Bengaluru Rain: ಬೆಂಗಳೂರಿನ ಕೆಲವೆಡೆ ಧಾರಾಕಾರ ಮಳೆ; ರಾಜ್ಯದ ಹವಾಮಾನ ಹೇಗಿದೆ? ಇಲ್ಲಿದೆ ವಿವರ

Bangalore Weather Update: ಬೆಂಗಳೂರಿನಲ್ಲಿ ಕೂಡ ಜೋರು ಮಳೆಯಾಗಿದೆ. ನಗರದ ಕೋರಮಂಗಲ, ಕಾರ್ಪೊರೇಷನ್, ಎಚ್​ಎಎಲ್, ಸಿಲ್ಕ್ ಬೋರ್ಡ್ ಪ್ರದೇಶಗಳಲ್ಲಿ ಕೆಲಹೊತ್ತಿನಿಂದ ಉತ್ತಮ ಮಳೆಯಾಗಿದೆ.

Bengaluru Rain: ಬೆಂಗಳೂರಿನ ಕೆಲವೆಡೆ ಧಾರಾಕಾರ ಮಳೆ; ರಾಜ್ಯದ ಹವಾಮಾನ ಹೇಗಿದೆ? ಇಲ್ಲಿದೆ ವಿವರ
ಕರ್ನಾಟಕ ರಾಜ್ಯ ಹವಮಾನ ವರದಿ
Follow us
TV9 Web
| Updated By: ganapathi bhat

Updated on:Aug 21, 2021 | 10:13 AM

ಬೆಂಗಳೂರು: ರಾಜ್ಯ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಕಳೆದ ಕೆಲವು ಹೊತ್ತಿನಿಂದ ಧಾರಾಕಾರ ಮಳೆಯಾಗುತ್ತಿದೆ. ತೌತೆ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಮುಂತಾದ ಭಾಗಗಳಿಗೆ ತಟ್ಟಿದ್ದು, ಇದೀಗ ಬೆಂಗಳೂರಿನಲ್ಲಿ ಕೂಡ ಜೋರು ಮಳೆಯಾಗಿದೆ. ನಗರದ ಕೋರಮಂಗಲ, ಕಾರ್ಪೊರೇಷನ್, ಎಚ್​ಎಎಲ್, ಸಿಲ್ಕ್ ಬೋರ್ಡ್ ಪ್ರದೇಶಗಳಲ್ಲಿ ಕೆಲಹೊತ್ತಿನಿಂದ ಉತ್ತಮ ಮಳೆಯಾಗಿದೆ. ಇಂದಿರಾನಗರ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಹವಾಮಾನ ಹೀಗಿದೆ ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಇಂದು ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಸದ್ಯ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸೂಚನೆ ಕಂಡುಬಂದಿದೆ. ತೌಕ್ತೆ ಚಂಡಮಾರುತ ಪರಿಣಾಮ ಎರಡು-ಮೂರು ದಿನಗಳಿಂದ ಭಾರೀ ಮಳೆಯಾಗಿತ್ತು. ಸಮುದ್ರದ ಸಮೀಪ ಅಪಾರ ಹಾನಿಯೂ ಸಂಭವಿಸಿತ್ತು. ಇದೀಗ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ.

ಮಲೆನಾಡು ಭಾಗದಲ್ಲಿ ಮೋಡಕವಿದ ವಾತಾವರಣ ಶಿವಮೊಗ್ಗದ ಹಲವೆಡೆ ಗಾಳಿ ಹಾಗೂ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸೂಚನೆ ಲಭ್ಯವಾಗಿದೆ. ಉತ್ತರ ಕನ್ನಡದ ಯಲ್ಲಾಪುರ, ಅಂಕೋಲಾ ಭಾಗದಲ್ಲಿ ಅರ್ಧ ತಾಸಿಗೊಮ್ಮೆ ಮಳೆಯಾಗುತ್ತಿದ್ದು, ದಟ್ಟವಾದ ಮೋಡ ಕವಿದ ವಾತಾವರಣ ಕಂಡುಬಂದಿದೆ.

ಬೆಂಗಳೂರಿನಲ್ಲಿ ಗರಿಷ್ಠ 31 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ 31 ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಲೆನಾಡು ಭಾಗದಲ್ಲಿ ಗರಿಷ್ಠ 31 ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಅರಬ್ಬೀ ಸಮುದ್ರದಲ್ಲಿ ಉಂಟಾದ ತೌಕ್ತೆ ಚಂಡಮಾರುತದ ಪರಿಣಾಮ ಕಳೆದೆರೆಡು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಗಾಲದ ವಾತಾವರಣ ಸೃಷ್ಟಿಯಾಗಿದ್ದು, ಇಂದು ಕೂಡಾ ಮಳೆ ಮುಂದುವರೆದಿದೆ. ಇನ್ನೇನು ಮೇ ತಿಂಗಳ ಅಂತ್ಯಕ್ಕೆ ಮುಂಗಾರು ನೆರೆಯ ಕೇರಳ ರಾಜ್ಯವನ್ನು ಪ್ರವೇಶಿಸಲಿದ್ದು, ಅದಾಗಿ 2-3 ದಿನಗಳಲ್ಲಿ ಕರ್ನಾಟಕಕ್ಕೆ ಬರುವ ಸಾಧ್ಯತೆ ಇರುವುದರಿಂದ ಈ ಬಾರಿಯ ಬೇಸಿಗೆಯ ತಾಪಕ್ಕೆ ಕಡಿವಾಣ ಬಿದ್ದಂತಾಗಿದೆ.

ಇದನ್ನೂ ಓದಿ: Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ

Cyclone Tauktae relief fund: ತೌಕ್ತೆ ಚಂಡಮಾರುತದಿಂದ ಮನೆ ಕುಸಿದರೆ 5 ಲಕ್ಷ, ಬೋಟ್ ದುರಂತದಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Published On - 5:22 pm, Tue, 18 May 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ