AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲಿ ವರುಣನ ಆರ್ಭಟ: ಜು 25ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!

Schools Holiday Tomorrow in dakshina kannada, Udupi: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 25ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳಲಾಗಿದೆ. ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ವರುಣನ ಆರ್ಭಟ: ಜು 25ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!
ಪ್ರಾತಿನಿಧಿಕ ಚಿತ್ರImage Credit source: Getty images
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 24, 2026 | 10:30 PM

Share

ಮುಖ್ಯಾಂಶಗಳು

  • ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ
  • ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
  • ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೂ ರಜೆ

ಮಂಗಳೂರು, ಜುಲೈ 24: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆ (rain) ಕೊಂಚ ಸಡಿಲಗೊಂಡಿದೆ. ಆದರೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಅಂದರೆ ಜುಲೈ 25ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ನಾಳೆ ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ (ಪಿಯುಸಿ) ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಇದನ್ನೂ ಓದಿ: Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್

ಅದೇ ರೀತಿಯಾಗಿ ಮಳೆ ಹೆಚ್ಚಾಗುತ್ತಿರುವ ಕಾರಣ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೂ ನಾಳೆ ರಜೆ ನೀಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಾಮಾನ್ಯ ಮಟ್ಟದಲ್ಲೇ ಇದೆ ಕರಾವಳಿಯ ಮಳೆ

ಇನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಇಂದಿನ ಅಂಕಿ-ಅಂಶಗಳ ಪ್ರಕಾರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಾಡಿಕೆಯಷ್ಟೇ ಮಳೆ ಆಗಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡದಲ್ಲಿ 38.3 ಮಿ.ಮೀ (ಸರಾಸರಿ ವಾಡಿಕೆ 37.4 ಮಿ.ಮೀ) ಹಾಗೂ ಉಡುಪಿಯಲ್ಲಿ 48.0 ಮಿ.ಮೀ (ಸರಾಸರಿ ವಾಡಿಕೆ 47.8 ಮಿ.ಮೀ) ಮಳೆ ದಾಖಲಾಗಿದ್ದು, ಎರಡೂ ಕಡೆ ವರುಣನ ಆರ್ಭಟ ಸದ್ಯಕ್ಕೆ ಸಹಜ ಸ್ಥಿತಿಯಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More