ಕರ್ನಾಟಕದ ಹಲವೆಡೆ ಮಳೆ ಅವಾಂತರ; ಬೆಳೆ ನಾಶ, ನಂಜನಗೂಡಿನಲ್ಲಿ ಮರ ಬಿದ್ದು ಕಾರು ಜಖಂ

ಮೈಸೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ಹುಣಸೂರು ತಾಲೂಕಿನ ಸಬ್ಬಾನಹಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ನಾಶವಾಗಿದೆ. ಕೃಷ್ಣಯ್ಯ ಎಂಬ ರೈತ ಸಾಲ ಮಾಡಿ ಒಂದೂವರೆ ಎಕರೆಯಲ್ಲಿ ಬಾಳೆ ಬೆಳೆದಿದ್ದರು.

ಕರ್ನಾಟಕದ ಹಲವೆಡೆ ಮಳೆ ಅವಾಂತರ; ಬೆಳೆ ನಾಶ, ನಂಜನಗೂಡಿನಲ್ಲಿ ಮರ ಬಿದ್ದು ಕಾರು ಜಖಂ
ಬಾಳೆ ಗಿಡಗಳು ನೆಲಕ್ಕೆ ಉರುಳಿವೆ
Follow us
TV9 Web
| Updated By: sandhya thejappa

Updated on:May 04, 2022 | 9:16 AM

ತುಮಕೂರು: ರಾಜ್ಯದಲ್ಲಿ ಹಲವೆಡೆ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು (Heavy Rain), ಅವಾಂತರ ಸೃಷ್ಟಿಯಾಗಿದೆ. ತಡರಾತ್ರಿ ತುಮಕೂರು ಜಿಲ್ಲೆಯಲ್ಲಿ ಸುರಿದ ಮಳೆ ಅಬ್ಬರಕ್ಕೆ ವಿದ್ಯುತ್ ಕಂಬಗಳು (Power poles), ಮರಗಳು ನೆಲಕ್ಕೆ ಉರುಳಿವೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಮೂರ್ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಇನ್ನು ಚಿತ್ರದುರ್ಗ ನಗರದಲ್ಲಿ ಬಿರುಗಾಳಿ ಸಹಿತ ಮಳೆಗೆ ತಡರಾತ್ರಿ ಓಬವ್ವ ಕ್ರೀಡಾಂಗಣದ ರಸ್ತೆಯಲ್ಲಿ ಮರಗಳು ಧರೆಗುರುಳಿವೆ. ಅದೃಷ್ಟವಶಾತ್ ನಗರದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮೈಸೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ಹುಣಸೂರು ತಾಲೂಕಿನ ಸಬ್ಬಾನಹಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ನಾಶವಾಗಿದೆ. ಕೃಷ್ಣಯ್ಯ ಎಂಬ ರೈತ ಸಾಲ ಮಾಡಿ ಒಂದೂವರೆ ಎಕರೆಯಲ್ಲಿ ಬಾಳೆ ಬೆಳೆದಿದ್ದರು. ಆದರೆ ಮಳೆಯಿಂದ ಬೆಳೆ ಹಾಳಾಗಿದೆ. ಹೀಗಾಗಿ ಬೆಳೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಂಜನಗೂಡಿನಲ್ಲಿ ಕಾರಿನ ಮೇಲೆ ಭಾರಿ ಗಾತ್ರದ ಮರ ಬಿದ್ದು ಕಾರು ಸಂಪೂರ್ಣ ಜಖಂ ಆಗಿದೆ. ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ರಸ್ತೆಯ ರೋಟರಿ ಶಾಲೆ ಬಳಿ ಘಟನೆ ನಡೆದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬ ಹಾಗೂ ತಂತಿಗಳು ತುಂಡಾಗಿವೆ.

ಇಂದು ಗುಡುಗು ಸಹಿತ ಮಳೆ ಸಾಧ್ಯತೆ: ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ ಇನ್ನೂ ದಿನವೂ ಸಂಜೆಯ ಬಳಿಕ ಆಗಾಗ ಮುಖ ತೋರಿಸಿ ಹೋಗುತ್ತಿದ್ದಾನೆ. ಕರ್ನಾಟಕದಲ್ಲಿ ವರುಣನ ಅಬ್ಬರ  ಇನ್ನೂ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ಹಗುರ ಮಳೆಯಾಗಲಿದೆ.

ಇದನ್ನೂ ಓದಿ

ಹೆಣ್ಣು ಮಗು ಎಂದು ಮನೆ ಬಿಟ್ಟು ಹೋದ ಅಪ್ಪ; ಪಿಎಸ್ಐ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಚನಾ ಮುತ್ತಲಗೇರಿ ಜೀವನ ಹೇಗಿದೆ ಗೊತ್ತಾ?

RCB vs CSK: ಸಿಎಸ್​​ಕೆ ವಿರುದ್ಧ ಹೊಸ ಪ್ರಯೋಗಕ್ಕೆ ಮುಂದಾದ ಆರ್​ಸಿಬಿ: ಶಹಬಾಜ್ ಔಟ್, ಈ ಆಟಗಾರ ಇನ್?

Published On - 9:15 am, Wed, 4 May 22

ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್