ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು
ಮಳೆಯಿಂದ ನೆಲಕ್ಕೆ ಉರುಳಿದ ವಿದ್ಯುತ್ ಕಂಬ
Follow us
sandhya thejappa
|

Updated on: Apr 20, 2021 | 10:47 AM

ಗದಗ: ರೈತ ಮಾಡಿರುವ ತಪ್ಪಾದರೂ ಏನು? ಈ ಭೂಮಿ ಮೇಲೆ ಎಂತಹಾ ದುರಂತಗಳು ನಡೆದರು ಅದರ ಕೆಟ್ಟ ಪರಿಣಾಮ ರೈತರ ಬದುಕಿನ ಮೇಲೆ ಬೀರುತ್ತದೆ. ರೈತರು ಬೆಳೆಗಾಗಿ ವರ್ಷಪೂರ್ತಿ ದುಡಿಯುತ್ತಾರೆ. ಬಂದ ಆದಾಯದ ಅರ್ಧದಷ್ಟು ಭಾಗವನ್ನು ಗೊಬ್ಬರ, ಬಿತ್ತನೆ ಬೀಜಗಳು ಸೇರಿದಂತೆ ಬೆಳೆಗಾಗಿ ಎತ್ತಿಡುತ್ತಾರೆ. ಆದರೆ ಅಕಾಲಿಕ ಮಳೆಯಿಂದ ರೈತರ ಶ್ರಮಕ್ಕೆ ಕೊಳ್ಳಿ ಇಟ್ಟಂತಾಗುತ್ತದೆ. ಗದಗ ಜಿಲ್ಲೆಯಲ್ಲೂ ನಿನ್ನೆ ಸಂಜೆ ಹೊತ್ತಿಗೆ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ನಾಶವಾದ ಬೆಳೆಯನ್ನು ಕಂಡು ರೈತರು ಕಂಗಾಲಾಗಿದ್ದಾರೆ.

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ. ಇನ್ನು ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ.

ಇನ್ನು ಇಂದು ಬೆಳ್ಳಂಬೆಳಗ್ಗೆಯೇ ತುಮಕೂರಿನಲ್ಲಿ ಮಳೆಯಾಗಿದೆ. ತುಮಕೂರು ನಗರ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿದ್ದು, ಬಿಸಿಲಿಗೆ ಬೇಗೆಗೆ ತಂಪೆರೆದಂತಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗಿರುವುದು ಕಂಡುಬಂದಿಲ್ಲ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಬೆಟ್ಟಿಂಗ್ ದಂಧೆ ಮೇಲೆ ಸಿಸಿಬಿ ದಾಳಿ; ಐವರು ಬಂಧನ, 12 ಲಕ್ಷ ರೂಪಾಯಿ ವಶ

ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್

(Heavy Rain at gadag and Rain has destroyed an enormous amount of crop)

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ