AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಮರ ಕಡಿದರೇ ಬೀಳುತ್ತೆ ಭಾರಿ ದಂಡ! ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ

ಕರ್ನಾಟಕ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಅಕ್ರಮ ಮರ ಕಡಿಯುವಿಕೆಗೆ ವಿಧಿಸುವ ದಂಡ ಮತ್ತು ಶಿಕ್ಷೆಯನ್ನು ಹತ್ತು ಪಟ್ಟು ಹೆಚ್ಚಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಸೂಚನೆ ನೀಡಿದ್ದಾರೆ. ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ಉಲ್ಲೇಖಿಸಿ, ಅಕ್ರಮ ಮರ ಕಡಿಯುವುದು ಮಾನವ ಹತ್ಯೆಗೆ ಸಮ ಎಂದು ಸಚಿವರು ಹೇಳಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಭವಿಷ್ಯದ ಪೀಳಿಗೆಗಾಗಿ ವೃಕ್ಷಗಳನ್ನು ರಕ್ಷಿಸುವುದು ಅಗತ್ಯ ಎಂದು ಅವರು ಒತ್ತಿ ಹೇಳಿದ್ದಾರೆ.

ಅಕ್ರಮವಾಗಿ ಮರ ಕಡಿದರೇ ಬೀಳುತ್ತೆ ಭಾರಿ ದಂಡ! ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ
ಸಚಿವ ಈಶ್ವರ್​ ಖಂಡ್ರೆ
Follow us
ವಿವೇಕ ಬಿರಾದಾರ
|

Updated on:Mar 26, 2025 | 9:04 PM

ಬೆಂಗಳೂರು, ಮಾರ್ಚ್​ 26: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದ ನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
Image
ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಿಸಲು ಸಜ್ಜಾದ ಚಿಕ್ಕಮಗಳೂರು ಅರಣ್ಯ ಇಲಾಖೆ
Image
ವೀರಪ್ಪನ್ ಓಡಾಡಿದ್ದ ಜಾಗದಲ್ಲಿ ಸಫಾರಿಗೆ ಅರಣ್ಯ ಇಲಾಖೆ ಚಿಂತನೆ!
Image
ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರ ಬಂಧನ
Image
HMT ವಶದಲ್ಲಿದ್ದ 150 ಕೋಟಿ ರೂ ಮೌಲ್ಯದ 5 ಎಕರೆ ಅರಣ್ಯ ಭೂಮಿ ಮರುವಶಕ್ಕೆ

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ.

ಈಶ್ವರ್​ ಟ್ವೀಟ್​

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ: ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ: ಅರಣ್ಯ ಇಲಾಖೆ ಮಹತ್ವದ ಆದೇಶ

ಸಂಸ್ಕೃತದಲ್ಲಿ “ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಮಾತಿದೆ. ಈಗ ಇದನ್ನು “ವೃಕ್ಷೋ ರಕ್ಷತಿ ರಕ್ಷಿತಃ’ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಹತ್ತಾರು, ನೂರಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಆದೇಶ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Wed, 26 March 25

ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ