AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರಿ ಮಳೆಯ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರಿ ಮಳೆಯ ಮುನ್ಸೂಚನೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Jul 10, 2023 | 7:27 AM

Share

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ಕದ್ರಾ, ಸುಳ್ಯ, ಕ್ಯಾಸಲ್​ರಾಕ್, ಮಾಣಿ, ಧರ್ಮಸ್ಥಳ, ಪಣಂಬೂರು, ಕೋಟ, ಉಡುಪಿ, ಗೇರುಸೊಪ್ಪ, ಪುತ್ತೂರು, ಭಾಗಮಂಡಲ, ಉಪ್ಪಿನಂಗಡಿ, ಬೆಳ್ತಂಗಡಿ, ಮಂಗಳೂರು, ಕಾರ್ಕಳ, ಕುಂದಾಪುರ, ಅಂಕೋಲಾ, ಶಿರಾಲಿ, ಸುಬ್ರಹ್ಮಣ್ಯ, ಕಾರವಾರ, ಯಲ್ಲಾಪುರ, ಗೋಕರ್ಣ, ಕುಮಟಾ, ಸಿದ್ದಾಪುರ, ಶೃಂಗೇರಿ, ಸೋಮವಾರಪೇಟೆ, ಮಂಚಿಕೆರೆ, ಬನವಾಸಿ, ಕೊಲ್ಲೂರು, ನಾಪೋಕ್ಲು, ಕೊಟ್ಟಿಗೆಹಾರ, ಹಳಿಯಾಳ, ಗಬ್ಬೂರು, ಬಾಳೆಹೊನ್ನೂರು, ಕಳಸ, ಕಮ್ಮರಡಿ, ಕಿರವತ್ತಿ, ಗಂಗಾವತಿ, ಹುಬ್ಬಳ್ಳಿ, ಕೂಡಲಸಂಗಮ, ಲಿಂಗಸುಗೂರು, ತ್ಯಾಗರ್ತಿ, ಹುಂಚದಕಟ್ಟೆ, ಭದ್ರಾವತಿ, ಹಾರಂಗಿ, ಗೋಣಿಕೊಪ್ಪಲು, ಕೊಪ್ಪ, ಚಿಕ್ಕಬಳ್ಳಾಪುರ, ಅರಕಲಗೂಡು, ತುಮಕೂರು, ಬೆಳ್ಳೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಜುಲೈ 13ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್