AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿದ ಅವಾಂತರ ಒಂದಲ್ಲ ಎರಡಲ್ಲ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಧಾರಾಕಾರ ಮಳೆಗೆ ಎಲ್ಲೆಡೆ ಅವಾಂತರಗಳು ಸೃಷ್ಟಿ ಆಗಿವೆ. ನದಿಗಳು ರೌದ್ರ ಅವತಾರ ತಾಳಿ ಮನೆಗಳಿಗೆ ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಕೆಲವೆಡೆ ಕ್ಷಣ ಕ್ಷಣಕ್ಕೂ ಗುಡ್ಡ ಕುಸಿಯುತ್ತಿರುವುದರಿಂದ ವಾಹನ ಸವಾರರಲ್ಲಿ ಆತಂಕ ಶುರುವಾಗಿದೆ. ಮಳೆ ಇನ್ನು ಮುಂದುವರೆದರೆ ಸಂಪೂರ್ಣ ಗುಡ್ಡ ಕುಸಿಯುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿದ ಅವಾಂತರ ಒಂದಲ್ಲ ಎರಡಲ್ಲ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿದ ಅವಾಂತರ ಒಂದಲ್ಲ ಎರಡಲ್ಲ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jul 07, 2024 | 2:54 PM

Share

ಕಾರವಾರ, ಜುಲೈ 07: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಳೆ (Rain) ಮುಂದುವರೆದಿದೆ. ಧಾರಾಕಾರ ಮಳೆಗೆ ಸೃಷ್ಟಿಸಿದ ಅವಾಂತರಗಳು ಒಂದೆರಡಲ್ಲ. ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ-ಶಿರಸಿ ರಸ್ತೆಯಲ್ಲಿರುವ ಗುಡ್ಡ ಕುಸಿಯುವ ಹಂತಕ್ಕೆ ತಲುಪಿದೆ. ಇದರಿಂದ ವಾಹನ ಸವಾರರಲ್ಲಿ ಆತಂಕ ಶುರುವಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಗುಡ್ಡ ಹೊಂದಿಕೊಂಡಿದ್ದು, ಕ್ಷಣ ಕ್ಷಣಕ್ಕೂ ಕುಸಿಯುತ್ತಿರುವುದರಿಂದ ಆತಂಕ ಮನೆಮಾಡಿದೆ. ಮಳೆಯ ಅಬ್ಬರ ಮುಂದುವರೆದರೆ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಬೃಹತ ಗಾತ್ರದ ಮಣ್ಣಿನ ಗುಡ್ಡ ಮತ್ತು ಮರಗಳು ಇರುವುದರಿಂದ ಮಿರ್ಜಾನ-ಶಿರಸಿ ರಸ್ತೆಯ ಜೊತೆಗೆ ರಾಷ್ಟ್ರೀಯ ಹೆದ್ದಾರಿ ಮೇಲೆ ಮಣ್ಣು ಬಿಳುವ ಸಾಧ್ಯತೆ ಇದೆ.

ಕಾರವಾರ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬಿದ್ದ ಮರ: ಸಂಚಾರ ಅಸ್ತವ್ಯಸ್ತ

ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಪರಿಣಾಮ ಕಾರವಾರ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮರ ಬಿದ್ದು ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ  ಘಟನೆ ನಡೆದಿದ್ದು, ಸದ್ಯ ರಸ್ತೆ ಮೇಲೆ ಬಿದ್ದ ಮರ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ, ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ: ಮಲೆನಾಡು, ಕರಾವಳಿಯಲ್ಲಿ 3 ಸಾವು

ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃತಕ ಪ್ರವಾಹದಿಂದ 3 ಗ್ರಾಮಗಳ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ಈಡೂರು, ಚೆಂಡಿಯಾ, ಚೆಂಡಿಯಾ ಐಸ್ ಫ್ಯಾಕ್ಟರಿಗೆ ಸಂಕಷ್ಟ ಎದುರಾಗಿದ್ದು, ಸೀಬರ್ಡ್ ನೌಕಾ ನೆಲೆಯಿಂದ ಅವೈಜ್ಞಾನಿಕ ಸೇತುವೆ ಕಾಮಗಾರಿಯಿಂದ ನೂರಾರು ಎಕರೆ ಕೃಷಿ ಭೂಮಿ, 40 ಮನೆಗಳಿಗೆ ಜಲದಿಗ್ಬಂಧನ ಮತ್ತು 10ಕ್ಕೂ ಹೆಚ್ಚು ಮನೆ ಜಲಾವೃತವಾಗಿವೆ.

ಸೇತುವೆ ನಿರ್ಮಾಣಕ್ಕೂ ಮುನ್ನ ಎಷ್ಟೇ ಮಳೆ ಆದರೂ ಸಮಸ್ಯೆಯಿರಲಿಲ್ಲ. ನೀರು ಸರಾಗವಾಗಿ ಸಮುದ್ರಕ್ಕೆ ಸೇರದೆ ಕೃತಕ ಪ್ರವಾಹ ಸೃಷ್ಟಿಯಾಗುತ್ತಿತ್ತು. ಸದ್ಯ ಸಮಸ್ಯೆ ಬಗೆಹರಿಸುವಂತೆ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ನಿವಾಸಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಿಲ್ಲೆಯಲ್ಲಿ 6 ಕಾಳಜಿ ಕೇಂದ್ರ ಓಪನ್, NDRF ದೌಡು

ನಿರಂತರ ಮಳೆಯಿಂದ ಹೊನ್ನಾವರ ತಾಲೂಕಿನ ಕರ್ನಲ್ ಹಿಲ್​ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿದೆ. ಕಾರವಾರದಿಂದ ಹೊನ್ನಾವರಕ್ಕೆ ಹೋಗುವ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು, ಏಕಮುಖ ಸಂಚಾರಕ್ಕೆ ಪೊಲೀಸ್ ಇಲಾಖೆ ಅನುವು ಮಾಡಿಕೊಟ್ಟಿದೆ. ರಸ್ತೆ ಮೇಲೆ ಕುಸಿದಿರುವ ಮಣ್ಣನ್ನು ಐಆರ್​ಬಿ ಸಿಬ್ಬಂದಿ ತೆರವು ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ