವ ಸಾಧ್ಯತೆ ಇದೆ. ಆದರೆ, ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ. ಹೃದಯಾಘಾತಕ್ಕೆ ಲಸಿಕೆ ಕಾರಣವಲ್ಲ. ಕೊರೊನಾ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ, ಎಂಆರ್​ಎನ್​ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಈ ವ್ಯಾಕ್ಸಿನ್​ ಅನ್ನು ನಮ್ಮ ದೇಶದಲ್ಲಿ ಯಾರು ತೆಗೆದುಕೊಂಡಿಲ್ಲ ಎಂದು ತಿಳಸಿದ್ದಾರೆ.

ಹೃದಯಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡುವುದು ಕಡ್ಡಾಯ. ಹೃದಯಾಘಾತದ ಬಗ್ಗೆ ಪ್ರತ್ಯೇಕ ಪಠ್ಯ ಅಳವಡಿಕೆ ಮಾಡಲಾಗುವುದು. ಶಿಕ್ಷಣ ಇಲಾಖೆ ಮುಂದಿನ ವರ್ಷದಿಂದ ಪಠ್ಯ ಅಳವಡಿಕೆ ಮಾಡುತ್ತೆ ಎಂದು ಹೇಳಿದರು.

ಇದನ್ನೂ ಓದಿ
ಹಾಸನ ಹೃದಯಾಘಾತಗಳಿಗೆ ಕೋವಿಡ್ ಕಾರಣವಾ?
ಡಾ.ಮಂಜುನಾಥ್​ ದಿಟ್ಟ ಹೆಜ್ಜೆ: ರಾಜ್ಯದ ಹೃದಯಾಘಾತ ಕೇಸ್​​ ಮೋದಿ ಅಂಗಳಕ್ಕೆ
ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು!
ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯ ನಾಲ್ವರು ಯುವಕರು ಹೃದಯಾಘಾತಕ್ಕೆ ಬಲಿ

ತಾಲೂಕು ಆಸ್ಪತ್ರೆಗಳಿಗೂ ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುತ್ತದೆ. ಸರ್ಕಾರಿ ನೌಕರರು, ಗುತ್ತಿಗೆ ನೌಕರರು ತಪಾಸಣೆ ಮಾಡಿಸಿಕೊಳ್ಳಬೇಕು. ಜನರ ಜೀವನಶೈಲಿ ಹೃದಯಘಾತಕ್ಕೆ ಕಾರಣವಾಗಿದೆ. ಶೇ 50 ಕ್ಕಿಂತ ಹೆಚ್ಚು ಧೂಮಪಾನಿಗಳಿಗೆ ಹೃದಯಘಾತವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹಾಸನದ ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧ: ಇದುವೇ ಮುಖ್ಯ ಕಾರಣ ಅಂತಿದ್ದಾರೆ ತಜ್ಞರು!

ಕೊರೊನಾಗಿಂತ ಮುಂಚೆ ಮತ್ತು ಕೊರೊನಾ ನಂತರ ಸಾಕಷ್ಟು ಬದಾಲಾವಣೆಯಾಗಿದೆ. ಒಬೆಸಿಟಿ, ಡಯಾಬಿಟಿಸ್ ಎಲ್ಲವೂ ಹೆಚ್ಚಾಗಿ ಕಂಡುಬಂದಿದೆ. ಈ ಕಾರಣದಿಂದ ಕೊರೊನಾ ರೋಗದ ಪರಿಣಾಮ ಸಾರ್ವಜನಿಕರ ಮೇಲೆ ಆಗಿದೆ. ಕೊರೊನಾ ಬಂದಾಗ ತೆಗೆದುಕೊಂಡ ಬೇರೆ ಬೇರೆ ಮೆಡಿಸನ್‌ನಿಂದ ಹೃದಯದ ಮೇಲೆ ಪರಿಣಾಮ ಬೀರಿದೆ. ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಜುಲೈ 10 ರಂದು ವರದಿ ಕೈಸೇರಲಿದೆ ಎಂದರು.

ಸರ್ಕಾರಿ, ಗುತ್ತಿಗೆ ನೌಕರರು ಮತ್ತು ಖಾಸಗಿ ಉದ್ಯೋಗಿಗಳು ವರ್ಷಕ್ಕೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಈ ಬಗ್ಗೆ ನಾವು ಸೂಚನೆ ನೀಡುತ್ತಿದ್ದೇವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮತಷ್ಟು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಭರವಸೆ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:11 pm, Mon, 7 July 25