ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು? ನೀವು ಮಾಡಬೇಕಾದ್ದಿಷ್ಟು…

|

Updated on: Feb 27, 2025 | 10:16 AM

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗಲಿದೆ ಹಾಗೂ ಉಷ್ಣ ಅಲೆ ವ್ಯಾಪಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ, ಏನೇನು ಮುಂಜಾಗರೂಕತಾ ಕ್ರಮ ಕೈಗೊಳ್ಳಬೇಕೆಂದು ಆಯಾ ಜಿಲ್ಲಾಡಳಿತಗಳು ಸಾರ್ವಜನಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿವೆ. ವಿವರ ಇಲ್ಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು? ನೀವು ಮಾಡಬೇಕಾದ್ದಿಷ್ಟು...
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಜನರು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೆಲವು ಜಿಲ್ಲಾಡಳಿತಗಳು ಮಾರ್ಗಸೂಚಿ ಬಿಡುಗಡೆ ಮಾಡಿವೆ. ಜಿಲ್ಲಾಡಳಿತಗಳು ಸಾರ್ವಜನಿಕರಿಗೆ ನೀಡಿದ ಸಲಹೆಗಳೇನು? ಬಿಸಿ ಗಾಳಿಯ ಆಘಾತದಿಂದ ಪಾರಾಗಲು ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.

  • ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.
  • ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.
  • ಸಾಧ್ಯವಾದಷ್ಟು ಹಗುರವಾದ ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.
  • ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು ಛತ್ರಿ/ಟೋಪಿ ಬೂಟುಗಳು ಅಥವಾ ಚಪ್ಪಲ್​ಗಳನ್ನು ಬಳಸಿ.
  • ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.
  • ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ. ತಲೆ ಕುತ್ತಿಗೆ ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.
  • ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ.
  • ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಆನಿಸಿದರೆ, ತಕ್ಷಣ ವೈಧ್ಯರನ್ನು ಭೇಟಿ ಮಾಡಿ.
  • ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ ನಿಂಬೆ ನೀರು ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹದಲ್ಲಿ ನೀರಿನ ಅಂಶ ಹೆಚ್ಚು ಮಾಡಲು ಮತ್ತು ಡಿಹೈಡ್ರೇಷನ್ ತಡೆಯಲು ಸಹಾಯ ಮಾಡುತ್ತದೆ.
  • ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
  • ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು ಕಟರ್‌ಗಳು ಅಥವಾ ಸೆನ್‌ಶೇಡ್ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.
  • ಉತ್ತರ ಕನ್ನಡ ಜಿಲ್ಲಾಡಳಿತದಿಂದ ವಿಶೇಷ ಎಚ್ಚರಿಕೆ ಸಂದೇಶ

ಉತ್ತರ ಕನ್ನಡ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ಪ್ರಕಟಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ದಿನಾಂಕ 26.02.2025 ರ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಹೊನ್ನಾವರದಲ್ಲಿ ಅತ್ಯಂತ ಗರಿಷ್ಠ ತಾಪಮಾನ, ಈ ಮೂರು ಜಿಲ್ಲೆಗಳಿಗೆ ಉಷ್ಣ ಅಲೆಯ ಎಚ್ಚರಿಕೆ

ಇದನ್ನೂ ಓದಿ
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!
ಹೃದಯಾಘಾತದಿಂದ ಬಟ್ಟೆ ಅಂಗಡಿ ಸಿಬ್ಬಂದಿ ಸಾವು, ಕೊನೇ ಕ್ಷಣದ ಸಿಸಿಟಿವಿ ದೃಶ್ಯ
ಬೂಕರ್ ಅವಾರ್ಡ್ ಪಟ್ಟಿಯಲ್ಲಿ ಕನ್ನಡ ಲೇಖಕಿ ಬಾನು ಮುಷ್ತಾಕ್ ಕೃತಿ
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಉಷ್ಣ ಅಲೆಯ ಎಚ್ಚರಿಕೆ, ಯೆಲ್ಲೋ ಅಲರ್ಟ್​

ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಕಂಡುಬಂದಲ್ಲಿ ತುರ್ತು ಸಹಾಯಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ (1077) (08382229557) ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 am, Thu, 27 February 25