AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಭೂಕುಸಿತ: ಜಿಲ್ಲಾಧಿಕಾರಿ ಕಚೇರಿ ಕುಸಿಯುವ ಆತಂಕ

ತಡೆಗೋಡೆ ಬದಿಯಲ್ಲೇ ಮಣ್ಣು ಕುಸಿಯುತ್ತಿರುವುದರಿಂದ ಕಚೇರಿ ಸಮುಚ್ಚಯವೂ ಕುಸಿಯಬಹುದು ಎಂದು ವಿಶ್ಲೇಷಿಸಲಾಗಿದೆ.

ಕೊಡಗಿನಲ್ಲಿ ಭೂಕುಸಿತ: ಜಿಲ್ಲಾಧಿಕಾರಿ ಕಚೇರಿ ಕುಸಿಯುವ ಆತಂಕ
ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ರಸ್ತೆ ಮೇಲೆ ಮರಗಳು ಉರುಳಿವೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 15, 2021 | 5:17 PM

Share

ಮಡಿಕೇರಿ: ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕೆಳಗೆ ಮಣ್ಣು ಸಡಿಲವಾಗುತ್ತಿರುವುದರಿಂದ ಕೊಡಗು ಜಿಲ್ಲಾಧಿಕಾರಿ ಕಚೇರಿ ಕುಸಿಯಬಹುದು ಎಂಬ ಆತಂಕ ಕಾಣಿಸಿಕೊಂಡಿದೆ. ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಡಳಿತ ಆರಂಭಿಸಿದೆ.

ತಡೆಗೋಡೆ ಬದಿಯಲ್ಲೇ ಮಣ್ಣು ಕುಸಿಯುತ್ತಿರುವುದರಿಂದ ಕಚೇರಿ ಸಮುಚ್ಚಯವೂ ಕುಸಿಯಬಹುದು ಎಂದು ವಿಶ್ಲೇಷಿಸಲಾಗಿದೆ. ಮಡಿಕೇರಿ ಮತ್ತು ಮಂಗಳೂರು ರಸ್ತೆಯ ಸಮೀಪದಲ್ಲಿಯೇ ಜಿಲ್ಲಾಧಿಕಾರಿ ಕಚೇರಿಯೂ ಇದೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ತತ್ತರಿಸಿದೆ. ಜಿಲ್ಲೆಯ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇಲ್ಲದೆ ಜನರು ಪರದಾಡುವಂತಾಗಿದೆ.

ಹೊನ್ನಾವರ: ಮನೆ ಅಂಗಳಕ್ಕೆ ಬಂಡೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಮಳೆಯಿಂದಾಗಿ ನೀರಿನ ಪಸೆ ಹೆಚ್ಚಾಗಿದ್ದು, ಗುಡ್ಡ ಕುಸಿಯುತ್ತಿದೆ. ಹೊನ್ನಾವರ ತಾಲೂಕಿನ ಕಾವೂರಿನಲ್ಲಿ ಗುಡ್ಡದ ಮೇಲಿದ್ದ ಬಂಡೆಯೊಂದು ಉರುಳಿ ಮನೆ ಅಂಗಳಕ್ಕೆ ಬಂದು ಬಿದ್ದಿದೆ.

ಹೊನ್ನಾವರ ತಾಲ್ಲೂಕು ಕಾವೂರು ಗ್ರಾಮದ ಸುರೇಶ್ ಗೌಡ ಎಂಬುವವರ ಮನೆ ಪಕ್ಕದಲ್ಲಿ ಗುಡ್ಡ ಕುಸಿದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಂಗಳೂರಿನಲ್ಲಿ ಕಾರ್ಮೋಡದ ಕತ್ತಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಹಗಲಿನಲ್ಲೇ ಕತ್ತಲೆಯ ವಾತಾವರಣ ಕಂಡು ಬಂದಿದೆ. ಕತ್ತಲು ಆವರಿಸಿರುವ ಹಿನ್ನೆಲೆಯಲ್ಲಿ ಹಾಡಹಗಲೇ ಲೈಟ್ ಹಾಕಿಕೊಂಡು ವಾಹನಗಳು ಸಂಚರಿಸುತ್ತಿವೆ.

ಮಳೆ ವ್ಯಾಪಕವಾಗಿ ಸುರಿಯುತ್ತಿರುವುದರಿಂದ ಮಂಗಳೂರಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ರಸ್ತೆಗಳು ಜಲಾವೃತಗೊಂಡಿವೆ. ಮಂಗಳೂರಿನ ಕದ್ರಿ, ನಂತೂರು ಜಂಕ್ಷನ್, ಪಂಪ್​ವೆಲ್ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಮೂಡಿಗೆರೆ: ಮನೆ ಮೇಲೆ ಬಿದ್ದ ಮರ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿದ್ದು, ಮರವೊಂದು ಮನೆಯ ಮೇಲೆ ಬಿದ್ದಿದೆ. ಬೊಮ್ಮನಗದ್ದೆಯಲ್ಲಿ ಫೆಲಿಕ್ಸ್ ಅವರ ಮನೆಯ ಮೇಲೆ ಮರ ಬಿದ್ದಿದೆ.

(heavy rain in Kodagu district dc office in danger landslide in Honnavara)

ಇದನ್ನೂ ಓದಿ: Karnataka Rain: ಬೆಂಗಳೂರಲ್ಲಿ ಮುಂದಿನ 2 ದಿನ, ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 19ರವರೆಗೆ ಭರ್ಜರಿ ಮಳೆಯಾಗುವ ಸಾಧ್ಯತೆ

ಇದನ್ನೂ ಓದಿ: KRS Dam: ಕಬಿನಿ ಜಲಾನಯನ ಪ್ರದೇಶದಲ್ಲಿ ಬಿರುಸುಗೊಂಡ ಮಳೆ, ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಎಷ್ಟಿದೆ ಈಗ?

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?