Karnataka Weather: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 19ರವರೆಗೂ ಭಾರಿ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 19ರವರೆಗೂ ಭಾರಿ ಮಳೆ
ಮಳೆ

Updated on: Jul 13, 2023 | 7:32 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಸಿದ್ದಾಪುರ, ಸುಳ್ಯ, ಮಾಣಿ,ಮಂಕಿ, ಮಂಗಳೂರು, ಪುತ್ತೂರು, ಶಿವನಿ, ಶಿರಾಲಿ, ಕ್ಯಾಸಲ್​ ರಾಕ್, ಸರಗೂರು, ತುಮಕೂರು, ದಾವಣಗೆರೆ, ಕುಮಟಾ, ಮುಲ್ಕಿ, ಉಪ್ಪಿನಂಗಡಿ, ಧರ್ಮಸ್ಥಳ, ಬೆಳ್ತಂಗಡಿ, ಲಿಂಗನಮಕ್ಕಿ, ಭದ್ರಾವತಿ, ಬೆಂಗಳೂರು ನಗರ, ಬೆಳ್ಳೂರು, ಮದ್ದೂರು, ಚನ್ನಪಟ್ಟಣ, ಕೊಟ್ಟಿಗೆಹಾರ, ಎನ್​ಆರ್​ ಪುರ, ದಾವಣಗೆರೆ, ತಿಪಟೂರಿನಲ್ಲಿ ಮಳೆಯಾಗಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Rains: ಮುಂದಿನ 3 ದಿನಗಳ ಕಾಲ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದೆ, ಮಧ್ಯಾಹ್ನದ ವೇಳೆಗೆ ಮಳೆ ಬರುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us