AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿರುವ ಕುಮಾರಧಾರ, ನೇತ್ರಾವತಿ: ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಮಳೆ ಜೋರಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳಿಗೆ ಒಳ ಹರಿವು ಹೆಚ್ಚಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿವೆ. ಈ ಹೊತ್ತಿನಲ್ಲಿ ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತಗಳು ಸೂಚನೆ ನೀಡುತ್ತಿವೆ. ಈ ಕುರಿತ ಮಾಹಿತಿ ಇಲ್ಲಿದೆ.

ತುಂಬಿ ಹರಿಯುತ್ತಿರುವ ಕುಮಾರಧಾರ, ನೇತ್ರಾವತಿ: ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ
ಮುಳುಗಡೆಯಾಗಿರುವ ಕುಮಾರಧಾರ ಸ್ನಾನ ಘಟ್ಟ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 27, 2024 | 11:57 AM

Share

ಬೆಂಗಳೂರು, ಜೂನ್​ 27: ಕರ್ನಾಟಕದ ಕರಾವಳಿ (Coastal) ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ (Rain). ಇದರಿಂದ ನದಿಗಳು ತುಂಬಿ ಹರಿಯುತ್ತಿವೆ. ಕುಮಾರಧಾರ (Kumardhara), ಲಕ್ಷ್ಮಣ ತೀರ್ಥ, ಕಾವೇರಿ (Cauvery), ನೇತ್ರಾವತಿ (Nethravathi) ನದಿಗಳು ತುಂಬಿ ಹರಿಯುತ್ತಿರುವುದರಿಂದ ಸ್ಥಳೀಯರು ಮತ್ತು ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ನೇತ್ರವತಿ ನದಿಗೆ ಇಳಿಯದಂತೆ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವತ್ತಿರುವ ಹಿನ್ನೆಲೆಯಲ್ಲಿ ಘಟ್ಟ ಪ್ರದೇಶದಿಂದ ಭಾರಿ ಪ್ರಮಾಣದಲ್ಲಿ ಹರಿದು ನೀರು ಬಂದು, ಜಿಲ್ಲೆಯ ಜೀವನದಿ ನೇತ್ರಾವತಿಗೆ ಸೇರುತ್ತಿದೆ. ಹೀಗಾಗಿ, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಜನ ಎಚ್ಚರಿಕೆಯಿಂದ ಇರಬೇಕು ಮತ್ತು ನದಿ ತೀರದ ಜನರು ಹೊಳೆಯಲ್ಲಿ ಇಳಿಯದಂತೆ ಸೂಚನೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರೌಢಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ರಜೆ ನೀಡಿದೆ.

ಇದನ್ನೂ ಓದಿ: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಮುಂದಿನ 4 ದಿನ ರಣಭೀಕರ ಮಳೆ

ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ

ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ, ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗುತ್ತಿದೆ. ಕುಮಾರಧಾರ ನದಿತೀರದಲ್ಲಿ ಭದ್ರತಾ ಸಿಬ್ಬಂದಿ, ಹೋಮ್ಗರ್ಡ್ಸ್​​​​ಗಳನ್ನು ನಿಯೋಜಿಲಸಾಗಿದೆ.

ತುಂಬಿ ಹರಿಯುತ್ತಿದೆ ಲಕ್ಷ್ಮಣ ತೀರ್ಥ ನದಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಲ್ಲಿ ಮಳೆ ಅಬ್ಬರ ಜೋರಾಗಿದೆ ಭಾರಿ ಮಳೆಗೆ ಲಕ್ಷ್ಮಣ ತೀರ್ಥ ನದಿ ತುಂಬಿ ಹರಿಯುತ್ತಿದೆ. ನದಿಗೆ ಒಳ ಹರಿವು ಅಧಿಕವಾದರೆ ಹನಗೋಡು ಬಳಿ ಇರುವ ಅಣೆಕಟ್ಟು ಮುಳುಗಡೆಯಾಗುವ ಸಾಧ್ಯತೆ ಇದೆ. ಬಳಿಕ ನದಿ ನೀರು ಜಮೀನುಗಳಿಗೆ ನುಗ್ಗಲಿದೆ.

ಕಾವೇರಿ ನದಿಯ ಭಾಗಮಂಡಲ ಸ್ನಾನ ಘಟ್ಟ ಮುಳುಗಡೆ

ಕೊಡಗು ಜಿಲ್ಲೆಯಲ್ಲಿ ಭಾರೀ ವರ್ಷ ಧಾರೆ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಮಡಿಕೇರಿ ತಾಲೂಕಿನ ಭಾಗಮಂಡಲ ತ್ರಿವೇಣಿ ಸಂಗಮ‌ ಜಲಾವೃತಗೊಂಡಿದೆ. ಭಾಗಮಂಡಲ ಸ್ನಾನ ಘಟ್ಟ ಮುಳುಗಡೆಯಾಗಿದೆ. ಇದರಿಂದ ಪವಿತ್ರ ಸ್ನಾನ ಮಾಡಲಾಗದೆ ಭಕ್ತರು ಬೇಸರದಿಂದ ವಾಪಸ್​ ಆಗುತ್ತಿದ್ದಾರೆ. ಭಾಗಮಂಡಲ – ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ

ಮಳೆ ಆರ್ಭಟಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ಸಿದ್ದಾಪುರ ತಾಲೂಕಿನ ಹಸ್ವಿಗುಳಿ ಗ್ರಾಮದಲ್ಲಿ ಗುಡ್ಡ ಕುಸಿತವಾಗಿದೆ. ಗ್ರಾಮದ ವೆಂಕಟರಮಣ ತಿಮ್ಮನಾಯ್ಕ, ಸದಾನಂದ ತಿಮ್ಮ ನಾಯ್ಕ, ಪಾರ್ವತಿ ತಿಮ್ಮನಾಯ್ಕ ಅವರ ಮನೆ ಹಿಂದೆ ಗುಡ್ಡ ಕುಸಿತವಾಗಿದ್ದು, ಅದೃಷ್ಟವಶಾತ್ ಈ ಸಮಯದಲ್ಲಿ​ ಮನೆಯಲ್ಲಿ ಯಾರೂ ಇರಲಿಲ್ಲ. ಇದರಿಂದ ಅನಾಹುತ ತಪ್ಪಿದೆ.

ಜಿಲ್ಲೆಯ 400ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ, ಜಿಲ್ಲಾಡಳಿತ ನಿರ್ಲಕ್ಷಿಸಿದೆ. ಗುಡ್ಡ ಕುಸಿತ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅನುದಾನ ಕೊರತೆ ಇದೆ ಎಂದು ಜಿಲ್ಲಾಡಳಿತ ಅಳಲು ತೋಡಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:56 am, Thu, 27 June 24

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ