ಬೆಂಗಳೂರು: ರಾಜ್ಯ ರಾಜಧಾನಿಯ ಹಲವೆಡೆ ಮಳೆ ಸುರಿದಿದೆ. ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಜಯನಗರ, ಬಸವನಗುಡಿ, ಎನ್.ಆರ್.ಕಾಲೋನಿ, ಬನಶಂಕರಿ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದೆ. ಸತತ 30 ನಿಮಿಷಕ್ಕೂ ಹೆಚ್ಚು ಕಾಲ ಈ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಸೆಕೆಯಿಂದ ಸುಸ್ತು ಹೊಡೆದಿದ್ದ ನಾಗರಿಕರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ
ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧ ಪ್ರದೇಶಗಳಲ್ಲೂ ಗುಡುಗು-ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡದ ಯಲ್ಲಾಪುರ, ಅಂಕೋಲಾ ತಾಲೂಕಿನ ಕೆಲ ಭಾಗಗಳಲ್ಲಿ ಮಳೆ ಸುರಿದಿದ್ದು, ಸೆಖೆಯಿಂದ ಬೆವರುತ್ತಿದ್ದ ಜನರಿಗೆ ಕೊಂಚ ಸಮಾಧಾನ ತರಿಸಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸಂಜೆಯ ವೇಳೆಗೆ ಮಳೆಯಾಗುತ್ತಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆ ಸುರಿಯುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಕೂಡ ಸಂಭವಿಸಿದೆ.
Isolated heavy rainfall is also likely over Kerala & Mahe during 10th-12th & 14th; Coastal Karnataka on 10th & 12th; Tamil Nadu, Puducherry & Karaikal on 10th & 14th May, 2021.
♦ No heat wave conditions are likely over any part of the country during next 4-5 days. pic.twitter.com/5Sx3ODYkfJ— India Meteorological Department (@Indiametdept) May 10, 2021
ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಈ ಮುಂಚೆಯೇ ಮಾಹಿತಿ ನೀಡಿತ್ತು. ಅದರಂತೆ, ಮೇ 10ನೇ ತಾರೀಖಿನವರೆಗೆ ಯೆಲ್ಲೋ ಅಲರ್ಟ್ ಇರಲಿದೆ. ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಪ್ರಕಟಣೆಯಲ್ಲಿ ಸೂಚನೆ ನೀಡಲಾಗಿತ್ತು.
ಇದನ್ನೂ ಓದಿ: 16 ಜನರ ಮೇಲೆ ಅಪರಾಧ ಹೊರಿಸಿದ್ದು ನಾನಲ್ಲ; ಅವರನ್ನು ಬಿಬಿಎಂಪಿ ಮೊದಲೇ ಕೆಲಸದಿಂದ ತೆಗೆದಿತ್ತು- ಸಂಸದ ತೇಜಸ್ವಿ ಸೂರ್ಯ
(Heavy Rain lashes Bengaluru Current weather and temperature in Bangalore )
Published On - 8:47 pm, Mon, 10 May 21