Karnataka Rain Alert: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್

Karnataka Rains: ಮುಂದಿನ ಐದು ದಿನಗಳವರೆಗೆ ಕರ್ನಾಟಕದಲ್ಲಿ ಬಹುತೇಕ ಕಡೆ ಭಾರೀ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಜೂನ್ 14ರವರೆಗೆ ಹವಾಮಾನ ಇಲಾಖೆ ಅಲರ್ಟ್ ಕೊಟ್ಟಿದೆ. ಹಾಗಾದ್ರೆ, ಯಾವ್ಯಾವ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

Karnataka Rain Alert: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್
Karnataka Rain

Updated on: Jun 11, 2025 | 7:07 PM

ಬೆಂಗಳೂರು, (ಜೂನ್ 11): ಕರ್ನಾಟಕದಲ್ಲಿ (Karnataka) ಮುಂಗಾರು ಚುರುಕುಗೊಂಡಿದ್ದು, ರಾಜ್ಯ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ಇನ್ನು ಮುಂದಿನ ಐದು ದಿನಗಳವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಅಂದರೆ ಜೂನ್ 16ರವರೆಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದು, ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​, ಯೆಲ್ಲೋ ಅಲರ್ಟ್ ಹಾಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ.

ಜೂ. 12ರಂದು ಎಲ್ಲೆಲ್ಲಿ ರೆಡ್, ಯೆಲ್ಲೋ, ಆರೇಂಜ್ ಅಲರ್ಟ್​

ಜೂನ್ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂನ್ 13ರಂದು ಎಲ್ಲಿ ಯಾವ್ಯಾವ ಅಲರ್ಟ್?

ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂನ್ 14ರಂದು ಯಾವ ಜಿಲ್ಲೆಯಲ್ಲಿ ಯಾವ ಅಲರ್ಟ್?

ಇನ್ನು ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ,ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಬೀದರ್,ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.