ಬೆಂಗಳೂರು: ನೈರುತ್ಯ ಮುಂಗಾರು ದುರ್ಬಲವಾಗಿರುವ ಹಿನ್ನಲೆ ರಾಜ್ಯದಲ್ಲಿ ಇನ್ನು ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಮುನ್ಸೂಚನೆ ನೀಡಿದ್ದಾರೆ. ಕರಾವಳಿಯ ಬಹುತೇಕ ಕಡೆ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದು (ಜುಲೈ 20) ಕೆಲವಡೆ ಮಳೆಯಾಗಿದ್ದು, ಇಲ್ಲಿಯೂ ಕೂಡ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ದಕ್ಷಿಣ ಒಳನಾಡಿನಲ್ಲಿ ಇಂದು ಹೆಚ್ಚು ಮಳೆಯಾಗಿದ್ದು, ಇನ್ನು ಮೂರು ದಿನ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿಯು ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
Published On - 7:42 pm, Wed, 20 July 22