Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ
ಮಳೆ
Image Credit source: NDTV

Updated on: Oct 17, 2023 | 7:38 AM

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಗದಗ, ಕೊಪ್ಪಳ, ಕಲಬುರ್ಗಿ, ರಾಯಚೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ತಾಪಮಾನ 2 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ಹಳಿಯಾಳದಲ್ಲಿ ಮಳೆಯಾಗಿದೆ, ಚಿಕ್ಕನಹಳ್ಳಿಯಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆ ಜೋರಾಗಲಿದೆ ವರುಣನ ಆರ್ಭಟ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us