ಉತ್ತರ ಕರ್ನಾಟಕ, ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂನೆ: ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಜೂನ್ 22ರಿಂದ 24ರವರೆಗೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಭೂ ಕುಸಿತದ ಸಾಧ್ಯತೆ ಕರಾವಳಿ ಭಾಗಕ್ಕೆ ಜೂ. 23 ರಂದು ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಉತ್ತರ ಕರ್ನಾಟಕ, ಕರಾವಳಿಯಲ್ಲಿ  ಭಾರೀ ಮಳೆ ಮುನ್ಸೂನೆ: ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂನೆ, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ
Edited By:

Updated on: Jun 20, 2024 | 9:18 PM

ಕಲಬುರಗಿ, ಜೂನ್​ 20: ಹವಾಮಾನ ಇಲಾಖೆಯಿಂದ ಭಾರೀ ಮಳೆ (rain) ಮುನ್ಸೂಚನೆ ಹಿನ್ನೆಲೆ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಜೂನ್ 22ರಿಂದ 24ರವರೆಗೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಜೊತೆ ಭೂ ಕುಸಿತದ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗಕ್ಕೆ ಜೂ. 23 ರಂದು ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಸಮುದ್ರ ಭಾಗದಲ್ಲಿ 45 ರಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ.

ಹುಬ್ಬಳ್ಳಿಯಲ್ಲಿ ಅರ್ಧ ಗಂಟೆಯಿಂದ ಧಾರಕಾರ ಮಳೆ ಸುರಿದಿದೆ. ಎರಡುಮೂರು ದಿನಗಳಿಂದ ಮರೆಯಾಗಿದ್ದ ವರುಣ ಇಂದು ಏಕಾಏಕಿ ಆರಂಭವಾದ ಮಳೆಗೆ ಜನ‌ಜೀವನ ಅಸ್ತವ್ಯಸ್ತ ಆಗಿದೆ.

ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಎಂಟ್ರಿ ಕೊಟ್ಟಿದ್ದ. ನಾಗವಾರ, ಬಾಣಸವಾಡಿ, ರಿಂಗ ರಸ್ತೆ ಸೇರಿದಂತೆ ನಗರದ ಹಲವೆಡೆ ತುಂತುರು ಮಳೆ ಸುರಿದಿದೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ ಇದೆ. ಜೂನ್​ 23 ರಿಂದ ರಾಜ್ಯಾದ್ಯಂತ ಮಳೆ ಚುರುಕುಗೊಳ್ಳಲಿದೆ.

ಇದನ್ನೂ ಓದಿ: Bengaluru Rains: ಸಿಲಿಕಾನ್​ ಸಿಟಿಗೆ ದಿಢೀರ್ ಎಂಟ್ರಿ ಕೊಟ್ಟ ವರುಣ: ರಿಚ್​ಮಂಡ್​ ಟೌನ್​ ಸೇರಿ ಕೆಲವೆಡೆ ಮಳೆ

ನೆಲಮಂಗಲದ ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸೇರಿದಂತೆ ಗಾಳಿ ಸಹಿತ ಭಾರಿ ಮಳೆ ಆಗಿದೆ. ಜೋರು ಮಳೆಗೆ ವಾಹನ ಸವಾರರಿಗೆ ಸಂಕಷ್ಟ ಎದುರಾಗಿತ್ತು. ಕೆಲಸ ಮುಗಿಸಿ ಮನೆಗೆ ತೆರಳಿದ್ದವರಿಗೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಜನರು ಛತ್ರಿ ಹಿಡಿದು ಹೋಗುತ್ತಿರುವುದು ಕಂಡುಬಂತ್ತು.

ಕೆಲ ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಬಾಗಲಕೋಟೆಯಲ್ಲಿ ಅಬ್ಬರಿಸಿದ್ದ. ನವನಗರ, ವಿದ್ಯಾಗಿರಿ ಸೇರಿದಂತೆ ಹಲವೆಡೆ ಮಳೆ ಆಗಿದೆ. ಆ ಮೂಲಕ ಬಿತ್ತನೆ ಮಾಡಿದ್ದ ರೈತರ ಮುಖದಲ್ಲಿ ಸಂತಸ ಮೂಡಿತ್ತು.

ಇದನ್ನೂ ಓದಿ: Karnataka Rains: ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್​ ಅಲರ್ಟ್​, ಧಾರಾಕಾರ ಮಳೆಯ ಮುನ್ಸೂಚನೆ

ಅದೇ ರೀತಿಯಾಗಿ ಚಿಕ್ಕಮಗಳೂರಲ್ಲೂ ಗಾಳಿ ಸಹಿತ ಜೋರು ಮಳೆ ಆಗಿದೆ. ಚಾರ್ಮಾಡಿ ಫಾಟ್​, ಬಾಳೂರು, ಬಣಕಲ್​ ಭಾಗದಲ್ಲಿ ಮಳೆ ಸುರಿದಿದೆ. ಅರ್ಧ ಗಂಟೆ ಸುರಿದ ಮಳೆಗೆ ಚಾರ್ಮಾಡಿ ಫಾಟ್​ನಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:56 pm, Thu, 20 June 24