ರಾಜ್ಯದಲ್ಲಿ ಧಾರಾಕಾರ ಮಳೆ: ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಶಾಲಾ ಕಾಲೇಜಿಗೆ ರಜೆ

ಮಾಜಿ ಸಚಿವೆ ಮೋಟಮ್ಮ(Ex Minister Motamma) ಸಹೋದರ ಅನಂತು ಅವರ ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಕಾರಿನಲ್ಲಿದ್ದ ಎಂ.ಎಸ್ ಅನಂತು ಪತ್ನಿ ಸೇರಿದಂತೆ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ರಾಜ್ಯದಲ್ಲಿ ಧಾರಾಕಾರ ಮಳೆ: ಉತ್ತರ ಕನ್ನಡ,  ದಕ್ಷಿಣ ಕನ್ನಡ  ಸೇರಿದಂತೆ ಹಲವೆಡೆ ಶಾಲಾ ಕಾಲೇಜಿಗೆ ರಜೆ
ಮಳೆ
Follow us
TV9 Web
| Updated By: ಆಯೇಷಾ ಬಾನು

Updated on:Jul 06, 2022 | 8:35 PM

ರಾಜ್ಯದ ಹಲವೆಡೆ ವರುಣನ ಆರ್ಭಟ(Karnataka Rain) ದಿನದಿಂದ ದಿನಕ್ಕೆ ಜೋರಾಗುತ್ತಲೇ ಇದೆ. ಅದ್ರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಲೇ ಇದ್ದು, ಮನೆಯಿಂದ ಹೊರಬರೋದೆ ದೊಡ್ಡ ಸವಾಲಾಗಿದೆ. ಗುಡ್ಡಗಳು ಕುಸಿದು ಬೀಳುತ್ತಿವೆ. ಜಲಾಶಯಗಳು ತುಂಬಿ ಹರಿಯುತ್ತಿದ್ದು, ನದಿ ಪಕ್ಕದ ಜನರಿಗೆ ನಡುಕ ಶುರುವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಕಡಲ ಕೊರೆತ ಉಂಟಾಗಿದೆ. ಕುಮಟಾ, ಹೊನ್ನಾವರ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಾಳಿ, ಅಘನಾಶಿನಿ, ಶರಾವತಿ ನದಿಗಳೆಲ್ಲ ತುಂಬಿ ಹರಿಯುತ್ತಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಅಂಗನವಾಡಿಯಿಂದ ಪದವಿ ಕಾಲೇಜಿನವರೆಗೂ ನಾಳೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಭಾರಿ ಮಳೆಯಿಂದ ಮನೆ ಗೋಡೆ ಕುಸಿದಿದೆ. ಮಾಸ್ತಪ್ಪ ನಾಯ್ಕ ಎಂಬುವರ ಮನೆಯ ಗೋಡೆ ಕುಸಿದಿದ್ದು ಭಾರತಿ ನಾಯ್ಕಗೆ ಗಾಯಗಳಾಗಿವೆ. ಗಾಯಾಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮನೆ ಕುಸಿದ ಸ್ಥಳಕ್ಕೆ ಪಿಡಿಒ, ಆರ್ಐ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವಾಡ್೯ ನಂ 7 ರಲ್ಲಿ ಪುರಸಭೆ ಚರಂಡಿ ದುರಸ್ತಿಗೊಳಿಸದ ಹಿನ್ನಲೆ ಮನೆಗೆ ನೀರು ನುಗ್ಗಿದೆ. ನೀರಲ್ಲೆ ಕುಳಿತು ಕುಟುಂಬಸ್ಥರು, ಸಂಬಂಧಿಕರು ವೈಕುಂಠ ಸಮಾರಾಧನೆಯ ಊಟ ಮಾಡಿದ್ದಾರೆ. ನಾಗಪ್ಪ ನಾಯ್ಕ ಅವರ ತಾಯಿಯ 14ನೇ ದಿನದ ತಿಥಿ ಕಾರ್ಯ ಹಿನ್ನೆಲೆ ವೈಕುಂಠ ಸಮಾರಾಧನೆ ಕಾರ್ಯಕ್ರಮ ನಡೆಸಿದ್ದು ಮಳೆಯ ನೀರಲ್ಲಿ ಕುಳಿತು ಊಟ ಮಾಡಿದ ಘಟನೆ ನಡೆದಿದೆ. ಪುರಸಭೆಗೆ ಹಿಡಿ ಶಾಪ ಹಾಕಿದ್ದಾರೆ. ಇದನ್ನೂ ಓದಿ: Karnataka Rain: ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆ ಸಾಧ್ಯತೆ ಉಡುಪಿಯಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ. ಮಳೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಮೀನುಗಾರರು ನದಿ ಮತ್ತು ಸಮುದ್ರಕ್ಕೆ ಇಳಿದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಜುಲೈ 11 ರ ವರೆಗೂ ಭಾರಿ ಮಳೆ ಮುಂದುವರೆಯುವ ನಿರೀಕ್ಷೆ ಇದೆ.

ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಹಿನ್ನೆಲೆ ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿಸಿದ್ದಾರೆ.

ಹಾಸನದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಹಾಸನ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ನಾಳೆ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆಲೂರು, ಅರಕಲಗೂಡು, ಸಕಲೇಶಪುರ ತಾಲೂಕಿನ, ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್ ಆದೇಶ ಹೊರಡಿಸಿದ್ದಾರೆ. ನಾಳಿನ ಮಳೆ ಪರಿಸ್ಥಿತಿ ಗಮನಿಸಿ ಮತ್ತೆ ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: Saji Cheriyan ಸಂವಿಧಾನದ ವಿರುದ್ಧ ಹೇಳಿಕೆ ನೀಡಿದ್ದ ಕೇರಳದ ಸಚಿವ ಸಜಿ ಚೆರಿಯನ್ ರಾಜೀನಾಮೆ

ಚಿತ್ರದುರ್ಗದಲ್ಲೂ ಭಾರಿ ಮಳೆ ಚಿತ್ರದುರ್ಗ ನಗರದಲ್ಲಿ ಕೆಲ ಹೊತ್ತು ಧಾರಾಕಾರ ಮಳೆ ಹಿನ್ನೆಲೆ ತುರುವನೂರು ರಸ್ತೆಯ ಸೇತುವೆ ಬಳಿ ರಸ್ತೆ ಜಲಾವೃತಗೊಂಡಿದೆ. ಹಳೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ಸೇತುವೆ ಬಳಿ ರಸ್ತೆ ಜಲಾವೃತವಾಗಿದ್ದು ನೀರಿನಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ.

ಮಾಜಿ ಸಚಿವೆ ಮೋಟಮ್ಮ ಸೋದರನ ಕಾರಿನ ಮೇಲೆ ಬಿದ್ದ ಮರದ ಕೊಂಬೆ ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರದ ಕೊಂಬೆಗಳು ಬಿದ್ದು ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಬಚಾವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಮೂಡಿಗೆರೆಯಲ್ಲಿ ಘಟನೆ. ಮಾಜಿ ಸಚಿವೆ ಮೋಟಮ್ಮ ಸಹೋದರ ಅನಂತು ಅವರ ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಕಾರಿನಲ್ಲಿದ್ದ ಎಂ.ಎಸ್ ಅನಂತು ಪತ್ನಿ ಸೇರಿದಂತೆ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರಿನ ಮೇಲೆ ಮರದ ಕೊಂಬೆಗಳು ಬೀಳುವ ಮೈ ಜುಮ್ ಎನಿಸುವ ಸಿಸಿಟಿವಿ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ಬಿರುಗಾಳಿಯ ಆರ್ಭಟವು ಜೋರಾಗಿದೆ. ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 6:41 pm, Wed, 6 July 22

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು