
ಕಾರವಾರ/ಶಿವಮೊಗ್ಗ, (ಆಗಸ್ಟ್ 27): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ (Uttara Kannada) ಹಾಗೂ ಶಿಮಮೊಗ್ಗ (Shivamogga) ಜಿಲ್ಲೆಗಳಲ್ಲಿ ನಾಳೆ(ಆಗಸ್ಟ್ 28) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ 10 ತಾಲೂಕುಗಳ ಶಾಲಾ, ಪದವಿಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆ ಹಾಗೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಅಂಗನವಾಡಿ, ಶಾಲಾ-ಕಾಲೇಜಿಗೆ ನಾಳೆ ರಜೆ ಘೋಷಿಸಿ ಸಾಗರ ತಹಶೀಲ್ದಾರ್ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 31ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
Published On - 9:58 pm, Wed, 27 August 25