AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ವರುಣನ ಆರ್ಭಟ; ರಸ್ತೆ ಮಧ್ಯೆ ಜನರ ಪರದಾಟ

ಬೆಳ್ಳಂ ಬೆಳಿಗ್ಗೆಯಿಂದಲೇ ಚಿತ್ರ ದುರ್ಗದ ಹಲವು ನಗರಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೊಡಗಿನಲ್ಲೂ ವರುಣನ ಆರ್ಭಟ ಹೆಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.

ಚಿತ್ರದುರ್ಗದಲ್ಲಿ ವರುಣನ ಆರ್ಭಟ; ರಸ್ತೆ ಮಧ್ಯೆ ಜನರ ಪರದಾಟ
ಚಿತ್ರದುರ್ಗದಲ್ಲಿ ಇಂದು ಬಾರೀ ಪ್ರಮಾಣದಲ್ಲಿ ಮಳೆಯಾಗಿದೆ
shruti hegde
| Edited By: ಸಾಧು ಶ್ರೀನಾಥ್​|

Updated on: Feb 19, 2021 | 5:04 PM

Share

ಚಿತ್ರದುರ್ಗ: ಬೆಳ್ಳಂ ಬೆಳಗ್ಗೆಯಿಂದಲೇ ಚಿತ್ರ ದುರ್ಗದ ಹಲವು ನಗರಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೆಲವು ಕಡೆ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಅಂತೆಯೇ ಕೊಡಗಿನಲ್ಲೂ ವರುಣನ ಆರ್ಭಟ ಹೆಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯ ಪ್ರಶಾಂತ ನಗರ, ಗುಮಾಸ್ತ ಕಾಲೋನಿ ಸೇರಿದಂತೆ ವಿವಿಧೆಡೆ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರಿಗೆ ಸಂಚಾರ ಮಾರ್ಗ ಸ್ಥಗಿತಗೊಂಡಿದೆ. ಹಾಗೂ ಕಂಚೀಪುರ, ಬಾಲೇನಹಳ್ಳಿಯಲ್ಲೂ ಗಾಳಿ ಸಹಿತ ಭಾರಿ ಮಳೆಗೆ ರೈತರಾದ ಬಸವರಾಜಪ್ಪ, ರಮೇಶಪ್ಪರಿಗೆ ಸೇರಿದ ಲಕ್ಷಾಂತರ ರೂ. ಬಾಳೆ, ಅಡಕೆ ಬೆಳೆಗಳು ಹಾನಿಗೊಂಡಿದೆ.

heavy rain in chitradurga

ಬಾರೀ ಪ್ರಮಾಣದ ಮಳೆಯಿಂದಾಗಿ ಜನರು ಪರದಾಡುವಂತಾಗಿದೆ

ದೊಡ್ಡಯ್ಯನಪಾಳ್ಯದ ನಿವಾಸಿಯಾಗಿರುವ ದಕ್ಷಿಣಮೂರ್ತಿಯವರಿಗೆ ಸೇರಿದ್ದ ಸುಮಾರು 50 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಹಾನಿಗೊಂಡಿದೆ. ಬೆಳೆ ಹಾನಿಯಿಂದ ದಕ್ಷಿಣಮೂರ್ತಿಯವರಿಗೆ 15 ಲಕ್ಷ ರೂ. ನಷ್ಟವಾಗಿದೆ. ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಮನವಿ ಸಲ್ಲಿಸಿದ್ದಾರೆ.

ಕೊಡಗಿನಲ್ಲೂ ವರುಣನ ಆರ್ಭಟ ಜಿಲ್ಲೆಯಲ್ಲಿ ಇಂದು ಧಿಡೀರನೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು ಶನಿವಾರಸಂತೆ, ಅಂಕನಹಳ್ಳಿ ಸುತ್ತಮುತ್ತ ಮಳೆಯಾಗಿದೆ. ಆಲಿಕಲ್ಲು ಮಳೆ ಹಿನ್ನೆಲೆ ಕಾಫಿ ಸೇರಿದಂತೆ ಕಾಳು ಮೆಣಸು ಸೇರಿ ಲಕ್ಷಾಂತರ ಮೌಲ್ಯದ ಬೆಳೆಗೆ ಹಾನಿಯುಂಟಾಗಿದೆ.

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ, ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ

Follow Us
shruti hegde
shruti hegde
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ