AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 19ರವರೆಗೂ ಭಾರಿ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 19ರವರೆಗೂ ಭಾರಿ ಮಳೆ
ಮಳೆ
ನಯನಾ ರಾಜೀವ್
|

Updated on: Jul 13, 2023 | 7:32 AM

Share

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಸಿದ್ದಾಪುರ, ಸುಳ್ಯ, ಮಾಣಿ,ಮಂಕಿ, ಮಂಗಳೂರು, ಪುತ್ತೂರು, ಶಿವನಿ, ಶಿರಾಲಿ, ಕ್ಯಾಸಲ್​ ರಾಕ್, ಸರಗೂರು, ತುಮಕೂರು, ದಾವಣಗೆರೆ, ಕುಮಟಾ, ಮುಲ್ಕಿ, ಉಪ್ಪಿನಂಗಡಿ, ಧರ್ಮಸ್ಥಳ, ಬೆಳ್ತಂಗಡಿ, ಲಿಂಗನಮಕ್ಕಿ, ಭದ್ರಾವತಿ, ಬೆಂಗಳೂರು ನಗರ, ಬೆಳ್ಳೂರು, ಮದ್ದೂರು, ಚನ್ನಪಟ್ಟಣ, ಕೊಟ್ಟಿಗೆಹಾರ, ಎನ್​ಆರ್​ ಪುರ, ದಾವಣಗೆರೆ, ತಿಪಟೂರಿನಲ್ಲಿ ಮಳೆಯಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Rains: ಮುಂದಿನ 3 ದಿನಗಳ ಕಾಲ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದೆ, ಮಧ್ಯಾಹ್ನದ ವೇಳೆಗೆ ಮಳೆ ಬರುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್