AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ; ಸನ್ನದ್ಧವಾಗಿರಲು ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಸೂಚನೆ

Bengaluru Rain Forecast: ಈ ವರ್ಷ ದೇಶಾದ್ಯಂತ ಶೇ 104 ರಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ, ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಿದೆ. ಹೀಗಾಗಿ ಮುಂಬರುವ ಮುಂಗಾರು ಮಳೆ ಮತ್ತು ಮಳೆ ಸಂಬಂಧಿ ಅವಘಡಗಳ ತಪ್ಪಿಸಲು ಈಗಲೇ ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿಗಳೂ ಒಳಗೊಂಡಂತೆ ಸಂಬಂಧಪಟ್ಟವರಿಗೆ ಸರ್ಕಾರ ಪತ್ರ ಬರೆದಿದೆ.

Karnataka Rains: ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ; ಸನ್ನದ್ಧವಾಗಿರಲು ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಸೂಚನೆ
ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ; ಸನ್ನದ್ಧವಾಗಿರಲು ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಸೂಚನೆ
ಗಣಪತಿ ಶರ್ಮಾ
| Edited By: |

Updated on:May 07, 2024 | 3:10 PM

Share

ಬೆಂಗಳೂರು, ಮೇ 7: ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ (Karnataka Rains) ಮಳೆಯಾಗುತ್ತಿದ್ದು, ಮುಂಗಾರು ಪ್ರಾರಂಭವಾಗುವ ಸುಳಿವು ನೀಡಿದೆ. ಹೀಗಾಗಿ, ಭಾರಿ ಮಳೆ ಹಾಗೂ ಮಳೆ (Rain) ಸಂಬಂಧಿತ ಹಾನಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಪ್ರಾದೇಶಿಕ ಆಯುಕ್ತರು, ಡಿಸಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಂದಾಯ ಇಲಾಖೆ (Revenue Department) ಪತ್ರ ಬರೆದಿದೆ. ತಗ್ಗು ಪ್ರದೇಶಗಳನ್ನು ಗುರುತಿಸಲು, ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲು ಮತ್ತು ಅಣೆಕಟ್ಟುಗಳ ಸಮೀಪವಿರುವ ನಿವಾಸಿಗಳನ್ನು ತ್ವರಿತವಾಗಿ ಎಚ್ಚರಿಸಲು ಸಿದ್ಧತೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಈ ವರ್ಷ ದೇಶಾದ್ಯಂತ ಶೇ 104 ರಷ್ಟು ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿಯೂ ಹೆಚ್ಚಿನ ಮಳೆಯಾಗಲಿದೆ. ಹೀಗಾಗಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಕಂದಾಯ ಇಲಾಖೆಯ ಅಧೀನದಲ್ಲಿರುವ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೊರಡಿಸಿದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಾಗಿ ಇತರ ಇಲಾಖೆಗಳೊಂದಿಗೆ ಸಭೆ ನಡೆಸಿ ಜವಾಬ್ದಾರಿಗಳನ್ನು ಹಂಚುವ ಅಗತ್ಯವೂ ಇದೆ. ತಗ್ಗು ಪ್ರದೇಶಗಳನ್ನು ಗುರುತಿಸಲು ಅಧಿಕಾರಿಗಳು ಡಿಸಿಗಳಿಗೆ ಸೂಚನೆ ನೀಡಿದ್ದು, ಇದಕ್ಕಾಗಿ ನಗರಾಭಿವೃದ್ಧಿ ಇಲಾಖೆ/ಆರ್‌ಡಿಪಿಆರ್ ಮತ್ತು ಪಿಡಬ್ಲ್ಯೂಡಿಯೊಂದಿಗೆ ಸಮನ್ವಯತೆ ಸಾಧಿಸುವ ಅಗತ್ಯವಿದೆ.

ಮಳೆಯಿಂದ ಹಾನಿ: ಬೆಳೆ ಪರಿಹಾರಕ್ಕೆ ರೈತರ ಆಗ್ರಹ

ಮಳೆಯಿಂದ ಹಾನಿಗೀಡಾದ ಬೆಳೆಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಹಾಗೂ ದನಕರುಗಳಿಗೆ ಆಹಾರಕ್ಕಾಗಿ ಗೋಶಾಲೆ ಆರಂಭಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಮೈಸೂರು-ಊಟಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತರು ಬಾಳೆ ಮತ್ತಿತರ ತೋಟಗಾರಿಕಾ ಬೆಳೆಗಳನ್ನು ಕಳೆದುಕೊಂಡಿದ್ದು, ರೈತರನ್ನು ಅಪಾರ ನಷ್ಟದಿಂದ ಪಾರು ಮಾಡಲು ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು.

ಇದನ್ನೂ ಓದಿ: ಚಾಮರಾಜನಗರ: ಗಾಳಿ ಮಳೆಗೆ ಸಾವಿರಾರು ಎಕರೆ ಬಾಳೆ ತೋಟ ನಾಶ, 25 ಕೋಟಿ ರೂ. ನಷ್ಟ

ಮೈಸೂರು ತಾಲೂಕಿನ ಕತ್ತೂರು ಹಾಗೂ ಇತರೆಡೆ ಗಾಳಿ ಮಳೆಯಿಂದಾಗಿ ನೂರಾರು ಎಕರೆ ಬಾಳೆ ತೋಟಗಳು ನಾಶವಾಗಿದ್ದವು. ನೆರೆಯ ಚಾಮರಾಜನಗರದಲ್ಲಿಯೂ 1,250 ಎಕರೆ ಪ್ರದೇಶದ ಬಾಳೆ ತೋಟ ನಾಶವಾಗಿತ್ತು.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿದಿದೆ. ಭಾರಿ ಗುಡುಗು ಮಿಂಚು ಸಹಿತ ಗಾಳಿಯೊಂದಿಗೆ ಸುಮಾರು ಅರ್ಧ ಗಂಟೆ ಮಳೆ ಸುರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Tue, 7 May 24

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!