Karnataka Weather: ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯೊಳಗೆ ಧಾರಾಕಾರ ಮಳೆ

ಬೆಂಗಳೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯೊಳಗೆ ಧಾರಾಕಾರ ಮಳೆ
ಮಳೆImage Credit source: Earth.com
Follow us
ನಯನಾ ರಾಜೀವ್
|

Updated on: Nov 09, 2023 | 7:38 AM

ಬೆಂಗಳೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಕಾರವಾರದಲ್ಲಿ ಭಾರಿ ಮಳೆಯಾಗಿದೆ, ಹಗರಿಬೊಮ್ಮನಹಳ್ಳಿ, ಕದ್ರಾ, ಕ್ಯಾಸಲ್​ರಾಕ್, ಜೇವರ್ಗಿ,ಗುಂಡಗುರ್ತಿ, ಶಿವಮೊಗ್ಗ, ಅಂಕೋಲಾ, ಮಂಗಳೂರು ವಿಮಾನ ನಿಲ್ದಾಣ, ಕಮಲಾಪುರ, ಚಿತ್ತಾಪುರ, ಬೆಂಗಳೂರು ನಗರ, ಲಿಂಗನಮಕ್ಕಿ, ಹೊಸದುರ್ಗ, ಮಾನ್ವಿ, ಕೊಟ್ಟಿಗೆಹಾರ, ಯುಗಟಿ, ಅಜ್ಜಂಪುರ, ಹರಪನಹಳ್ಳಿ, ಶಿರಾಲಿ,ಸಿದ್ದಾಪುರ, ಪಣಂಬೂರು, ಮುದ್ದೇಬಿಹಾಳ, ಮೂಡಬಿ, ಸೇಡಂ, ಅಡಕಿ, ಅಫಜಲ್​ಪುರ, ಶಿಗ್ಗಾಂವ್, ತೊಂಡೇಭಾವಿ, ಮಡಿಕೇರಿ, ಹಾಸನ, ಕನಕಪುರ, ಚಿಕ್ಕಬಳ್ಳಾಪುರದಲ್ಲಿ ಮಲೆಯಾಗಿದೆ.

ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ನವೆಂಬರ್ 12ರವರೆಗೆ ಮಳೆ ಇರಲಿದ್ದು, ಬಳಿಕ ಒಣಹವೆ ಮುಂದುವರೆಯಲಿದೆ.

ಶಿರಾಲಿಯಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Weather: ಬೆಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಎಚ್​ಎಎಲ್​ನಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ