AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ನಾಳೆ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ಅಂತ್ಯದವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ(ಆಗಸ್ಟ್ 28) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ನಾಳೆ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ
Holiday
ರಮೇಶ್ ಬಿ. ಜವಳಗೇರಾ
|

Updated on:Aug 27, 2025 | 10:01 PM

Share

ಕಾರವಾರ/ಶಿವಮೊಗ್ಗ, (ಆಗಸ್ಟ್ 27): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ  (Uttara Kannada) ಹಾಗೂ ಶಿಮಮೊಗ್ಗ (Shivamogga) ಜಿಲ್ಲೆಗಳಲ್ಲಿ ನಾಳೆ(ಆಗಸ್ಟ್ 28) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ 10 ತಾಲೂಕುಗಳ ಶಾಲಾ, ಪದವಿಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆ ಹಾಗೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ನಾಳೆಯ ಹವಾಮಾನ: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ, ಚೌತಿಗೆ ವರುಣನ ಅಡ್ಡಿ

ಶಿವಮೊಗ್ಗದ 1 ತಾಲೂಕಿನಲ್ಲಿ ರಜೆ ಘೋಷಣೆ

ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಅಂಗನವಾಡಿ, ಶಾಲಾ-ಕಾಲೇಜಿಗೆ ನಾಳೆ ರಜೆ ಘೋಷಿಸಿ ಸಾಗರ ತಹಶೀಲ್ದಾರ್ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಆಗಸ್ಟ್ ಅಂತ್ಯದವರೆಗೂ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 31ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Wed, 27 August 25

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More