ಮಟಮಟ ಮಧ್ಯಾಹ್ನವೇ ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ: ಬೆಂಗಳೂರಿಗರೇ ಎಚ್ಚರ!

ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಇಂದು (ಮೇ 12) ಮಟ ಮಟ ಮಧ್ಯಾಹ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ದರ್ಶನ ಆಗಿದೆ. ಇದರಿಂದ ಬಿಸಿಲ ಶಾಖಕ್ಕೆ ಬೇಸತ್ತಿದ್ದ ಜನರಿಗೆ ಮಳೆ ಕೊಂಚ ಕೂಲ್ ಕೂಲ್ ಮಾಡಿದೆ. ಹಾಗಾದ್ರೆ, ಕರ್ನಾಟಕದ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದೆ ಎನ್ನುವ ವಿವರ ಇಲ್ಲಿದೆ.

ಮಟಮಟ ಮಧ್ಯಾಹ್ನವೇ ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ: ಬೆಂಗಳೂರಿಗರೇ ಎಚ್ಚರ!
ಮಟಮಟ ಮಧ್ಯಾಹ್ನವೇ ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ...ಬೆಂಗಳೂರಿಗರೇ ಎಚ್ಚರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:May 12, 2024 | 4:44 PM

ಚಿಕ್ಕಮಗಳೂರು , ಮೇ 12: ಕಳೆದೊಂದು ನಾಲ್ಕೈದು ದಿನಗಳಿಂದ ಬೆಂಗಳೂರಲ್ಲಿ ಅಬ್ಬರಿಸಿದ್ದ ಮಳೆರಾಯ (Rain), ಇದೀಗ ರಾಜ್ಯದ ಹಲವು ಜಿಲ್ಲೆಗಳಿಗೆ ಶಿಫ್ಟ್ ಆಗಿದೆ. ನಿನ್ನೆ ಬೆಳಗಾವಿ, ಹುಬ್ಬಳ್ಳಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದೀಗ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಟ್ಟಿಗೆಹಾರ ಸುತ್ತಮುತ್ತ ಕಳೆದ 4 ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿದೆ.

ಕಡೂರು, ತರೀಕೆರೆ, ಅಜ್ಜಂಪುರ ತಾಲೂಕುಗಳ ಹಲವೆಡೆ ಭಾರಿ ಮಳೆ ಆಗಿದೆ. ಕುಡಿಯುವ ನೀರಿಗೂ ಬಯಲುಸೀಮೆ ಭಾಗದ ಜನರು ಪರದಾಡುವಂತ್ತಾಗಿತ್ತು. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲುಸೀಮೆ ರೈತರಲ್ಲಿ ಇದೀಗ ಮಂದಹಾಸ ಮೂಡಿದೆ. ಧಾರಾಕಾರ ಮಳೆ ಹಿನ್ನೆಲೆ ತೆಂಗು, ಅಡಿಕೆ ಬೆಳೆಗಾರರು, ರೈತರಲ್ಲಿ ಸಂತಸ ತಂದಿದೆ.

ಮುಳುಗಿದ ರಸ್ತೆ: ಖಾಸಗಿ ಬಸ್​ ಮೇಲೆ ಸೆಂಟ್ರಿಂಗ್ ಕಟ್ಟಿಗೆ

ಧಾರವಾಡದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಾಕಷ್ಟು ಸಮಸ್ಯೆ ಆಗಿದೆ. ಡಿಸಿ ಕಚೇರಿಯ ಕಾಂಪೌಂಡ್ ಬಳಿ ಸೆಂಟ್ರಿಂಗ್​ಗೆ ಹಾಕಿದ್ದ ಕಟ್ಟಿಗೆ ಬಿದ್ದು ಖಾಸಗಿ ಬಸ್​ ಜಖಂ ಆಗಿದೆ. ಇಷ್ಟೇ ಅಲ್ಲ ಧಾರಕಾರ ಮಳೆಗೆ ಅಲ್ಲಲ್ಲಿ ಮರಗಳು ಧರೆಗುರುಳಿವೆ. ಮುಖ್ಯರಸ್ತೆಗಳೇ ನದಿಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.

ಇದನ್ನೂ ಓದಿ: ಭಾರಿ ಮಳೆ: ಹುಬ್ಬಳ್ಳಿಯಲ್ಲಿ 40 ಬೈಕ್​ಗಳು ಜಲಾವೃತ, ಚಾಮರಾಜನಗರದಲ್ಲಿ ಬಾಳೆ ಬೆಳೆ ನಾಶ

ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಅವಾಂತರ ಸಂಭವಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಹಿಂಭಾಗದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್​ನ ಬೇಸ್​ಮೆಂಟ್​ನಲ್ಲಿ ನಿಲ್ಲಿಸಿದ್ದ 40ಕ್ಕೂ ಹೆಚ್ಚು ಬೈಕ್​ಗಳು ಜಲಾವೃತವಾಗಿವೆ. ಹೀಗಾಗಿ ಮೆಕ್ಯಾನಿಕ್​ ಕರೆತಂದು ಸಿಬ್ಬಂದಿಗಳು ಬೈಕ್ ರಿಪೇರಿ ಮಾಡಿಸುತ್ತಿದ್ದಾರೆ.

ಮೇ‌ 15ರವರೆಗೆ ಬೆಂಗಳೂರಿಗೂ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವೆಡೆ ಇಂದು ಭಾರಿ ಮಳೆಯ ಮುನ್ಸೂಚನೆ ಇದೆ. ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಮತ್ತು ನಾಳೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಇದೆ. 4 ದಿನಗಳ ಕಾಲ ಉತ್ತರ ಒಳನಾಡು, ದಕ್ಷಿಣ ಒಳನಾಡಿಲ್ಲಿ ಮಳೆ ಆಗಲಿದ್ದು, ಯೆಲ್ಲೋ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇವತ್ತು ಸಹ ಬಿರುಸಿನ ಗಾಳಿಯೊಂದಿಗೆ ಭಾರೀ ಮಳೆ, ಮಲೆನಾಡಿಗೆ ಎಂದಿನ ಕಳೆ!

ಇಂದಿನಿಂದ ಮೇ‌ 15ರವರೆಗೆ ಬೆಂಗಳೂರಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಿರುಗಾಳಿ, ಗುಡುಗು ಸಹಿತ ಬೆಂಗಳೂರಿನಲ್ಲಿ ಭಾರೀ ಮಳೆ ಸಂಭವವಿದೆ. ಈಗಾಗಲೇ ನಗರದ ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:43 pm, Sun, 12 May 24

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್