AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ಹಲವೆಡೆ ಅಕಾಲಿಕ ಮಳೆ, ಬೆಳೆ ನಾಶ

ಏಪ್ರಿಲ್ 13ರಿಂದ ಏಪ್ರಿಲ್ 15ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮಳೆ ಸುರಿಯಲಿದೆ.

ತೆಲಂಗಾಣದ ಹಲವೆಡೆ ಅಕಾಲಿಕ ಮಳೆ, ಬೆಳೆ ನಾಶ
ತೆಲಂಗಾಣದಲ್ಲಿ ಭಾರಿ ಮಳೆ
sandhya thejappa
|

Updated on: Apr 14, 2021 | 9:48 AM

Share

ಹೈದರಾಬಾದ್: ತೆಲಂಗಾಣದ ಹಲವೆಡೆ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿದೆ. ನಿಜಾಮಬಾದ, ಕರೀಮನಗರ, ವರಂಗಲ್, ನಿರ್ಮಲ್ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಭಾರಿ ನೀರು ಹರಿದಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಅಪಾರ ಪ್ರಮಾಣದ ಮಾವು ಮತ್ತು ಭತ್ತ ನಾಶವಾಗಿದೆ.

ಕರ್ನಾಟಕದಲ್ಲೂ ಏಪ್ರಿಲ್ 13ರಿಂದ ಏಪ್ರಿಲ್ 15ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು (ಏಪ್ರಿಲ್ 14) ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚೆಂದರೆ 34 ಡಿಗ್ರಿ ತಾಪಮಾನ ದಾಖಲಾಗಬಹುದು, ಅತಿ ಕಡಿಮೆಯೆಂದರೆ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ರಾಜ್ಯದ ರಾಜಧಾನಿಯಲ್ಲಿ ಇಂದು ಬೆಳಿಗ್ಗೆಯಿಂದ ಮೋಡ ಆವರಿಸಿದೆ. ಮಳೆಯಾಗುವ ಸಾಧ್ಯತೆಯೂ ಹೆಚ್ಚಿದೆ.

ಇದನ್ನೂ ಓದಿ

Karnataka Weather: ಮುಂದಿನ ನಾಲ್ಕೈದು ದಿನಗಳಲ್ಲಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Karnataka Weather: ಕರ್ನಾಟಕದಲ್ಲಿ 5 ದಿನ ಮಳೆ ಸಾಧ್ಯತೆ; ಮುಂದಿನ ವಾರದಲ್ಲಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ

(Heavy Rain in Hyderabad and huge crop destroyed)